ನಿಗದಿತ ಲೀಟರ್‌ಗಿಂತ ಕಡಿಮೆ ಪ್ರಮಾಣದಲ್ಲಿ ಪೆಟ್ರೋಲ್ ನೀಡುವ ಮೂಲಕ ವಂಚಿಸಿರುವ ಆರೋಪ ಪೆಟ್ರೋಲ್ ಬಂಕ್ ಮಾಲೀಕರೋರ್ವರ ವಿರುದ್ಧ ಕೇಳಿಬಂದಿದೆ.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಪಟ್ಟಣದ ಪೆಟ್ರೋಲ್ ಬಂಕ್‌ನಲ್ಲಿ ವಂಚನೆ ನಡೆಸುತ್ತಿರುವುದಾಗಿ ಗ್ರಾಹಕರು ಆರೋಪಿಸಿದ್ದಾರೆ.
ಹುಳಿಯಾರು ಪಟ್ಟಣದ ಕನಕ ವೃತ್ತದ ಬಳಿ ಇರುವ ಪೆಟ್ರೋಲ್ ಬಂಕ್‌ನಲ್ಲಿ ನಿಗದಿತ ಲೀಟರ್‌ಗಿಂತ ಕಡಿಮೆ ಪ್ರಮಾಣದಲ್ಲಿ ಪೆಟ್ರೋಲ್ ನೀಡುವ ಮೂಲಕ ಮೋಸ ಮಾಡಲಾಗುತ್ತಿದೆ. 510 ರೂಗೆ ಕೇವಲ ಒಂದು ಲೀಟರ್ ಪೆಟ್ರೋಲ್ ನೀಡಿ ವಂಚನೆ ಮಾಡಲಾಗಿದೆ ಎಂದು ಬೈಕ್‌ಗೆ ಪೆಟ್ರೋಲ್ ತುಂಬಿಸಿಕೊಂಡ ಗ್ರಾಹಕರೋರ್ವರು ಆರೋಪ ಮಾಡಿದ್ದಾರೆ. ಅಲ್ಲದೇ, ಲೀಟರ್ ಅಳತೆ ಮಾಪನದಲ್ಲಿ ಹಾಕಿ, ಪ್ರದರ್ಶಿಸಿದ್ದಾರೆ.
ಚಿಕ್ಕನಾಯಕನಹಳ್ಳಿ ತಾಲೂಕಿನ ಪಟ್ಟಣದ ಪೆಟ್ರೋಲ್ ಬಂಕ್ ನಲ್ಲಿ ವಂಚನೆ ಆರೋಪ
ನಿಗದಿತ ಲೀಟರ್‌ಗಿಂತ ಕಡಿಮೆ ಪ್ರಮಾಣದಲ್ಲಿ ಪೆಟ್ರೋಲ್ ನೀಡುವ ಮೂಲಕ ಮೋಸ
510 ರೂಗೆ ಕೇವಲ ಒಂದು ಲೀಟರ್ ಪೆಟ್ರೋಲ್ ನೀಡಿ ವಂಚನೆ.
ಬೈಕ್ ಗೆ ಪೆಟ್ರೋಲ್ ತುಂಬಿಸಿಕೊಂಡ ಗ್ರಾಹಕರಿಂದ ಆರೋಪ.
ಹುಳಿಯಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ pic.twitter.com/Z2egUmWRUw
— eedina.com ಈ ದಿನ.ಕಾಮ್ (@eedinanews) July 4, 2024
ಅಲ್ಲದೇ, ಈ ಬಗ್ಗೆ ವಿಡಿಯೋ ಕೂಡ ಮಾಡಿಕೊಂಡಿದ್ದು, ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಹುಳಿಯಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.