ಗದಗ | ಎಸ್‌ಎಫ್‌ಸಿ ವಿಶೇಷ ಅನುದಾನ ಅವೈಜ್ಞಾನಿಕ ಬಳಕೆ; ಸಂತೋಷ್ ಹಿರೇಮನಿ ತನಿಖೆಗೆ ಆಗ್ರಹ

Date:

Advertisements

ಗದಗ ಜಿಲ್ಲೆಯ ಮುಂಡರಗಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಎಸ್‌ಎಫ್‌ಸಿ ವಿಶೇಷ ಅನುದಾನ ಕಾಂಗ್ರೆಸ್ ವಾರ್ಡ್‌ಗಳಿಗೆ ಹಂಚಿಕೆಯಾಗದೆ ಅವೈಜ್ಞಾನಿಕವಾಗಿ ಬಳಕೆ ಮಾಡುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ತನಿಖೆಗೆ ಒಳಪಡಿಸಬೇಕು ಎಂದು ಪುರಸಭೆ ಸದಸ್ಯ ಸಂತೋಷ್ ಹಿರೇಮನಿ ಮನವಿ ಮಾಡಿದರು.

ಪತ್ರಿಕೆ ಹೇಳಿಕೆ ನೀಡಿರುವ ಅವರು, “ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಅನುದಾನವನ್ನು ಸರಿಸಮವಾಗಿ ಹಂಚಿಕೆ ಮಾಡಿ, ಪ್ರತಿ ವಾರ್ಡ್‌ಗಳಿಗೆ ನ್ಯಾಯ ಒದಗಿಸಬೇಕು. ಮುಂಡರಗಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಶಿರೋಳ ಗ್ರಾಮದ ಹತ್ತಿರವಿರುವ 25 ಎಕರೆ ಜಮೀನಿನ ಹಕ್ಕುಪತ್ರ ಬಹುಬೇಗನೆ ಬಡವರಿಗೆ ಹಂಚಿಕೆ ಆಗಬೇಕು. ಸುಮಾರು ವರ್ಷಗಳಾದರೂ ಬಡವರು ನೆಲೆಗೊಳ್ಳಲು ಆಶ್ರಯ ಇಲ್ಲದಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ದಲಿತ ಚಳವಳಿ- 50; ನ.23, 24ರಂದು ಸಮಾವೇಶ ನಡೆಸಲು ನಿರ್ಧಾರ

Advertisements

“ಜಿಲ್ಲಾಧಿಕಾರಿಯವರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡು ಬಡವರಿಗೆ ವೈಜ್ಞಾನಿಕವಾಗಿ ಮೀಸಲಾತಿ ಪ್ರಕಾರ ಹಂಚಿಕೆಯಾಗಬೇಕು. ಒಂದು ವೇಳೆ ಕ್ರಮ ಕೈಗೊಳ್ಳದಿದ್ದರೆ ಪುರಸಭೆ ಎದುರು ಹೋರಾಟ ಕೈಗೊಳ್ಳಲಾಗುವುದು” ಎಂದು ಮುಂಡರಗಿ ಪುರಸಭೆ ಸದಸ್ಯ ಸಂತೋಷ್ ಹಿರೇಮನಿ ಎಚ್ಚರಿಕೆ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X