ತುಮಕೂರು | ಎನ್‌ಟಿಎ ರದ್ದು ಮಾಡುವಂತೆ ಎಐಡಿಎಸ್‌ಒ ಆಗ್ರಹ 

Date:

Advertisements

ತುಮಕೂರು‌ ನೀಟ್ ಹಾಗೂ ಎನ್‌ಇಟಿ ಹಗರಣಗಳನ್ನು ವಿರೋಧಿಸಿ, ರಾಷ್ಟ್ರೀಯ ಪರೀಕ್ಷಾ ಏಜನ್ಸಿ ಎನ್‌ಟಿಎ ರದ್ದುಪಡಿಸಲು ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಸಿ ಬಿ ಮಾತನಾಡಿ, “ಜೂನ್ 4ರಂದು ನೀಟ್ ಯುಜಿ ಪರೀಕ್ಷೆಯ ಮೌಲ್ಯಮಾಪನ 24 ಲಕ್ಷ ಮಂದಿ ವಿದ್ಯಾರ್ಥಿಗಳ ವೈದ್ಯಕೀಯ ಭವಿಷ್ಯದ, ವೈದ್ಯಕೀಯ ಶಿಕ್ಷಣ ಕ್ಷೇತ್ರದ ಮತ್ತು ದೇಶದ ಆರೋಗ್ಯ ವ್ಯವಸ್ಥೆಯ ಭವಿಷ್ಯಕ್ಕೆ ಕುತ್ತು ತರುವಂತ, ಇಡೀ ದೇಶವನ್ನೇ ನಾಚಿಕೆಯಿಂದ ತಲೆತಗ್ಗಿಸುವಂತೆ ಮಾಡಿದೆ. ಶಿಕ್ಷಣ ವ್ಯವಸ್ಥೆಯಲ್ಲಿ ನಡೆದಿರುವ ಅತಿದೊಡ್ಡ ಹಗರಣ ಇದಾಗಿದೆ” ಎಂದು ಹೇಳಿದರು.

ನೀಟ್‌ ಹಗರಣದ ಬೆನ್ನಲ್ಲೇ ನೆಟ್ ಪರೀಕ್ಷೆ ನಡೆದ ಮರುದಿನವೇ ಕೇಂದ್ರ ಶಿಕ್ಷಣ ಸಚಿವಾಲಯ ನೆಟ್  ಪರೀಕ್ಷೆಯನ್ನು ರದ್ದುಪಡಿಸಿರುವುದು ಎನ್‌ಟಿಎ ಏಜೆನ್ಸಿ ನಡೆಸಿರುವ ಪರೀಕ್ಷೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದನ್ನು ಒಪ್ಪಿಕೊಂಡು ಸಿಬಿಐ ತನಿಖೆಗೆ ವಹಿಸಿದೆ. ಆದರೆ, ಇದೇ ಎನ್‌ಟಿಎ ನೇತೃತ್ವದಲ್ಲಿ ನಡೆದಿರುವ ನೀಟ್ ಪರೀಕ್ಷೆಯನ್ನು ರದ್ದುಮಾಡದೇ ಇರುವುದು ಪ್ರಶ್ನಾರ್ಹವಾಗಿದೆ” ಎಂದರು.

