ಮುಸ್ಲಿಂ ಮೀಸಲಾತಿ ರದ್ದು: ತನ್ನ ನಿರ್ಧಾರ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

Date:

Advertisements
  • ಮುಸ್ಲಿಂ ಮೀಸಲಾತಿಯನ್ನು ರದ್ದು ಮಾಡಿದ್ದ ರಾಜ್ಯ ಸರ್ಕಾರ
  • ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಸಮರ್ಥನೆ

ಕಳೆದ ತಿಂಗಳು ರಾಜ್ಯ ಬಿಜೆಪಿ ಸರ್ಕಾರವು ಇದುವರೆಗೂ ಮುಸ್ಲಿಮರಿಗೆ ನೀಡುತ್ತಿದ್ದ ಮೀಸಲಾತಿಯನ್ನು ರದ್ದು ಮಾಡಿತ್ತು. ಇದನ್ನು ಸುಪ್ರೀಂಕೋರ್ಟ್‌ನಲ್ಲಿಯೂ ಕೂಡ ಸಮರ್ಥಿಸಿಕೊಂಡಿದೆ.

ರಾಜ್ಯ ಸರ್ಕಾರವು ಮುಸ್ಲಿಮರ ಮೀಸಲಾತಿಯನ್ನು ರದ್ದುಗೊಳಿಸಿದ್ದ ಆದೇಶದ ಬಗ್ಗೆ ಮಂಗಳವಾರ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿ, ಮೇ 9 ರವರೆಗೆ ತನ್ನ ಆದೇಶವನ್ನು ಜಾರಿ ಮಾಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು.

ಈ ವಿಷಯವಾಗಿ ಉತ್ತರ ನೀಡಿರುವ ರಾಜ್ಯ ಸರ್ಕಾರವು “ಧರ್ಮದ ಆಧಾರದ ಮೇಲೆ ನೀಡಿರುವ ಮೀಸಲಾತಿಯು ಸಂವಿಧಾನ ಬಾಹಿರವಾಗಿದ್ದು, ಇದು ಸಂವಿಧಾನದ 14, 15 ಮತ್ತು 16ನೇ ವಿಧಿ ಮತ್ತು ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತತೆಯ ತತ್ವಗಳ ಆದೇಶಕ್ಕೆ ವಿರುದ್ಧವಾಗಿದೆ. ಹಲವು ವರ್ಷಗಳಿಂದ ಧರ್ಮದ ಆಧಾರದ ಮೇಲೆ ಮೀಸಲಾತಿ ಒದಗಿಸಲಾಗಿದೆ ಎಂಬ ಕಾರಣಕ್ಕಾಗಿ ಅದನ್ನು ಮತ್ತೆ ಶಾಶ್ವತವಾಗಿ ಮುಂದುವರಿಸಲು ಸಾಧ್ಯವಿಲ್ಲ” ಎಂದು ತಿಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? : ರೌಡಿಶೀಟರ್‌ ಮಣಿಕಂಠ ಪರ ಮೋದಿ ಪ್ರಚಾರ; ಮೋದಿ-ಅಮಿತ್ ಶಾಗೆ ಹಳೆ ಗುಜರಾತ್ ನೆನಪಾಗಿರಬೇಕು ಎಂದ ಜೆಡಿಎಸ್‌

ಮುಂದುವರೆದು, “ರಾಜ್ಯದಲ್ಲಿ ಮೀಸಲಾತಿಗಳನ್ನು ನೀಡುವುದು ಮತ್ತು ಅದರ ಪರಿಷ್ಕರಣೆ ಸಂಪೂರ್ಣವಾಗಿ ನೆಲದ ವಾಸ್ತವಗಳ ಮೇಲೆ ಅವಲಂಬಿತವಾಗಿರುತ್ತದೆ. ಯಾವ ಗುಂಪಿಗೆ ಹಿಂದುಳಿದ ವರ್ಗ ಎಂದು ಪರಿಗಣಿಸಬೇಕು, ಯಾವ ಪ್ರಯೋಜನಗಳನ್ನು ನೀಡಬೇಕು ಎನ್ನುವುದು ಪ್ರತಿ ರಾಜ್ಯದ ಸಾಂವಿಧಾನಿಕ ಕರ್ತವ್ಯವಾಗಿದೆ” ಎಂದು ಉಲ್ಲೇಖಿಸಿದ್ದಾರೆ.

“ಮುಸ್ಲಿಮರನ್ನು ಹಿಂದುಳಿದವರೆಂದು ಸೇರಿಸಲು ಹಲವು ಆಯೋಗಗಳು ಶಿಫಾರಸು ಮಾಡಿದರೂ ಕೂಡ ಕಾನೂನಿನ ಪ್ರಕಾರ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದು ತನ್ನ ನಿರ್ಧಾರವನ್ನು ಸಮರ್ಥನೆ ಮಾಡಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X