ಪೋಕ್ಸೋ ಪ್ರಕರಣ | ಯಡಿಯೂರಪ್ಪಗೆ ಕೋರ್ಟ್‌ ಸಮನ್ಸ್‌

Date:

Advertisements

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪಗೆ ನ್ಯಾಯಾಲಯ ಸಮನ್ಸ್‌ ನೀಡಿದೆ. ಜುಲೈ 15ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ಸೂಚನೆ ನೀಡಿದೆ.

ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳ ವಿರುದ್ಧದ ಜಾರ್ಜ್‌ಶೀಟ್ ಗಮನಿಸಿರುವ ಬೆಂಗಳೂರಿನ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್‌.ಎಂ ರಮೇಶ್‌ ಸಮನ್ಸ್‌ ಜಾರಿಗೊಳಿಸಿದ್ದಾರೆ.

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) 750 ಪುಟಗಳಲ್ಲಿ ಸಲ್ಲಿಸಿರುವ ದೋಷಾರೋಪ ಪಟ್ಟಿಯನ್ನು ಕಳೆದ ವಾರ ನ್ಯಾಯಾಲಯಕ್ಕೆ ಸಲ್ಲಿಸಿದಿತ್ತು. ಚಾರ್ಜ್‌ಶೀಟ್‌ಅನ್ನು ನ್ಯಾಯಾಲಯ ಅವಲೋಕಿಸಿದೆ. ಬಳಿಕ, ಯಡಿಯೂರಪ್ಪ ಮತ್ತು ಅವರ ಸಹಚರರಾದ ವೈ.ಎಂ ಅರುಣ್ ಎಂ ರುದ್ರೇಶ ಹಾಗೂ ವೈ ಮರಿಸ್ವಾಮಿ – ನಾಲ್ವರಿಗೂ ಸಮನ್ಸ್‌ ನೀಡಿದೆ.

Advertisements

ಬಿಎಸ್ ಯಡಿಯೂರಪ್ಪ ಅವರ ಬಳಿ ಸಹಾಯ ಕೇಳಲು ಹೋಗಿದ್ದಾಗ, ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದರು. ಬೆಂಗಳೂರಿನ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಬಳಿಕ, ಪ್ರಕರಣವನ್ನು ಎಸ್‌ಐಟಿ ತನಿಖೆಗೆ ನೀಡಲಾಗಿತ್ತು. ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆ-2012ರ ಕಲಂ 8ರ ಅಡಿಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಐಪಿಸಿ ಸೆಕ್ಷನ್‌ 354 (ಎ)ರ ಅಡಿಯಲ್ಲಿ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದೆ. ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಆರೋಪದ ಮೇಲೆ ಅವರ ಮೂವರು ಸಹಚರರ ವಿರುದ್ಧ ಐಪಿಸಿ ಸೆಕ್ಷನ್‌ 204 ಮತ್ತು 214ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ, ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆದಿರುವ ಯಡಿಯೂರಪ್ಪ ಬಂಧನದಿಂದ ಪಾರಾಗಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X