ಉಡುಪಿ | ಹಸಿರು ಕ್ರಾಂತಿಗೆ ಮುಂದಾದ ವೀಕಲಚೇತನ ತಂಡ; ಸಾವಿರ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ

Date:

Advertisements

ಪೀಸ್ ಫೌಂಡೇಶನ್ ಉಡುಪಿ ಜಿಲ್ಲೆಯ ಹಲವು ಶಾಲೆ ಹಾಗೂ ಸಂಘ ಸಂಸ್ಥೆಗಳಲ್ಲಿ ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಡುವ ಮೂಲಕ ಪರಿಸರ ಸ್ನೇಹಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಅರಣ್ಯ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ. ಇಂತಹ ಕಾರ್ಯಕ್ರಮಗಳು ಎಲ್ಲರಿಗೂ ಸ್ಪೂರ್ತಿ ತರಲಿ ಎಂದು ಉಡುಪಿ ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ ಹಾರೈಸಿದರು.

ಉಡುಪಿ ಜಿಲ್ಲೆಯಲ್ಲಿ ವಿಕಲಚೇತನರ ಪರವಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ ಸೋನಿಯಾ ನೇತೃತ್ವದ ಪೀಸ್ ಫೌಂಡೇಶನ್ ನ್ಯಾಶನಲ್ ಎನ್‌ಜಿಒ ಹಾಗೂ ಉಡುಪಿ ಜಿಲ್ಲಾ ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ಸಾವಿರ ಗಿಡಗಳನ್ನು ನೆಡುವ ಪರಸರ ಸ್ನೇಹಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅತಿಥಿಯಾಗಿ ಪಾಲ್ಗೊಂಡಿದ್ದ ಹಿರಿಯ ವಕೀಲ ಜಯಪ್ರಕಾಶ್ ಕೆದ್ಲಾಯ ಮಾತನಾಡಿ, “ಹಸಿರೇ ನಮ್ಮ ಉಸಿರು. ಪ್ರಸ್ತುತದಲ್ಲಿ ಇಡೀ ದೇಶದಲ್ಲೇ ಹಸಿರು ಕ್ರಾಂತಿ ಅಗಬೇಕಾಗಿದೆ. ವಿಶೇಷವಾಗಿ‌ ಜನರಿಗೆ ಪರಿಸರದ ಬಗ್ಗೆ ಕಾಳಜಿ ಮೂಡಿಸುವಂತಹ ಕೆಲಸ ಅಗಬೇಕಾಗಿದೆ. ಅದಷ್ಟು ಶಾಲೆ-ಕಾಲೇಜು, ಖಾಲಿ‌ ಜಾಗದಲ್ಲಿ ಮರಗಳನ್ನು‌‌ ನೆಟ್ಟು‌ ಬೆಳಸಿದಲ್ಲಿ ನಮ್ಮ ಜೀವನ‌ ಸಾರ್ಥಕ ಎನಿಸುತ್ತದೆ. ಇಂದು ವೀಕಲಚೇತನರೆಲ್ಲರೂ ಒಗ್ಗೂಡಿ ಸಾವಿರ ಗಿಡಗಳನ್ನು‌ ನೆಡುವ ಮೂಲಕ ಹಸಿರು ಕ್ರಾಂತಿಗೆ ಮುಂದಾಗಿರುವುದು ಸಂತೋಷದ ವಿಚಾರ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು : ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ ನೇಮಕ

ಉಡುಪಿ ಶಾಲಾ ವಠಾರದಲ್ಲಿ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯೂಕ್ತ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನ ಜಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಯೋಜನಾ‌ ಸಹಾಯಕ ಶಿವಾಜಿ, ಪೀಸ್ ಫೌಂಡೇಶನ್ ಸಂಸ್ಥೆಯ ಜಗದೀಶ್ ಭಟ್, ಉದ್ಯಮಿ ಸ್ಟಾನ್ಲಿ, ಪತ್ರಕರ್ತ ಜನಾರ್ಧನ್ ಕೊಡವೂರು, ಶಿಜಿತ್, ಕಲಾವಿದ ಸಂದೇಶ್, ಯುವ ಉದ್ಯಮಿ ಕೆ ಸಂದೀಪ್ ಇದ್ದರು. ಅರಣ್ಯ ಇಲಾಖೆ ಸಿಬಂದಿ ಕೇಶವ ಪೂಜಾರಿ ಕಾರ್ಯಕ್ರಮ‌ ನಿರ್ವಹಿಸಿದರು.

WhatsApp Image 2025 07 12 at 17.38.34 e1752322718567
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X