ರಾಹುಲ್ ಗಾಂಧಿ ಹೇಳಿಕೆ ಅರ್ಥೈಸಿಕೊಳ್ಳುವಲ್ಲಿ ಬಿಜೆಪಿ ವಿಫಲ: ಸಚಿವ ಪರಮೇಶ್ವರ್

Date:

Advertisements

“ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗಳನ್ನು ಎಲ್ಲಿಯವರೆಗೆ ಬಿಜೆಪಿಯವರಿಗೆ ಅರ್ಥ ಮಾಡಿಕೊಳ್ಳಲು ಆಗುವುದಿಲ್ಲವೋ, ಅಲ್ಲಿಯವರೆಗೂ ಅವರು ಗೊಂದಲದಲ್ಲಿರುತ್ತಾರೆ” ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಹೇಳಿದರು‌.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹಿಂದೂ ಧರ್ಮ ಎಲ್ಲರನ್ನು ಒಗ್ಗೂಡಿಸಿ ಶಾಂತಿ, ನೆಮ್ಮದಿಯಿಂದ ಸಮಾಜದ ಎಲ್ಲ ವರ್ಗವನ್ನು ಮುನ್ನಡೆಸಿಕೊಂಡು ಹೋಗಬೇಕಾದ ಸಾರಾಂಶ ಹೊಂದಿದೆ. ಇದಕ್ಕೆ ವಿರುದ್ಧವಾಗಿ ಇರುವವರು ಹಿಂದುಗಳಲ್ಲ ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ಆ ರೀತಿ ಯಾರು ಇರುತ್ತಾರೋ ಅವರಿಗೆ ಅನ್ವಯಿಸುತ್ತದೆ ಎಂಬರ್ಥದಲ್ಲಿ ಹೇಳಿದ್ದಾರೆ‌. ಬಿಜೆಪಿಯವರು ರಾಹುಲ್ ಗಾಂಧಿಯವರ ಭಾಷಣ ಅರ್ಥ ಮಾಡಿಕೊಂಡಿಲ್ಲ‌ ಎಂಬುದು ಸ್ಪಷ್ಟವಾಗಿದೆ” ಎಂದರು.

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಬದಲಾವಣೆ ವಿಚಾರ ಕುರಿತು ಮಾತನಾಡಿ, “ನಾನು ಸಿಎಂ ಅವರನ್ನು ಪ್ರತಿದಿನ ಭೇಟಿ ಮಾಡುತ್ತೇನೆ. ಇಲಾಖೆಯ ಅನೇಕ ವಿಚಾರಗಳನ್ನು ಅವರ ಗಮನಕ್ಕೆ ತಂದು ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ. ಸರ್ಕಾರದಲ್ಲಿ ಅನೇಕ ತೀರ್ಮಾನಗಳನ್ನು ಮಾಡುವಂತಹ ಸಂದರ್ಭದಲ್ಲಿ ಅವರೊಂದಿಗೆ ಚರ್ಚಿಸಬೇಕಾಗುತ್ತದೆ” ಎಂದು ಹೇಳಿದರು‌.

Advertisements

ಸಿಎಂ, ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆ ನೀಡುವವರಿಗೆ ಡಿ ಕೆ ಶಿವಕುಮಾರ್ ನೋಟಿಸ್ ಜಾರಿ ಮಾಡುವ ಕುರಿತ ಪ್ರಶ್ನೆಗೆ ಪ್ರತಿಕ್ರಿತಿಯಿಸಿ, “ನೋಟಿಸ್ ನೀಡುವುದು ಅಧ್ಯಕ್ಷರು ಮಾಡುವ ಕೆಲಸ. ಕಾರ್ಯಕರ್ತರು, ಶಾಸಕರು, ಸಚಿವರು ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು ಎಂಬುದಾಗಿ ಹೇಳಿದ್ದಾರೆ ಎಂಬರ್ಥದಲ್ಲಿ ಅರ್ಥೈಸಿಕೊಂಡಿದ್ದೇನೆ. ಪಕ್ಷದ ಮತ್ತು ಅಧ್ಯಕ್ಷರ ದೃಷ್ಟಿಯಲ್ಲಿ ಸರಿ ಇಲ್ಲ ಎಂಬುದು ಕಂಡು ಬಂದರೆ ಅವರು ತೀರ್ಮಾನ ಕೈಗೊಳ್ಳುತ್ತಾರೆ” ಎಂದರು.

