ತಮಿಳುನಾಡಿನ ಕಲ್ಲಾಕುರಿಚಿ ಜಿಲ್ಲೆಯಲ್ಲಿ ನಡೆದ ಕಳ್ಳಭಟ್ಟಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 65ಕ್ಕೆ ಏರಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಇನ್ನು ಭಾನುವಾರ ಸಂಜೆ 4 ಗಂಟೆಯವರೆಗೆ ರಾಜ್ಯಾದ್ಯಂತ 148 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸದ್ಯ ಇಬ್ಬರು ಕಲ್ಲಾಕುರಿಚಿ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುದುಚೇರಿಯಲ್ಲಿ ಆರು ಮಂದಿ, ಸೇಲಂ ಸರಕಾರಿ ಆಸ್ಪತ್ರೆಯಲ್ಲಿ ಎಂಟು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟಾಗಿ 16 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳ್ಳಭಟ್ಟಿ ದುರಂತದಲ್ಲಿ ಜನರ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯೂ) ಈ ಬಗ್ಗೆ ಪರಿಶೀಲನೆ ನಡೆಸಲು ಎನ್‌ಸಿಡಬ್ಲ್ಯೂ ಸದಸ್ಯೆ ಖುಷ್ಬು ಸುಂದರ್ ನೇತೃತ್ವದಲ್ಲಿ ಮೂವರು ಸದಸ್ಯರ ತನಿಖಾ ಸಮಿತಿಯನ್ನು ರಚಿಸಿದೆ.
ಇದನ್ನು ಓದಿದ್ದೀರಾ? ತಮಿಳುನಾಡು ಕಳ್ಳಭಟ್ಟಿ ಸಾರಾಯಿ ದುರಂತ ಅಣ್ಣಾಮಲೈ ಪಿತೂರಿ: ಡಿಎಂಕೆ ನಾಯಕ ಆರೋಪ
ಖುಷ್ಬು ಸುಂದರ್ ನೇತೃತ್ವದ ರಾಷ್ಟ್ರೀಯ ಮಹಿಳಾ ಆಯೋಗದ ಮೂವರು ಸದಸ್ಯರ ನಿಯೋಗವು ತಮಿಳುನಾಡಿನ ಕಲ್ಲಾಕುರಿಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಪ್ರಾಣ ಕಳೆದುಕೊಂಡ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದೆ.
ಇನ್ನು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಕಲ್ಲಾಕುರಿಚಿ ಕಳ್ಳಭಟ್ಟಿ ದುರಂತದ ಸಿಬಿಐ ತನಿಖೆಗೆ ಒತ್ತಾಯಿಸಿ ಮತ್ತು ಡಿಎಂಕೆ ಸರ್ಕಾರದ ಅಸಮರ್ಥತೆಗಾಗಿದ್ದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
#UPADTE | Tamil Nadu | Death toll in the Kallakurichi Hooch Tragedy rises to 59: Kallakurichi District Collectorate https://t.co/DqtAIPSGZJ
— ANI (@ANI) June 25, 2024