ಪ್ರಮುಖ ಬೆಳವಣಿಗೆಯೊಂದರಲ್ಲಿ, ರಾಂಚಿಯ ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಹೇಮಂತ್ ಸೊರೇನ್ ಅವರು ಪುನಃ ಜಾರ್ಖಂಡ್‌ನ ಮುಖ್ಯಮಂತ್ರಿಯಾಗುವ ಸಂಭವವಿದೆ.
ಬಲ್ಲ ಮೂಲಗಳ ಪ್ರಕಾರ, ಮೈತ್ರಿ ಒಕ್ಕೂಟದ ಶಾಸಕರು ಮುಖ್ಯಮಂತ್ರಿ ಬದಲಾವಣೆಗೆ ತಮ್ಮ ಒಮ್ಮತ ತಿಳಿಸಲು ಈಗಾಗಲೇ ರಾಂಚಿಗೆ ತಲುಪಿದ್ದಾರೆ. ಹೇಮಂತ್ ಸೊರೇನ್ ಪುನಃ ಸಿಎಂ ಆದರೆ ಮೂರನೇ ಬಾರಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಆಯ್ಕೆಯಾಗದಂತಾಗುತ್ತದೆ.
ಹಾಲಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರಿಗೆ ಯುಪಿಎ ಸಂಯೋಜನಾ ಸಮಿತಿಯ ಅಧ್ಯಕ್ಷ ಹಾಗೂ ಜೆಎಂಎಂ ಕಾರ್ಯಾಧ್ಯಕ್ಷ ಸ್ಥಾನ ನೀಡುವ ಸಾಧ್ಯತೆಯಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗಾಯ ನೆಕ್ಕಿಕೊಳ್ಳುತ್ತಿರುವ ಮೋದಿ ಎಚ್ಚರಿಕೆ- ಹೊಸ ದಮನ ದಾಳಿ ದಸ್ತಗಿರಿಗಳ ಮುನ್ಸೂಚನೆ
ಮೂಲಗಳ ಪ್ರಕಾರ, ಇಂಡಿಯಾ ಒಕ್ಕೂಟದ ಶಾಸಕರು ರಾಜ್ಯಪಾಲರಾದ ಸಿ ಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿದ ನಂತರ ಚಂಪೈ ಸೊರೆನ್ ತಮ್ಮ ರಾಜೀನಾಮೆ ಸಲ್ಲಿಸಲಿದ್ದಾರೆ ಎನ್ನಲಿದ್ದಾರೆ. ತರುವಾಯು ಹೇಮಂತ್ ಸೊರೆನ್ ಸರ್ಕಾರ ರಚನೆಗೆ ಹಕ್ಕು ಸಾಧಿಸಲಿದ್ದಾರೆ. ಅದಕ್ಕೂ ಮೊದಲು ಜೆಎಂಎಂ ಶಾಸಕಾಂಗ ಪಕ್ಷ ಹಾಗೂ ಎನ್‌ಡಿಎ ಒಕ್ಕೂಟದ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಲಿದ್ದಾರೆ.
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಭೂ ಹಗರಣ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾದ ನಂತರ ಮೊದಲ ಬಾರಿಗೆ ತಮ್ಮ ನಿವಾಸದಲ್ಲಿ ಮೈತ್ರಿ ಪಕ್ಷವನ್ನು ಒಳಗೊಂಡು ಎಲ್ಲ ಪಕ್ಷದ ಶಾಸಕರ ಸಭೆಯನ್ನು ಕರೆದಿದ್ದಾರೆ.
ಇವೆಲ್ಲ ಬೆಳವಣಿಗೆಳ ನಡುವೆ ಇನ್ನೆರೆಡು ಮೂರು ದಿನದಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಇದರ ಹೊರತಾಗಿಯೂ ಜೈಲಿನಿಂದ ಬಿಡುಗಡೆಯಾದ ನಂತರ ಹೇಮಂತ್ ಸೊರೇನ್ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ಸಕ್ರಿಯರಾಗಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.