“ರಾಜ್ಯಮಟ್ಟದಲ್ಲಿ ಸತ್ಯಶೋಧನೆ ಸಮಿತಿಯನ್ನು ಮಾಡಿಕೊಳ್ಳಬಹುದು. ಕೆಪಿಸಿಸಿ ಅಧ್ಯಕ್ಷರಾದವರು ಮಾಡುವ ಜವಾಬ್ಧಾರಿ ಇದು. ಎಐಸಿಸಿಯವರು ದೇಶ ಮಟ್ಟದಲ್ಲಿ ಸತ್ಯಶೋಧನ ಸಮಿತಿ ಮಾಡಿದ್ದಾರೆ. ನಾನು ಸಹ ಈ ಹಿಂದೆ ಸತ್ಯಶೋಧನಾ ಸಮಿತಿಯನ್ನು ನೇಮಕ ಮಾಡಿದ್ದೆ. ಎಐಸಿಸಿ ಸತ್ಯಶೋಧನಾ ಸಮಿತಿ ಜುಲೈ 10 ಅಥವಾ 12ರಂದು ರಾಜ್ಯಕ್ಕೆ ಭೇಟಿ ನೀಡಲಿದೆ” ಎಂದು ತಿಳಿಸಿದರು.

ಹೊಸ ಕಾನೂನು ಚರ್ಚೆಯಾಗಬೇಕು

ಹೊಸ ಮೂರು ಅಪರಾಧ ಕಾನೂನು ಜಾರಿಯಾಗಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, “ಹೊಸ ಕಾನೂನುಗಳು ಒಂದು ರಾಜ್ಯಕ್ಕೆ ಮಾತ್ರ ಸಂಬಂಧಪಟ್ಟಿದ್ದರೆ ವಾಪಸ್ ಪಡೆಯುವಂತೆ ಹೇಳಬಹುದಿತ್ತು. ಇದು ಇಡೀ ದೇಶಕ್ಕೆ ಸಂಬಂಧಿಸಿದ್ದು. ಹೊಸ ಕಾನೂನು ಅಡಿ ರಾಜ್ಯದಲ್ಲಿ 80 ಪ್ರಕರಣಗಳು, ಬೆಂಗಳೂರು ನಗರದಲ್ಲಿ 25ಕ್ಕೂ ಹೆಚ್ಚು ಪ್ರಕರಣಗಳು ನಿನ್ನೆ ದಾಖಲಾಗಿವೆ. ಮುಂದೆ ಲಕ್ಷಾಂತರ ಕೇಸ್‌ಗಳು ದಾಖಲಾಗುತ್ತವೆ. ಇದೆಲ್ಲವನ್ನು ಹೊಸ ಕಾನೂನಿನ ಅಡಿ ದಾಖಲಿಸಬೇಕು‌. ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದ್ದು ಕಲಿತುಕೊಳ್ಳುತ್ತಾರೆ” ಎಂದರು.

ಉಪವಾಸ ಸತ್ಯಾಗ್ರಹ ಮಾಡಿದರೆ ಆತ್ಮಹತ್ಯೆ ಪ್ರಕರಣ ದಾಖಲಾಗುವ ಕುರಿತು ಮಾತನಾಡಿ, “ಹೀಗೆ ಅನೇಕ ವಿಚಾರಗಳ ಕುರಿತು ಡಿಬೇಟ್ ಮಾಡಬಹುದು. ಕೆಲವು ಉತ್ತಮವಾದ ಅಂಶಗಳು ಇವೆ.‌ ಎಲ್ಲವನ್ನು ತೆಗೆದು ಹಾಕಲು ಆಗುವುದಿಲ್ಲ. ಬ್ರಿಟಿಷ್ ಕಾಲದಲ್ಲಿ ಇದ್ದ ಕಾನೂನುಗಳನ್ನು ಬದಲಾವಣೆ ಮಾಡಿ, ಆಧುನಿಕ ಜಗತ್ತಿಗೆ ಬೇಕಾದ ಕಾನೂನುಗಳನ್ನು ಅಳವಡಿಸಲಾಗಿದೆ” ಎಂದು ತಿಳಿಸಿದರು‌.

