ತುಮಕೂರು | ಹಸಿರು ಕ್ರಾಂತಿ ಹರಿಕಾರ ಬಾಬೂಜಿಯವರ ತತ್ವಾದರ್ಶ ನಮಗೆಲ್ಲ ಮಾದರಿ: ಜಿಲ್ಲಾಧಿಕಾರಿ ಶುಭಕಲ್ಯಾಣ್

Date:

Advertisements

ದೇಶದ ಮಾಜಿ ಉಪಪ್ರಧಾನಿ, ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಅವರ ತತ್ವಾದರ್ಶಗಳು ಇಂದಿಗೂ ನಮಗೆಲ್ಲ ಮಾದರಿಯಾಗಿವೆ ಎಂದು‌ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅಭಿಪ್ರಾಯಪಟ್ಟರು.

ತುಮಕೂರು ಜಿಲ್ಲಾಡಳಿತದಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನ ರಾಮ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಜಗಜೀವನ್ ರಾಮ್ ಅವರ ಆದರ್ಶಗಳನ್ನು ನಾವೆಲ್ಲ ಸದಾ ಕಾಲ ಪಾಲಿಸಬೇಕು. ಬಾಬೂಜಿಯವರು ಮೇಲು–ಕೀಳೆಂಬ ತಾರತಮ್ಯ, ಜಾತಿ ಪದ್ಧತಿ, ಅಸ್ಪೃಶ್ಯತೆಯನ್ನು ತೊಡೆದುಹಾಕಲು ಶ್ರಮಿಸುವ ಮೂಲಕ ಸಾಮಾಜಿಕ ಬದಲಾವಣೆಗಾಗಿ ಹೋರಾಡಿದವರು. ಶೋಷಿತರ ಪರವಾಗಿ ದನಿ ಎತ್ತಿದ ಅವರ ಚಿಂತನೆಗಳನ್ನು ನಾವೆಲ್ಲರೂ ರೂಢಿಸಿಕೊಳ್ಳಬೇಕು” ಎಂದು ಹೇಳಿದರು.

Advertisements

“ಸ್ವಾತಂತ್ರ್ಯ ನಂತರ ಭಾರತ ದೇಶದಲ್ಲಿ ಎದುರಾಗಿದ್ದ ಆರ್ಥಿಕ ಮುಗ್ಗಟ್ಟು, ಬರಪರಿಸ್ಥಿತಿ ಸೇರಿದಂತೆ ಹಲವಾರು ತುರ್ತು ಪರಿಸ್ಥಿತಿ ಸಂದರ್ಭಗಳಲ್ಲಿ ಸ್ವದೇಶದಲ್ಲಿಯೇ ಆಹಾರ ಉತ್ಪಾದಿಸಲು ಅವರು ರೂಪಿಸಿದ ಹಸಿರು ಕ್ರಾಂತಿ ಬಡವರ ಹಸಿವನ್ನು ನೀಗಿಸಿತು” ಎಂದು ಬಾಬೂಜಿಯವರ ಮಾನವೀಯ ಕಾಳಜಿ, ಹೋರಾಟ, ಸಾಧನೆಗಳ ಬಗ್ಗೆ ಬಣ್ಣನೆಯ ಮಾತುಗಳನ್ನಾಡಿದರು.