Advertisements

“ಈಗಾಗಲೇ ಆತಂಕದಲ್ಲಿರುವ ನೀಟ್ ಪರೀಕ್ಷಾರ್ಥಿಗಳು ಮತ್ತು ಪೋಷಕರಪರ ನಿಲ್ಲಬೇಕಾದ ಕೇಂದ್ರ ಶಿಕ್ಷಣ ಸಚಿವಾಲಯ ನೀಟ್ ಹಗರಣ ಕುರಿತು ಕೇವಲ ಬಾಯಿಮಾತಿನ ತನಿಖೆ ಮತ್ತು ತೇಪೆಹಚ್ಚುವ ಕೆಲಸ ಮಾಡುತ್ತಿದೆ. ಬದಲಾಗಿ ವಿದ್ಯಾರ್ಥಿಗಳು ಮತ್ತು ಪೋಷಕರ ಆಗ್ರಹದಂತೆ ನೀಟ್ ಪರೀಕ್ಷೆಯನ್ನು ಮತ್ತು ಎನ್‌ಟಿಎಯನ್ನು ಏಕೆ ರದ್ದು ಮಾಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ನೀಟ್‌, ನೆಟ್‌ ಪರೀಕ್ಷೆಗಳಂತಹ ಹಗರಣಗಳನ್ನು ಹಿಮ್ಮೆಟಿಸಲು ವಿದ್ಯಾರ್ಥಿಗಳು, ಪೋಷಕರು, ಶಿಕ್ಷಣ ಪ್ರೇಮಿ ಜನತೆ ಸೇರಿದಂತೆ ಇಡೀ ಜನಸಮುದಾಯವೇ ಬೃಹತ್ ಚಳವಳಿಗೆ ಸಜ್ಜಾಗಬೇಕು” ಎಂದು ಕರೆ ನೀಡಿದರು.

ಜಿಲ್ಲಾ ಕಚೇರಿ ಕಾರ್ಯದರ್ಶಿ ಅಕ್ಷರ ಮಾತನಾಡಿ, “ಶಿಕ್ಷಣ ವ್ಯಾಪಾರೀಕರಣ, ಅನಾರೋಗ್ಯ ಪೀಡಿತ ಸ್ಪರ್ಧೆ ಮತ್ತು ವ್ಯಾಪಕ ಭ್ರಷ್ಟಾಚಾರವು ಜಾರಿಯಲ್ಲಿರುವಾಗ, ಒಂದು ಕೇಂದ್ರೀಕೃತ ಪರೀಕ್ಷೆಯು ಭ್ರಷ್ಟಾಚಾರದ ಕೇಂದ್ರೀಕರಣ ಮಾಡಬಲ್ಲದೇ ಹೊರೆತು, ಈ ಸಮಸ್ಯೆಯನ್ನು ಪರಿಹರಿಸುವುದಿಲ್ಲ. ಈ ಹಿನ್ನೆಲೆಯಲ್ಲಿ, ನೀಟ್ ಮತ್ತು ನೆಟ್ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮದ ಕುರಿತು ಸಮರೋಪಾದಿಯಲ್ಲಿ ಸಮಗ್ರ ಮತ್ತು ನಿಷ್ಪಕ್ಷಪಾತ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಹೊರಗುತ್ತಿಗೆ ನೇಮಕಾತಿ ಮೀಸಲಾತಿಯಲ್ಲಿ ಮಾರ್ಪಾಡು ತನ್ನಿ; ಡಿಎಸ್‌ಎಸ್ ಒತ್ತಾಯ

“ಶಿಕ್ಷಕರು ಮತ್ತು ಸೌಲಭ್ಯಗಳನ್ನು ಒದಗಿಸಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಬೇಕು. ಹಾಗೂ ಪ್ರಬಲ ಕೋಚಿಂಗ್ ಸಂಸ್ಥೆಗಳ ಮೇಲೆ ನಿಬಂಧನೆ ವಿಧಿಸಬೇಕು. ಪ್ರಕರಣವು ತಾರ್ಕಿಕ ಅಂತ್ಯ ತಲುಪುವವರೆಗೂ ನೀಟ್ ಕೌನ್ಸೆಲಿಂಗ್‌ ತಡೆಹಿಡಿಯಬೇಕು. ನೆಟ್ ಮರುಪರೀಕ್ಷೆಯ ದಿನಾಂಕವನ್ನು ಕೂಡಲೇ ಪ್ರಕಟಿಸಿ, ನೇರವಾಗಿ ಯುಜಿಸಿಯೇ ಪರೀಕ್ಷೆ ನಡೆಸಬೇಕು. ರಾಜ್ಯ ಮಟ್ಟದಲ್ಲಿಯೇ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ನಡೆಸಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಜಿಲ್ಲಾ ಸೆಕ್ರೆಟರಿಯಟ್ ಸದಸ್ಯರುಗಳಾದ ಭರತ್, ಪಲ್ಲವಿ, ಸುಮಂತ್ ಹಾಗೂ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X