ಯುವ ಪೀಳಿಗೆ ಮನಸ್ಸು ಮಾಡಿದರೆ ಯಾವುದೇ ರಂಗದಲ್ಲಿ ಬದಲಾವಣೆ ತರಲು ಸಾಧ್ಯ: ತುಷಾರ್ ಗಿರಿನಾಥ್

Date:

Advertisements
  • ಯುವಕರು ಎಲ್ಲರಲ್ಲೂ ಮತದಾನದ ಅರಿವು ಮೂಡಿಸಬೇಕು
  • ಎಲ್ಲರೂ ತಪ್ಪದೆ ಮತದಾನ ಮಾಡುವಂತೆ ಮಾಡಬೇಕು

ಯುವ ಪೀಳಿಗೆ ಮನಸ್ಸು ಮಾಡಿದಲ್ಲಿ ಯಾವುದೇ ರಂಗದಲ್ಲಾಗಲಿ ಬದಲಾವಣೆ ತರಲು ಸಾಧ್ಯ. ಸಮಾಜದಲ್ಲಿ ಬದಲಾವಣೆಗಳನ್ನು ತರಲು ಯುವಕರಿಂದ ಮಾತ್ರ ಸಾಧ್ಯವಿದ್ದು, ಅದರ ಪ್ರಾಮುಖ್ಯತೆಯನ್ನು ಅರಿತು ಮತದಾನದ ದಿನ ಎಲ್ಲರಿಂದಲೂ ಮತದಾನ ಮಾಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು.

ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮಹದೇವಪುರ ವಲಯ ಚಿಕ್ಕಬೆಳ್ಳಂದೂರಿನಲ್ಲಿರುವ ಕೃಪಾನಿಧಿ ಗ್ರೂಫ್ ಆಪ್ ಇನ್ಸ್ಟಿಟ್ಯೂಷನ್ ಕಾಲೇಜಿನಲ್ಲಿ ಯುವ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

“ನಗರದಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಹಲವಾರು ವಿಧಾನಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನಾಗರಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಮತದಾನದ ಪ್ರಾಮುಖ್ಯತೆಯ ಬಗ್ಗೆ ಯುವಕರು ಎಲ್ಲರಲ್ಲೂ ಅರಿವು ಮೂಡಿಸಿ ಎಲ್ಲರೂ ತಪ್ಪದೆ ಮತದಾನ ಮಾಡುವಂತೆ ಮಾಡಬೇಕು” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಇಂದಿನಿಂದ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ

“ತಮ್ಮ ಮನೆಯಲ್ಲಿರುವ ಹಾಗೂ ಅಕ್ಕ-ಪಕ್ಕದ ಮನೆಯವರಲ್ಲಿ ಮತದಾನದ ಕುರಿತು ತಿಳುವಳಿಕೆ ನೀಡಿ ಉತ್ತಮ ಅಭ್ಯರ್ಥಿಗೆ ಮತದಾನ ಮಾಡಲು ತಿಳಿಸಬೇಕು” ಎಂದರು.

ಈ ವೇಳೆ ವಲಯ ಆಯುಕ್ತ ಡಾ. ತ್ರಿಲೋಕ್ ಚಂದ್ರ, ಸ್ವೀಪ್ ನೋಡಲ್ ಅಧಿಕಾರಿಯಾದ ಸಿದ್ದೇಶ್ವರ್, ವಲಯ ಉಪ ಆಯುಕ್ತರಾದ ಸರೋಜಾದೇವಿ, ಕಾಲೇಜು ಪ್ರಾಂಶುಪಾಲರು, ಪ್ರಾಧ್ಯಾಪಕರು ವಿದ್ಯಾರ್ಥಿಗಳು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X