ಹಾಸನ ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಈಗಾಗಲೇ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜತೆಗೆ ಡೆಂಘೀ ನಿಯಂತ್ರಣಕ್ಕೆ ಜನಸಾಮಾನ್ಯರೂ ಸಹಕರಿಸುವ ಮೂಲಕ ಮನೆ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಿ ಸ್ವಚ್ಛತೆ ಕಾಪಾಡಬೇಕು ಎಂದು ವೈದ್ಯಕೀಯ ಶಿಕ್ಷಣ, ಜೀವನೋಪಾಯ ಹಾಗೂ ಕೌಶಲ್ಯಭಿವೃದ್ಧಿ ಇಲಾಖೆಯ ಸಚಿವ ಡಾ ಶರಣ್ ಪ್ರಕಾಶ್ ಪಾಟೀಲ್ ಕೋರಿದ್ದಾರೆ.
ಹಾಸನ ವೈದ್ಯಕೀಯ ಆಸ್ಪತ್ರೆ, ಐಟಿಐ ಕಾಲೇಜು ಮೊದಲಾದ ಸ್ಥಳಗಳಿಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದರು.
ಮನೆ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಿ ಸ್ವಚ್ಛತೆ ಕಾಪಾಡುವ ಮೂಲಕ
“ಜ್ವರ ಕಾಣಿಸಿಕೊಂಡು ಖಾಸಗಿ ಆಸ್ಪತ್ರೆಗಳಿಗೆ ಬರುವವರಿಗೂ ಕೂಡಲೇ ಡೆಂಘೀ ಪರೀಕ್ಷೆ ಮಾಡಲು ಈಗಾಗಲೇ ನಿರ್ದೇಶನ ನೀಡಲಾಗಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿ ಪೂರ್ಣಗೊಳಿಸಲು 54 ಕೋಟಿಯಷ್ಟು ಅನುದಾನದ ಅಗತ್ಯವಿದೆ. ಹಾಗಾಗಿ ಆರ್ಥಿಕ ಇಲಾಖೆಗೆ ಮನವಿ ಮಾಡಲಾಗಿದೆ” ಎಂದರು.
“ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಮುಖ್ಯಮಂತ್ರಿಗಳು ಮಾರ್ಚ್ ತಿಂಗಳಲ್ಲಿ ಉದ್ಘಾಟನೆ ಮಾಡಿದರು. ಪೂರ್ಣ ಪ್ರಮಾಣದಲ್ಲಿ ಸೇವೆ ನೀಡಲು ಉಪಕರಣಗಳ ಅವಶ್ಯಕತೆ ಇದ್ದು, ಶೀಘ್ರವಾಗಿ ಅನುದಾನ ಬಿಡುಗಡೆ ಮಾಡಲು ಕ್ರಮವಹಿಸುತ್ತೇವೆ” ಎಂದು ಭರವಸೆ ನೀಡಿದರು.
“ಹಿಮ್ಸ್ ಕಾಲೇಜಿನಲ್ಲಿ 16 ಹುದ್ದೆಗಳು ಖಾಲಿ ಇದ್ದು, ಶೀಘ್ರವಾಗಿ ಭರ್ತಿ ಮಾಡಲಾಗುವುದು ಹಾಗೂ ಹೆಚ್ಚುವರಿಯಾಗಿ 16 ಮಂದಿ ಪ್ರಾಧ್ಯಾಪಕರ ಹುದ್ದೆಗಳಿಗೆ ಬೇಡಿಕೆ ಇದೆ. ಇದರ ಬಗ್ಗೆ ಆರ್ಥಿಕ ಇಲಾಖೆಯಿಂದ ಅನುಮತಿ ಪಡೆದು ನೇಮಕ ಮಾಡಿಕೊಳ್ಳುತ್ತೇವೆ” ಎಂದರು.
ಈ ಸುದ್ದಿ ಓದಿದ್ದೀರಾ? ಗದಗದಲ್ಲಿ ಡೆಂಘೀ ಜ್ವರಕ್ಕೆ ಶಿರುಂಜ ಗ್ರಾಮದ ಬಾಲಕ ಮೊದಲ ಬಲಿ
“ಹಾಸನದ ವೈದ್ಯಕೀಯ ಆಸ್ಪತ್ರೆಯಲ್ಲಿ ಈಗಾಗಲೇ 1,200 ಬೆಡ್‌ಗಳು ಸಾರ್ವಜನಿಕರ ಸೇವೆಗೆ ಲಭ್ಯವಿದೆ. ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಹೆಚ್ಚಿನ ಸಿಬ್ಬಂದಿಗಳ ಅವಶ್ಯಕತೆ ಇದ್ದು, ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.
