ವಿಜಯಪುರ ಮಹಾನಗರ ಪಾಲಿಕೆಯ 30 ವಾರ್ಡ್‌ಗಳಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಜಿಲ್ಲಾಧಿಕಾರಿ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಶಾಸಕರಿಗೆ ಹಾಗೂ ಮಹಾನಗರಪಾಲಿಕೆ ಆಯುಕ್ತರಿಗೆ ಮನವಿ ಮಾಡಿ ಎಸ್‌ಡಿಪಿಐ ಮುಖಂಡ ಇಜಾಜ್ ಅಹ್ಮದ್ ಮುಕಬಿಲ್ ಮಾತನಾಡಿ, “ವಿಜಯಪುರ ನಗರದಲ್ಲಿ ಕೆಲವೊಂದು ವಾರ್ಡ್‌ಗಳಲ್ಲಿ ಕಾಮಗಾರಿಗಳಾಗುತ್ತಿವೆ. 18, 19, 20,25, 27.26, 30, 31, 34ರ ವಾರ್ಡ್‌ಗಳಲ್ಲಿ ಹಲವಾರು ವರ್ಷಗಳಿಂದ ಅಭಿವೃದ್ಧಿ ಕುಂಠಿತವಾಗಿದೆ. ಹಾಗಾಗಿ ತಾವು ಆದಷ್ಟು ಬೇಗ ಅಭಿವೃದ್ಧಿ ಕೆಲಸಗಳನ್ನು ಮಾಡಿಸಿಕೊಡಬೇಕು” ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಡಿದರು.
“ವಿಜಯಪುರ ನಗರದಲ್ಲಿ ಸುಸಜ್ಜಿತ ರಸ್ತೆ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯ ಕಲ್ಪಿಸಬೇಕು.
ರಸ್ತೆಗಳು ಮಳೆಗಾಲದ ಹಿನ್ನೆಲೆಯಲ್ಲಿ ತಗ್ಗುದಿನ್ನಿಗಳಿಂದ ಆವೃತಗೊಂಡಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ಹೊರಗುತ್ತಿಗೆ ನೇಮಕಾತಿ ನಿಯಮದ ಆದೇಶ ತಿದ್ದುಪಡಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ
ಇದೇ ಸಂದರ್ಭದಲ್ಲಿ ಉಮರ್ ಖಾನ್ ಪಠಾಣ, ಇಸಾಕ ಸೈಯ್ಯದ್, ನಿಸಾರ ಅಹ್ಮದ್ ಮನಿಯಾರ, ಮುನಾಫ ಪಠಾಣ, ಹಮೀದ ಮ್ಯಾಗಿನಮನಿ, ಜಮೀರ ಮುಲ್ಲಾ ಇದ್ದರು.