ರಾಯಚೂರು | ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ; 31 ಮಂದಿ ಆಸ್ಪತ್ರೆಗೆ ದಾಖಲು

Date:

Advertisements

ವಸತಿನಿಲಯದಲ್ಲಿ ಊಟ ಸೇವಿಸಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಸುಮಾರು 31 ಮಂದಿ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ.

ವಿದ್ಯಾರ್ಥಿಗಳಿಗೆ ವಿಷಪೂರಿತವಾಗಿರುವ ಆಹಾರ ನೀಡಿರುವುದು ಮತ್ತು ನೀರಿನಲ್ಲಿ ಬ್ಲೀಚಿಂಗ್ ಪೌಡರ್ ಬಿದ್ದಿದ್ದೇ ವಿದ್ಯಾರ್ಥಿಗಳ ಅಸ್ವಸ್ಥತೆಗೆ ಕಾರಣ ಎನ್ನಲಾಗಿದೆ.

ಮೊರಾರ್ಜಿ ಶಾಲೆಯಲ್ಲಿ ಎಂದಿನಂತೆ ಶನಿವಾರ ರಾತ್ರಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಊಟ ನೀಡಲಾಗಿದೆ. ಊಟ ಮಾಡಿದ ಕೇವಲ ಅರ್ಧ ಗಂಟೆ ಬಳಿಕ  ಹೊಟ್ಟೆ ನೋವು, ವಾಂತಿಬೇಧಿ ಶುರುವಾಗಿದೆ. ವಿದ್ಯಾರ್ಥಿಗಳ ನರಳಾಟ ಶುರುವಾಗುತ್ತಲೇ ತಕ್ಷಣವೇ ಮೇಲಾಧಿಕಾರಿಗಳಿಗೆ ವಾರ್ಡನ್ ಸುನೀತಾ ಮಾಹಿತಿ ನೀಡಿದ್ದಾರೆ. ಅಲ್ಲಿಂದ 108 ವಾಹನ ಸೇರಿದಂತೆ ಖಾಸಗಿ ವಾಹನಗಳನ್ನು ತೆಗೆದುಕೊಂಡು ಮಾನವಿ ನಗರದ ಮಕ್ಕಳ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Advertisements

ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ

ತೀವ್ರ ಅಸ್ವಸ್ಥಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ರಾಯಚೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುದ್ದಿ ತಿಳಿಯುತ್ತಲೇ ತಹಶೀಲ್ದಾರ್‌ ರಾಜು ಪಿರಂಗಿ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಆಹಾರ ಇಲಾಖೆಯ ಅಧಿಕಾರಿ ಬನದೇಶ್ವರ ಭೇಟಿ ನೀಡಿ ಮಕ್ಕಳಿಗೆ ನೀಡುವ ಆಹಾರ ಸಾಮಗ್ರಿಗಳನ್ನು ಮಾದರಿಗೆ ತೆಗಿದುಕೊಂಡು ಪ್ರಯೋಗಲಕ್ಕೆ ಕಳಿಸಿಕೊಡುವುದಾಗಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ಐಎಎಸ್ ಅಧಿಕಾರಿ ವಿ ರಶ್ಮಿ ಮಹೇಶ್ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕ

ಸುದ್ದಿ ತಿಳಿಯುತ್ತಲೇ ದುಃಖದಿಂದ ತಮ್ಮ ಮಕ್ಕಳ ಹತ್ತಿರಕ್ಕೆ ಧಾವಿಸಿದ ಪೋಷಕರು ಜಿಲ್ಲಾ ಕೋ-ಆರ್ಡಿನೇಟರ್‌ ಅಮರೇಶ್ ಗೌಡ ಪಾಟೀಲ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ತರಾಟೆಗೆ ತೆಗುದುಕೊಂಡಿದ್ದು, ಶಾಲೆಯ ಮುಖ್ಯ ಶಿಕ್ಷಕರು ಮತ್ತು ವಾರ್ಡನ್ ಅವರನ್ನು ಕೂಡಲೇ ಅಮಾನತು ಮಾಡುವಂತೆ ತೀವ್ರವಾಗಿ ಅಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X