ಸಾಲ ಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮುದ್ದಮಗಡ್ಡಿ ಗ್ರಾಮದಲ್ಲಿ ನಡೆದಿದೆ.
ಚನ್ನಬಸಪ್ಪ (42) ಸಾವಿಗೆ ಶರಣಾದ ರೈತ. ಇವರು ಕೃಷಿ ಹಾಗೂ ಇತರೆ ಕೆಲಸಗಳಿಗೆ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ 1.24 ಲಕ್ಷ, ಹೊಲ ಒತ್ತೆ ಇಟ್ಟು 5 ಲಕ್ಷ ರೂ. ಸೇರಿ ಒಟ್ಟು 10 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
ಭೀಕರ ಬರದಿಂದ ಬೆಳೆ ನಷ್ಟ ಅನುಭವಿಸಿ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ ರೈತ ಸಾಲ ತೀರಿಸಿಲಾಗುವುದಿಲ್ಲ ಎಂದು ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ʼಜಿಲ್ಲೆಯ ರೈತರು ಬರದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಪರಿಣಾಮ ಆತ್ಮಹತ್ಯೆಗೆ ಮುಂದಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಸರಕಾರ ರೈತರಿಗೆ ಹೆಚ್ಚಿನ ಯೋಜನೆಗಳು ಜಾರಿಗೊಳಿಸಿ ಆರ್ಥಿಕ ನೆರವು ಒದಗಿಸಲು ಧಾವಿಸಬೇಕುʼ ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.