“ಬಡತನದಲ್ಲಿ ಹುಟ್ಟಿದ ಜಗಜೀವನ ರಾಮ್ ಅವರು ತಮ್ಮ ಪ್ರತಿಭೆಯಿಂದ ಕೇಂದ್ರ ಸಚಿವರಾಗಿ ಕಾರ್ಮಿಕ, ರೈಲ್ವೆ, ಕೃಷಿ ಸೇರಿ ಹಲವಾರು ಖಾತೆಗಳನ್ನು ನಿರ್ವಹಿಸಿ ಬಡವರು, ಶೋಷಿತರು, ನಿರ್ಗತಿಕರ ಅಭಿವೃದ್ಧಿಗಾಗಿ ಕಾನೂನು ರೂಪಿಸಿ ಬಡವರ ಪಾಲಿಗೆ ದೇವರಾಗಿದ್ದರು ಎಂದರಲ್ಲದೆ ಬಾಬೂಜಿಯವರು ಕಂಡ “ಬಡತನ ಮುಕ್ತ ದೇಶದ ಕನಸ”ನ್ನು ನನಸು ಮಾಡಲು ನಾವೆಲ್ಲ ಮುಂದಾಗಬೇಕು” ಎಂದು ತಿಳಿಸಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ ಪ್ರಭು ಮಾತನಾಡಿ, “ದೇಶದ ಬೃಹತ್ ಪ್ರಜಾಪ್ರಭುತ್ವದಲ್ಲಿ ಒಂದು ಬಾರಿಯೂ ಸೋಲನ್ನು ಕಾಣದ ಜಗಜೀವನ ರಾಮ್ ಅವರು ತಮ್ಮ ಸುದೀರ್ಘ ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆಗಳು ಅವಿಸ್ಮರಣೀಯವಾದುದು” ಎಂದರು.

“ಆಹಾರ ಭದ್ರತೆಗಾಗಿ ಬಾಬೂಜಿಯವರು ಕೃಷಿ ಮಂತ್ರಿಗಳಾಗಿ ಮಾಡಿದ ಹಸಿರು ಕ್ರಾಂತಿ ಇಂದಿಗೂ ನಮ್ಮೆಲ್ಲರ ಹೊಟ್ಟೆ ತುಂಬಿಸುತ್ತಿದೆ. ಸಹಕಾರ ಇಲಾಖೆಯಲ್ಲಿ ತಂದ ಬದಲಾವಣೆಯಿಂದಾಗಿ ರೈತರು, ಕೃಷಿಕರು ನೆಮ್ಮದಿಯ ಜೀವನ ನಡೆಸುವಂತಾಗಿದೆ. ಬಾಬೂಜಿಯವರ ಹೋರಾಟದ ಕಿಚ್ಚು, ದೇಶ ಸೇವೆಯ ಮನೋಭಾವ, ಸಾಮಾಜಿಕ ಸೇವೆ, ರಾಜಕೀಯ ಸಾಧನೆಗಳನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕು. ಅಧಿಕಾರಿಗಳು, ಯುವ ಪೀಳಿಗೆ ಜಗಜೀವನ ರಾಮ್ ಅವರ ಗುಣಗಳನ್ನು ಪಾಲನೆ ಮಾಡಬೇಕು” ಎಂದು ಕರೆ ನೀಡಿದರು.

“ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಬಾಬು ಜಗಜೀವನ್ ರಾಮ್ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಆಕ್ಷೇಪಣೆ ವ್ಯಕ್ತಪಡಿಸಿದಾಗ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಪ್ರತಿಕ್ರಿಯಿಸಿ ಕಟ್ಟಡ ನಿರ್ಮಿಸಲು ನಿವೇಶನದ ಸಮಸ್ಯೆ ಎದುರಾಗಿದ್ದು, ಕಾನೂನು ಹೋರಾಟ ನಡೆಸಲಾಗುತ್ತಿದೆ. ನ್ಯಾಯಾಲಯಕ್ಕೆ ಸಮಗ್ರ ವರದಿ ನೀಡಿ ಇತ್ಯರ್ಥಕ್ಕೆ ಕ್ರಮ ಕೈಗೊಂಡು ಕಟ್ಟಡ ನಿರ್ಮಾಣವನ್ನು ಕೈಗೆತ್ತಿಕೊಳ್ಳಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಪೋಕ್ಸೊ ಪ್ರಕರಣದಲ್ಲಿ ಕರ್ತವ್ಯಲೋಪ; ವೃತ್ತ ನಿರೀಕ್ಷಕ ನಾರಾಯಣ, ಎಎಸ್‌ಪಿ ಬಿಂದುರಾಣಿ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ತಹಶೀಲ್ದಾರ್ ಸಿದ್ದೇಶ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ದಿನೇಶ್, ದಲಿತ ಮುಖಂಡರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X