ಮುಡಾ ನಿವೇಶನ ಹಂಚಿಕೆ | ಬಿಜೆಪಿಯಿಂದ ರಾಜಕೀಯ ಪ್ರೇರಿತ ಆರೋಪ: ಸಿಎಂ ಸಿದ್ದರಾಮಯ್ಯ

Date:

Advertisements

ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿ-ಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಬಿಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾಡುತ್ತಾರೆ. ವಿಷಯವೇ ಇಲ್ಲ. ಮುಡಾ ನಮ್ಮ 3.16 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಹಂಚಿದರೆ ನಾವು ಕೇಳಬಾರದೇ. ಹಾಗಿದ್ದಲ್ಲಿ ಜಮೀನಿನ ಮೌಲ್ಯ 60 ಕೋಟಿ.ರೂ.ಗಳನ್ನು ಕೊಟ್ಟುಬಿಡಬೇಕಾ” ಎಂದು ಪ್ರಶ್ನಿಸಿದರು.

“ನಮ್ಮ ಜಮೀನು ಒತ್ತುವರಿ ಮಾಡಿಕೊಂಡಿರುವುದನ್ನು ಅವರೇ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ನಿವೇಶನಗಳನ್ನು 50:50 ಅನುಪಾತದಲ್ಲಿ ನೀಡಿದ್ದಾರೆ. ಅದಕ್ಕೆ ನಾವು ಒಪ್ಪಿದ್ದೇವೆ. ಇಂಥ ಕಡೆಯೇ ನಿವೇಶನ ಕೊಡಿ ಎಂದು ನಾವು ಕೇಳಿಲ್ಲ” ಎಂದರು.

Advertisements

ಬಿಜೆಪಿ ಅಧಿಕಾರದಲ್ಲಿತ್ತು

“ನಿವೇಶನ ನೀಡಿದಾಗ 2021ನೇ ಇಸವಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಅವರೇ ನಿವೇಶನಗಳನ್ನು ಹಂಚಿ ಈಗ ಕಾನೂನುಬಾಹಿರ ಎಂದರೆ ಹೇಗೆ? ವಿಜಯನಗರ 3 ನೇ ಅಥವಾ 4 ನೇ ಹಂತದಲ್ಲಿ ಕೊಡಿ ಎಂದು ಕೇಳಲಿಲ್ಲ. ನಮಗೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಕೊಡಲು ಒಪ್ಪಿದಂತೆ ಕೊಡಿ ಎಂದು ಹೇಳಿದ್ದೇವೆ. ಇದು ರಾಜಕೀಯ ಪ್ರೇರಿತ ಆಪಾದನೆ” ಎಂದು ಹೇಳಿದರು.

ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ

ಭೂ ಸ್ವಾಧೀನವಾದಲ್ಲಿಯೇ ಜಮೀನು ಕೊಡಬೇಕೆಂಬ ನಿಯಮವಿದೆ ಎಂದು ಪರ್ತಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ನಾವು ಇಂತಹ ಕಡೆಯೇ ನಿವೇಶನ ಕೊಡಿ ಎಂದು ಕೇಳಿಲ್ಲ. ಜಾಗ ಕೊಟ್ಟಿರುವುದು ತಪ್ಪು ಎನ್ನುವುದಾದರೆ ನಮಗೆ ಪರಿಹಾರ ಕೊಡಲಿ. ಅಕ್ಟೋಬರ್ 2023 ರಲ್ಲಿ ಸಚಿವರು 50:50 ಅನುಪಾತದಲ್ಲಿ ಜಮೀನು ಕೊಡುವುದನ್ನು ರದ್ದು ಮಾಡಿ ಎಂದು ಬರೆದಿದ್ದಾರೆ. ಬರೆಯದೇ ಹೋದರೂ ಕೂಡ 62 ಕೋಟಿ ರೂ.ಗಳನ್ನು ಕಾನೂನಿನ ಪ್ರಕಾರ ಕೊಟ್ಟುಬಿಡಲಿ. ನಮಗೆ ಕೊಟ್ಟಿರುವ 14 ನಿವೇಶನಗಳ ಬೆಲೆ ಇದಕ್ಕಿಂತಲೂ ಕಡಿಮೆ ಇದೆ. ಒಂದು ಎಕರೆಗೆ 44 ಸಾವಿರ ಚದರ ಅಡಿಯಾದರೆ ನನಗೆ ಕೊಟ್ಟಿರುವುದು 38.264 ಚದರ ಅಡಿ. ಒಂದು ಎಕರೆಗಿಂತ ಕಡಿಮೆಯಾಗಿದೆ. ಪರಿಹಾರವಾಗಿ ಕೊಟ್ಟಿರುವ ಜಮೀನಿನ ಬೆಲೆ ಎಷ್ಟಿದೆ ಎಂದು ನನಗೆ ತಿಳಿದಿಲ್ಲ. ನನಗೆ 62 ಕೋಟಿ ಕೊಟ್ಟುಬಿಡಲಿ” ಎಂದರು.

ನಗರಾಭಿವೃದ್ಧಿ ಸಚಿವರು ನಿವೇಶನ ಹಂಚಿಕೆಗೆ ಸಂಬಂಧಿಸಿದ ಕಡತವನ್ನು ತೆಗೆದುಕೊಂಡು ಬಂದಿದ್ದಾರೆ ಎಂಬ ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿ ಕಡತ ತಂದಿಲ್ಲ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X