ವಚನ ಸಾಹಿತ್ಯವನ್ನು ಮುಂದಿನ ತಲೆಮಾರಿಗೆ ದಾಟಿಸಿದ್ದರಲ್ಲಿ ಹಳಕಟ್ಟಿಯವರ ಕೊಡುಗೆ ಅಪಾರ: ಸಿಎಂ ಸಿದ್ದರಾಮಯ್ಯ

Date:

Advertisements

“ಬಸವಾದಿ ಶರಣರ ವಚನ ಸಾಹಿತ್ಯಗಳ ಆಶಯದಂತೆ ನಾವು ಮನುಷ್ಯರಾಗಿ, ಪರಸ್ಪರ ಮನುಷ್ಯರನ್ನು ಪ್ರೀತಿಸುವಂತಾಗಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಡಾ.ಫ.ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

“ವಚನ ಸಾಹಿತ್ಯವನ್ನು ಮುಂದಿನ ತಲೆಮಾರಿಗೆ ದಾಟಿಸಿದ್ದರಲ್ಲಿ ಹಳಕಟ್ಟಿಯವರ ಕೊಡುಗೆ ಅಪಾರ. ವಚನ ಮತ್ತು ದಾಸ ಸಾಹಿತ್ಯ ಕನ್ನಡ ಸಾಹಿತ್ಯದ ಮೇರು ಕೊಡುಗೆ. ವಚನ ಸಾಹಿತ್ಯ ಜನಸಾಮಾನ್ಯರಿಗೆ ಅತ್ಯಂತ ಸುಲಭವಾಗಿ ಅರ್ಥ ಆಗುವ ಜನಸಾಮಾನ್ಯರ ಭಾಷೆಯಲ್ಲಿದ್ದವು. ಅದಕ್ಕೂ ಮೊದಲು ಜನ ಸಾಮಾನ್ಯರಿಗೆ ಗೊತ್ತಿಲ್ಲದ, ಜನಸಾಮಾನ್ಯರಿಗೆ ಅರ್ಥವಾಗದ ಭಾಷೆಯಲ್ಲಿ ಧರ್ಮವನ್ನು ಪ್ರಚಾರ ಮಾಡಲಾಗುತ್ತಿತ್ತು. ಜನಸಾಮಾನ್ಯರ ಭಾಷೆಯಲ್ಲಿ ಜನರಿಗೆ ಹತ್ತಿರ ಇದ್ದುದರಿಂದಲೇ ಬಸವಣ್ಣ ಜನಸಮುದಾಯದೊಳಗೆ ಬೆರೆತುಹೋದರು” ಎಂದು ವಿಶ್ಲೇಷಿಸಿದರು.

Advertisements

“ಹಳಕಟ್ಟಿಯವರು ವಚನ ಸಾಹಿತ್ಯವನ್ನು ಸಂಶೋಧನೆ ಮತ್ತು ಅಧ್ಯಯನಗಳ ಮೂಲಕ ಮುಂದಿನ ತಲೆಮಾರಿಗೆ ತಲುಪಿಸಿದರು. ಏಕೀಕರಣ ಚಳವಳಿಯಲ್ಲೂ ಭಾಗವಹಿಸಿದ್ದ ಹಳಕಟ್ಟಿಯವರು ಪತ್ರಕರ್ತರಾಗಿ, ವಕೀಲರಾಗಿ, ಸಾಹಿತಿಯಾಗಿ ನಾನಾ ಕ್ಷೇತ್ರಗಳಲ್ಲಿ ಶ್ರಮಿಸಿದವರು” ಎಂದು ಸಿಎಂ ಮೆಚ್ಚುಗೆ ಸೂಚಿಸಿದರು.‌

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಇಲಾಖೆಯ ನಿರ್ದೇಶಕಿ ಧರಣೀದೇವಿ ಮಾಲಗತ್ತಿ , ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಗರಾಜಮೂರ್ತಿ ಸೇರಿ ಹಲವರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X