ರಾಜ್ಯದಲ್ಲಿ ಡೆಂಘೀ ಜ್ವರ ಹೆಚ್ಚಳವಾಗುತ್ತಿದ್ದು, ಬೆಂಗಳೂರಿನಲ್ಲಿ ಡೆಂಘೀಗೆ ಬಾಲಕ ಬಲಿಯಾಗಿದ್ದಾನೆ. ಮತ್ತೊಂದೆಡೆ ಶಿವಮೊಗ್ಗದಲ್ಲಿ ಝೀಕಾ ವೈರಸ್‌ನಿಂದಾಗಿ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ.
ಡೆಂಘೀ ಜ್ವರದಿಂದಾಗಿ ಅಂಜನಾಪುರದ 11 ವರ್ಷದ ಬಾಲಕ ಗಗನ್ ಶುಕ್ರವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಬಾಲಕ ಗಗನ್ ಚೈತನ್ಯ ಟೆಕ್ನೋ ಶಾಲೆಯಲ್ಲಿ ಓದುತ್ತಿದ್ದ ಎಂದು ಮಾಹಿತಿ ಲಭ್ಯವಾಗಿದೆ.
ಇನ್ನು ಶಿವಮೊಗ್ಗದಲ್ಲಿ ಝೀಕಾ ವೈರಸ್‌ಗೆ 74 ವರ್ಷದ ವೃದ್ಧರೊಬ್ಬರು ಬಲಿಯಾಗಿದ್ದಾರೆ. ಜೂನ್ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ವೃದ್ಧನಲ್ಲಿ ಜೂನ್ 21ರಂದು ಝೀಕಾ ವೈರಸ್ ಪತ್ತೆಯಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಗುರುವಾರ ಆಸ್ಪತ್ರೆಯಿಂದ ಮನೆಗೆ ತೆರಳಿದ್ದು ಶುಕ್ರವಾರ ಸಾವನ್ನಪ್ಪಿದ್ದಾರೆ.
ಇದನ್ನು ಓದಿದ್ದೀರಾ? ಮೈಸೂರು | ಗುರುಪುರ ಸಮುದಾಯ ಆರೋಗ್ಯಾಧಿಕಾರಿ ಡೆಂಘೀ ಜ್ವರಕ್ಕೆ ಬಲಿ
ಕೆಲವು ದಿನಗಳ ಹಿಂದೆ ಬೆಂಗಳೂರಿನ 27 ವರ್ಷದ ಯುವಕ ಡೆಂಘೀ ಜ್ವರದಿಂದ ಸಾವನ್ನಪ್ಪಿದ್ದಾರೆ. ಮೃತಪಟ್ಟ ಯುವಕ ಕಗ್ಗದಾಸಪುರದ ನಿವಾಸಿ ಎಂದು ಬಿಬಿಎಂಪಿ ತಿಳಿಸಿದೆ.
ಇನ್ನು ಹಾಸನ ಜಿಲ್ಲೆಯೊಂದರಲ್ಲೇ ಕಳೆದ ಒಂದು ವಾರದಲ್ಲಿ ನಾಲ್ಕು ಮಕ್ಕಳು ಡೆಂಘೀ ಜ್ವರಕ್ಕೆ ಬಲಿಯಾಗಿದ್ದಾರೆ. ಇನ್ನು ಮೈಸೂರಿನ್ಲಲಿ ಸಮುದಾಯ ಆರೋಗ್ಯಾಧಿಕಾರಿ ನಾಗೇಂದ್ರ (32) ಡೆಂಘೀ ಜ್ವರದಿಂದ ಮೃತಪಟ್ಟಿದ್ದಾರೆ. ಅವರು ಹುಣಸೂರು ತಾಲೂಕಿನಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.