ಮುಡಾ ಹಗರಣ | ಮುಖ್ಯಮಂತ್ರಿಗಳ ಬಟ್ಟೆ ಪರಿಶುದ್ಧವಾಗಿದ್ದರೆ ಸಾಕಾ: ಸಿ ಟಿ ರವಿ ಪ್ರಶ್ನೆ

Date:

Advertisements

ಮುಖ್ಯಮಂತ್ರಿಗಳ ಬಟ್ಟೆ ಪರಿಶುದ್ಧವಾಗಿದ್ದರೆ ಸಾಕಾ? ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ ಹಗರಣ) ಮೋಸ ಮಾಡಿರುವವರು ಸಿದ್ದರಾಮಯ್ಯಗೆ ಹತ್ತಿರವಾಗಿರುವವರು. ಅದಕ್ಕೆ ಸಿಎಂ ರಾಜೀನಾಮೆ ಕೊಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಸಿ ಟಿ ರವಿ ಆಗ್ರಹಿಸಿದರು.

ಬೆಂಗಳೂರಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿ, “ಭೂಮಿ ವಶಪಡಿಸಿಕೊಳ್ಳಬೆಕಾದರೆ 50:50 ನಿವೇಶನ ಕೊಡಬೇಕಾಗುತ್ತದೆ. ಸರ್ಕಾರಕ್ಕೆ ಮೋಸ ಮಾಡಬೇಕೆಂದೇ ವ್ಯವಸ್ಥಿತವಾಗಿ ಮಾಡಿದ್ದಾರೆ” ಎಂದು ಆರೋಪಿಸಿದರು.

ಭ್ರಷ್ಟಾಚಾರ ಯಾರ ಅವಧಿಯಲ್ಲಿ ಆಗಿದ್ದರೂ ಕ್ರಮ ಕೈಗೊಳ್ಳಿ. ಬಿಜೆಪಿ ಕಾಲದಲ್ಲಿ ಅಕ್ರಮ ಆಗಿದ್ದರೂ ಕ್ರಮ‌ ತೆಗೆದುಕೊಳ್ಳಿ. ಸಿಎಂ ತವರು ಜಿಲ್ಲೆಯಲ್ಲಿಯೇ ಸಾವಿರಾರು ಕೋಟಿ ಅಕ್ರಮ ಆಗಿದೆ. ಸಿಎಂ ಸಿದ್ದರಾಮಯ್ಯನವರು ತಮ್ಮ ಪರಿಶುದ್ಧತೆಯನ್ನು ಸಾಬೀತುಪಡಿಸಲು ರಾಜೀನಾಮೆ ಒಂದೇ ದಾರಿ. ದಾಖಲೆ‌ ಇಟ್ಟು ಭ್ರಷ್ಟಾಚಾರ ಜನರ ಮುಂದೆ ಬಯಲಿಗೆಳೆಯುತ್ತೇವೆ” ಎಂದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X