ರಾಜ್ಯ ಸರ್ಕಾರವು ಹಿರಿಯ ಐಎಎಸ್ ಅಧಿಕಾರಿ ವಿ ರಶ್ಮಿ ಮಹೇಶ್ ಅವರನ್ನು ರಾಮನಗರ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದೆ.
ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ಬದಲಾವಣೆ ಮಾಡಿದ್ದು, ಮಂಡ್ಯ ಜಿಲ್ಲೆಗೆ ವಿ ಅನ್ಬುಕುಮಾರ್ ಹಾಗೂ ರಾಮನಗರ ಜಿಲ್ಲೆಗೆ ವಿ ರಶ್ಮಿ ಮಹೇಶ್ ಅವರನ್ನು ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
2023ರ ಡಿಸೆಂಬರ್‌ನಲ್ಲಿ ಸರ್ಕಾರ ಹಲವು ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು. ಈಗ ಅದನ್ನು ಬದಲಾವಣೆ ಮಾಡಿ, ಆದೇಶ ಹೊರಡಿಸಿದೆ.

ರಾಜ್ಯದ ಅಭಿವೃದ್ಧಿ ಯೋಜನೆ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಮಾಡಲು ಇವರುಗಳನ್ನು ನೇಮಕ ಮಾಡಲಾಗಿದೆ.
2023 ಡಿಸೆಂಬರ್ 11ರಂದು ಈ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿತ್ತು. ಅವರುಗಳನ್ನು ಬದಲಿಸಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಆದೇಶಿಸಿದೆ.
ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಖಾಸಗಿ ಟೆಲಿಕಾಂ ಕಂಪನಿಗಳ ಮೊಬೈಲ್ ರೀಚಾರ್ಜ್ ಬೆಲೆ ಹೆಚ್ಚಳ; ಡಿಎಸ್ಎಸ್ ಖಂಡನೆ
“ಉಸ್ತುವಾರಿ ಸಚಿವರುಗಳು ಜಿಲ್ಲೆಯ ಪ್ರಮುಖ ಕಚೇರಿ/ಸ್ಥಳಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಾಗೂ ಜಿಲ್ಲೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ(ಕೆಡಿಪಿ) ಸಭೆಗಳಲ್ಲಿ ಕಡ್ಡಾಯವಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜೊತೆಗೆ ಹಾಜರಿದ್ದು, ಸಮನ್ವಯತೆಯೊಂದಿಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು” ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.