ಶಿವಮೊಗ್ಗದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಗುರುವಾರ ಗಾಜನೂರು ಜಲಾಶಯಕ್ಕೆ
43 ಸಾವಿರ ಕ್ಯೂಸೆಕ್‌ನಷ್ಟು ನೀರಿನ ಒಳಹರಿವು ನಿರಂತರವಾಗಿದೆ. ಈ ಹಿನ್ನೆಲೆಯಲ್ಲಿ ಅಷ್ಟೇ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಪರಿಣಾಮವಾಗಿ ತುಂಗಾ ನದಿಯು ಉಕ್ಕಿ ಹರಿಯುತ್ತಿದ್ದು, ಶಿವಮೊಗ್ಗ ಸಿಟಿಯಲ್ಲಿ ಮಂಟಪದ ತುದಿಯವರೆಗೆ ನೀರು ಹರಿಯುತ್ತಿದೆ.
ಗಾಜಾನೂರಿನ ಜಲಾಶಯದಿಂದ ಇನ್ನಷ್ಟು ದೊಡ್ಡ ಪ್ರಮಾಣದಲ್ಲಿ ನೀರು ಹರಿಸುವ ಸಾಧ್ಯತೆ ಇದ್ದು, ನದಿ ಭಾಗದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ. ಈ ಸಂಬಂಧ ಶಿವಮೊಗ್ಗ ಮಹಾನಗರ ಪಾಲಿಕೆ ಇಮಾಮ್ ಬಾಡಾ, ಸೀಗೆಹಟ್ಟಿ, ಕುಂಬಾರಗುಂಡಿಯಲ್ಲಿನ ನಿವಾಸಿಗಳಿಗೆ ಮುನ್ನೆಚ್ಚರಿಕೆ ನೀಡಿದೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮೊಹರಂ ಹಬ್ಬದ ಪೀರಾ ದೇವರ ಮೂರ್ತಿಯನ್ನೇ ಕಳವುಗೈದ ದುರುಳರು!
ನದಿಗೆ ಯಾವುದೇ ಸಮಯದಲ್ಲಿ ಹೆಚ್ಚುವರಿ ನೀರು ಬಿಡುವ ಸಾಧ್ಯತೆ ಇರುವ ಕಾರಣಕ್ಕೆ ಜನರು ನದಿಗೆ ಇಳಿಯಬಾರದು, ನದಿಯ ಬದಿಯಲ್ಲಿ ಓಡಾಡಬಾರದು ಹಾಗೂ ಸುರಕ್ಷಿತ ಸ್ಥಳದಲ್ಲಿರಬೇಕೆಂದು ಸೂಚನೆ ನೀಡಿದೆ.
