ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಗಂಗಮ್ಮನಗುಡಿಯಲ್ಲಿ ನಡೆದಿದೆ. ವರದಕ್ಷಿಣೆ ಕಿರುಕುಳದಿಂದ ಆಕೆ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಮೂಲದ ಪೂಜಾ (22) ಮೃತ ದುರ್ದೈವಿ. ಆಕೆಗೆ ಸುನೀಲ್ ಎಂಬಾತನೊಂದಿಗೆ 2022ರಲ್ಲಿ ವಿವಾಹವಾಗಿತ್ತು. ಇಬ್ಬರೂ ಬೆಂಗಳೂರಿನಲ್ಲಿ ವಾಸವಾಗಿದ್ದರು. ಪೂಜಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಶುಕ್ರವಾರ ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ವೃತದೇಹ ಪತ್ತೆಯಾಗಿದೆ. ಮನೆಯಲ್ಲಿ ಯಾರು ಇಲ್ಲದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಪೂಜಾ ಅವರ ಕುಟುಂಬಸ್ಥರು ಸುನೀಲ್ ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದಾರೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತದೇಹವನ್ನು ಮರಣೊತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.