ಯುಕೆ ಚುನಾವಣೆಯಲ್ಲಿ ಜಯಗಳಿಸಿದ ಕೀರ್ ಸ್ಟಾರ್‌ಮರ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಲೇಬರ್ ಪಕ್ಷದ ನಾಯಕರೊಂದಿಗೆ ಸಕಾರಾತ್ಮಕ ಸಹಯೋಗಕ್ಕಾಗಿ ಎದುರು ನೋಡುತ್ತಿರುವುದಾಗಿ ಮೋದಿ ಹೇಳಿದ್ದಾರೆ. ಜೊತೆಗೆ, ನಿರ್ಗಮಿತ ಪ್ರಧಾನಿ ರಿಷಿ ಸುನಕ್ ಅವರಿಗೆ ಸಂದೇಶವನ್ನೂ ನೀಡಿದ್ದಾರೆ.
ಗುರುವಾರ ನಡೆದ ಚುನಾವಣೆಯಲ್ಲಿ ಲೇಬರ್ ಪಕ್ಷವು ಕನ್ಸರ್ವೇಟಿವ್ ಪಕ್ಷದ ವಿರುದ್ಧ ಗೆಲುವು ಸಾಧಿಸಿದೆ. ಚುನಾವಣೆಯಲ್ಲಿ ಒಟ್ಟು 650 ಸ್ಥಾನಗಳ ಪೈಕಿ ಆಡಳಿತದಲ್ಲಿದ್ದ ಕನ್ಸರ್ವೇಟಿವ್ ಪಕ್ಷ ಕೇವಲ 120 ಸ್ಥಾನಗಳನ್ನು ಗೆದಿದ್ದರೆ, ಲೇಬರ್ ಪಕ್ಷವು 412 ಸ್ಥಾನಗಳನ್ನು ಗೆದ್ದಿದೆ.
ಚುನಾವಣೆಯಲ್ಲಿ ಗೆದ್ದ ಲೇಬರ್ ಪಕ್ಷದ ಕೀರ್ ಸ್ಟಾರ್‌ಮರ್ ಅವರಿಗೆ ಶುಭ ಕೋರಿ ಟ್ವೀಟ್ ಮಾಡಿರುವ ಮೋದಿ, “ಯುಕೆ ಸಾರ್ವತ್ರಿಕ ಚುನಾವಣೆಯಲ್ಲಿ ಗಮನಾರ್ಹ ವಿಜಯ ಸಾಧಿಸಿದ ಕೀರ್ ಸ್ಟಾರ್‌ಮರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಎಲ್ಲ ಕ್ಷೇತ್ರಗಳಲ್ಲಿ ಭಾರತ-ಯುಕೆ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು, ಪರಸ್ಪರ ಅಭಿವೃದ್ಧಿ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ಸಕಾರಾತ್ಮಕ ಮತ್ತು ರಚನಾತ್ಮಕ ಸಹಯೋಗವನ್ನು ನಾನು ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ.
Heartiest congratulations and best wishes to @Keir_Starmer on the remarkable victory in the UK general elections. I look forward to our positive and constructive collaboration to further strengthen the India-UK Comprehensive Strategic Partnership in all areas, fostering mutual…
— Narendra Modi (@narendramodi) July 5, 2024
ಸುನಕ್ ಅವರದ್ದ ‘ಶ್ಲಾಘನೀಯ ನಾಯಕತ್ವ’ ಎಂದು ಪ್ರಶಂಸಿಸಿರುವ ಮೋದಿ, ಭಾರತ-ಯುಕೆ ಸಂಬಂಧಗಳನ್ನು ಗಟ್ಟಿಗೊಳಿಸುವಲ್ಲಿ ಸುನಕ್ ಅವರ ಕೊಡುಗೆಗಳಿಗಾಗಿ ಧನ್ಯವಾದ ಅರ್ಪಿಸಿದ್ದಾರೆ.
“ಬ್ರಿಟನ್‌ನ ನಿಮ್ಮ ಶ್ಲಾಘನೀಯ ನಾಯಕತ್ವಕ್ಕಾಗಿ ರಿಶಿ ಸುನಕ್ ಅವರಿಗೆ ಧನ್ಯವಾದಗಳು. ನಿಮ್ಮ ಅಧಿಕಾರಾವಧಿಯಲ್ಲಿ ನಿಮ್ಮ ಸಕ್ರಿಯ ಕೊಡುಗೆಯಿಂದಾಗಿ ಭಾರತ ಮತ್ತು ಯುಕೆ ನಡುವಿನ ಸಂಬಂಧವು ಗಟ್ಟಿಗೊಂಡಿದೆ. ನಿಮ್ಮ ಮುಂದಿನ ಭವಿಷ್ಯಕ್ಕೆ ನಿಮಗೂ ಮತ್ತು ನಿಮ್ಮ ಕುಟುಂಬಕ್ಕೂ ಶುಭಾಶಯಗಳು” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
Thank you @RishiSunak for your admirable leadership of the UK, and your active contribution to deepen the ties between India and the UK during your term in office. Best wishes to you and your family for the future.
— Narendra Modi (@narendramodi) July 5, 2024