“ನಾವು ಕೆಲವು ವ್ಯಕ್ತಿಗಳನ್ನು ಬಂಧಿಸಿ, ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ತನಿಖೆ ನಡೆಯುತ್ತಿದೆ. ಅಂತವುಗಳನ್ನು ಬಿಟ್ಟು ಬಿಡಬೇಕು ಎಂದು ಹೊಸ ಕಾನೂನಿನಲ್ಲಿ ಬಂದಿದೆ. ಮುಂದೆ ಅಂತಹ ಪ್ರಕರಣ ಬಂದಾಗ ದಾಖಲಿಸಬೇಡಿ ಎಂಬ ಲೆಕ್ಕದಲ್ಲಿವೆ. ಆದ್ದರಿಂದ ಇಂತಹ ವಿಚಾರಗಳ ಬಗ್ಗೆ ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ತಿಳಿಸಬೇಕಾಗುತ್ತದೆ. ಇದರಂತೆ ಸರಿಪಡಿಸಿಕೊಳ್ಳಬೇಕು” ಎಂದು ಅಭಿಪ್ರಾಯಪಟ್ಟರು.

ಮೂಡ ಅಕ್ರಮ: ಪೊಲೀಸ್‌ ತನಿಕೆ

ಮೂಡ ಅಕ್ರಮದ ಕುರಿತು ಮಾತನಾಡಿ, “ಸಾಕ್ಷ್ಯಗಳನ್ನು ನಾಶ ಮಾಡುತ್ತಾರೆ ಎಂಬ ಕಾರಣದಿಂದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತದೆ. ಆರೋಪಗಳು ಕೇಳಿ ಬಂದಾಗ ನಡೆಯುವ ಸಾಮಾನ್ಯ ಪ್ರಕ್ರಿಯೆ ಇದು‌. ಮುಂದೆ ಇಲಾಖಾ ವಿಚಾರಣೆಯಲ್ಲಿ ಅಕ್ರಮ ನಡೆದಿರುವುದು ಕಂಡು ಬಂದರೆ, ಪೊಲೀಸ್ ತನಿಖೆಗೆ ವಹಿಸುವ ಬಗ್ಗೆ ಅವರು ತೀರ್ಮಾನ ಮಾಡುತ್ತಾರೆ” ಎಂದು ಹೇಳಿದರು.

ವಿಶೇಷ ಸತ್ಕಾರವಿಲ್ಲ

ನಟ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡುತ್ತಿರುವ ಆರೋಪದ ಕುರಿತು ಮಾತನಾಡಿ, “ದರ್ಶನ್‌ಗೆ ಜೈಲಿನಲ್ಲಿ ಯಾವುದೇ ರೀತಿಯ ವಿಶೇಷ ಸತ್ಕಾರ ಕೊಡುತ್ತಿಲ್ಲ. ಇದರ ಬಗ್ಗೆ ಅಂದೇ ಸ್ಪಷ್ಟಪಡಿಸಿದ್ದೇನೆ. ಬಿರಿಯಾನಿ ಕೊಡುತ್ತಿಲ್ಲ. ಬೇಕಾದರೆ ನನ್ನ ಜತೆ ಬನ್ನಿ, ಕರೆದುಕೊಂಡು ಹೋಗಿ ತೋರಿಸುತ್ತೇನೆ” ಎಂದು ಸ್ಪಷ್ಟಪಡಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X