ಪ್ರವಾಹ, ಬರಗಾಲಕ್ಕೆ ಕಾರಣ ತಿಳಿಯಲು ಸಂಶೋಧನೆಗಳ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ

Date:

Advertisements

ಕಳೆದ 20 ವರ್ಷಗಳಲ್ಲಿ ಪ್ರವಾಹ ಹಾಗೂ ಬರಗಾಲವನ್ನು ನಾವು ಎದುರಿಸುತ್ತಿದ್ದು, ಈ ಬಗ್ಗೆ ವೈಜ್ಞಾನಿಕ ಕಾರಣ ತಿಳಿಯಲು ಸಂಶೋಧನೆಗಳ ಅಗತ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಭೂ ಪರಿವರ್ತನೆ ಮತ್ತು ಒಣಭೂಮಿ ನಿರ್ವಹಣೆ’ ಕಾರ್ಯಕ್ರಮ ಉದ್ಘಾಟಿಸಿ, ರಾಜ್ಯ ಪರಿಸರ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

“ಸಂಶೋಧನೆಗಳು ಸರಿಯಾದ ದಾರಿಯಲ್ಲಿ ನಡೆಯಬೇಕು ಹಾಗೂ ಸಂಶೋಧನಾ ಕೇಂದ್ರಗಳೂ ಹೆಚ್ಚಾಗಬೇಕು. ಯಾವ ಭಾಗದಲ್ಲಿ ಯಾವ ರೀತಿ ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಬೇಕೆನ್ನುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಗಮನ ಹರಿಸಬೇಕು” ಎಂದು ಸಿಎಂ ಸೂಚಿಸಿದರು.

Advertisements

“ಪ್ರತಿಯೊಬ್ಬರೂ ನಿಸರ್ಗವನ್ನು ಪ್ರೀತಿಸಿ ರಕ್ಷಿಸಬೇಕು. ಇದೊಂದು ಕಷ್ಟದ ಕೆಲಸವೇನಲ್ಲ ಆದರೆ ಎಲ್ಲರೂ ಮನಸ್ಸು ಮಾಡಬೇಕು. ಪ್ರತಿದಿನವೂ ಪರಿಸರ ದಿನವನ್ನಾಗಿ ಆಚರಿಸುವ ಪ್ರವೃತ್ತಿ ಅಗತ್ಯ. ತಾಜ್ಯಗಳ ಸೂಕ್ತ ವಿಲೇವಾರಿ, ಮಳೆ ನೀರು ಕೊಯ್ಲು ಮುಂತಾದ ಪದ್ದತಿಗಳನ್ನು ಅಳವಡಿಸಿಕೊಳ್ಳಬೇಕು. ಇದರಿಂದ ನಮ್ಮ ಆರೋಗ್ಯವನ್ನೂ ಕಾಪಾಡಿಕೊಳ್ಳಲು ಅನುಕೂಲ. ಎಲ್ಲರೂ ಪರಿಸರ ಪ್ರೇಮಿಗಳಾಗಿ ನೈರ್ಮಲ್ಯ ಕಾಪಾಡಿಕೊಳ್ಳೋಣ” ಎಂದರು.

“ಪ್ರತಿಯೊಬ್ಬರೂ ಪಾಲ್ಗೊಂಡರೆ ಮಾತ್ರ ಪರಿಸರವನ್ನು ಸಂರಕ್ಷಣೆ ಮಾಡಲು ಸಾಧ್ಯ. ಸರ್ಕಾರ ಮತ್ತು ಸಾರ್ವಜನಿಕರು ಒಟ್ಟಾಗಿ ಈ ನಿಟ್ಟಿನಲ್ಲಿ ಕೈಜೋಡಿಸಬೇಕು. ವಿದ್ಯಾರ್ಥಿ ದೆಸೆಯಿಂದಲೇ ಪರಿಸರ ಸಂರಕ್ಷಣೆಯ ಲಾಭಗಳೇನು ಎಂದು ತಿಳಿಸಿ ವಿದ್ಯಾರ್ಥಿಗಳು ಪರಿಸರ, ಕಾಡು, ಜನಜೀವನ, ಪ್ರಾಣಿ ಸಂಕುಲಗಳ ಬಗ್ಗೆ ಅರಿತುಕೊಳ್ಳಬೇಕು. ಮನುಷ್ಯರು ಬದುಕುವಂತೆ ಪ್ರಾಣಿ ಸಂಕುಲಕ್ಕೂ ಬದುಕುವ ಹಕ್ಕಿದೆ. ಅದನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ” ಎಂದು ಹೇಳಿದರು.

“ಆರೋಗ್ಯಕ್ಕೂ ನೈರ್ಮಲ್ಯಕ್ಕೂ ನೇರ ಸಂಬಂಧವಿದೆ. ಸ್ವಚ್ಛತೆ ಇದ್ದಾಗ ಮಾತ್ರ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯ. ಶುದ್ಧ ಕುಡಿಯುವ ನೀರು ಸರಬರಾಜು ಸರ್ಕಾರದ ಕರ್ತವ್ಯ. ಇತ್ತೀಚೆಗೆ ಕಲುಷಿತ ನೀರಿನಿಂದಾಗಿರುವ ಅನಾಹುತಗಳನ್ನು ನಾವು ನೋಡಿದ್ದೇವೆ. ಅನೇಕರು ಸಾವಿಗೀಡಾಗಿದ್ದು, ಕಾಯಿಲೆಗಳಿಗೂ ಒಳಗಾಗಿದ್ದಾರೆ. ಶುದ್ಧ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಡೆಂಘೀ ನಿಯಂತ್ರಣಕ್ಕೆ ಸಾರ್ವಜನಿಕರೂ ಕೈಜೋಡಿಸಬೇಕು

“ಇತ್ತೀಚೆಗೆ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದರ ನಿಯಂತ್ರಣಕ್ಕೆ ನಗರಪಾಲಿಕೆ, ಆರೋಗ್ಯ ಇಲಾಖೆ, ಪೌರಾಡಳಿತ ಇಲಾಖೆಗಳ ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರೂ ಕೈಜೋಡಿಸಿದಾಗ ಮಾತ್ರ ಇದರ ನಿರ್ಮೂಲನೆ ಸಾಧ್ಯ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X