ಸುಮಾರು 120ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಹಾಥರಸ್ ಕಾಲ್ತುಳಿತದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕೋರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.
ಸಂತ್ರಸ್ತ ಕುಟುಂಬಗಳ ಸಮಸ್ಯೆಗಳನ್ನು ತನ್ನ ಪತ್ರದಲ್ಲಿ ಬರೆದಿರುವ ರಾಹುಲ್ ಗಾಂಧಿ ಪರಿಹಾರದ ಮೊತ್ತವನ್ನು ಹೆಚ್ಚಿಸಿ ಸಂತ್ರಸ್ತರ ಕುಟುಂಬಗಳಿಗೆ ಆದಷ್ಟು ಬೇಗ ನೀಡಬೇಕೆಂದು ಒತ್ತಾಯಿಸಿದ್ದಾರೆ. ಈ ಪತ್ರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
“ಹಾಥರಸ್‌ನಲ್ಲಿ ಸಂಭವಿಸಿದ ಕಾಲ್ತುಳಿತ ಅವಘಡದಲ್ಲಿ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿ, ಅವರ ದುಃಖವನ್ನು ಕೇಳಿ ಮತ್ತು ಅವರ ಸಮಸ್ಯೆಗಳನ್ನು ತಿಳಿದ ನಂತರ ಉತ್ತರ ಪ್ರದೇಶದ ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರದ ಮೂಲಕ ಈ ಬಗ್ಗೆ ತಿಳಿಸಲಾಗಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಹಾಥರಸ್ ಕಾಲ್ತುಳಿತ | ದೆಹಲಿಗೆ ಪರಾರಿಯಾಗಿದ್ದ ಪ್ರಮುಖ ಆರೋಪಿ ಬಂಧನ
“ಪರಿಹಾರ ಮೊತ್ತವನ್ನು ಹೆಚ್ಚಿಸಿ ಆದಷ್ಟು ಬೇಗ ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಲಾಗಿದೆ. ಈ ದುಃಖದ ಸಮಯದಲ್ಲಿ ಅವರಿಗೆ ನಮ್ಮ ಸಾಮೂಹಿಕ ಸಂತಾಪ ಮತ್ತು ಬೆಂಬಲದ ಅಗತ್ಯವಿದೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
“121 ಜನರ ಸಾವಿಗೆ ಕಾರಣವಾದ ದುರಂತ ಘಟನೆಯಲ್ಲಿ ಜಿಲ್ಲಾಡಳಿತದ ಲೋಪವನ್ನು ಗುರುತಿಸಲು ನಿಷ್ಪಕ್ಷಪಾತ ತನಿಖೆ ಸಹಾಯ ಮಾಡುತ್ತದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸುವುದನ್ನು ತಡೆಯಲು ಇದು ಸಹಾಯ ಮಾಡುತ್ತದೆ ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯ ಅಗತ್ಯವಿದೆ” ಎಂದು ರಾಹುಲ್ ಗಾಂಧಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಶುಕ್ರವಾರ ರಾಹುಲ್ ಗಾಂಧಿ ಹತ್ರಾಸ್‌ನಲ್ಲಿ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದ್ದು, ಅವರಿಗೆ ಸಾಂತ್ವಾನ ನೀಡಿದ್ದಾರೆ. ತನ್ನಿಂದ ಸಾಧ್ಯವಾಗುವ ರೀತಿಯಲ್ಲಿ ಸಹಾಯ ಮಾಡುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
ಅದಾದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ, “ಆಡಳಿತದಲ್ಲಿ ಕೆಲವು ಲೋಪ ಉಂಟಾದ ಕಾರಣದಿಂದಾಗಿ ಈ ಭಾರೀ ದುರಂತ ಸಂಭವಿಸಿದೆ. 80,000 ಜನರಿಗೆ ಅನುಮತಿ ಇದ್ದಾಗ, ಇಷ್ಟೊಂದು ಜನರು ಅಲ್ಲಿಗೆ ಬಂದಿದ್ದು ಹೇಗೆ? ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.
हाथरस में भगदड़ हादसे से प्रभावित पीड़ित परिवारों से मुलाकात कर, उनका दुख महसूस कर और समस्याएं जान कर उत्तर प्रदेश के माननीय मुख्यमंत्री योगी आदित्यनाथ जी को पत्र के माध्यम से उनसे अवगत कराया।
मुख्यमंत्री जी से मुआवजे की राशि को बढ़ाकर शोकाकुल परिवारों को जल्द से जल्द प्रदान… pic.twitter.com/omrwp3QGNP
— Rahul Gandhi (@RahulGandhi) July 7, 2024