ಆಗುಂಬೆಯಲ್ಲಿ ನಾಪತ್ತೆಯಾಗಿದ್ದ ಯುವತಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಾಲೂರು ಸಮೀಪದ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಲೆ ಆರೋಪಿಯನ್ನು ಆಗುಂಬೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಮಣಿಕಂಠ ಎಂಬಾತ ನಾಲೂರು ಸಮೀಪದವನಾಗಿದ್ದು, ಯುವತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ ನಾಲೂರು ಸಮೀಪ ಹೊಂಡದಲ್ಲಿ ಹಾಕಿರುವುದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ. ತಾಲೂಕಿನ ಹಸಿಮನೆ ಗ್ರಾಮದ ಕುಶಾಲ್ ಅವರ ಮಗಳು ಪೂಜಾ ಎ ಕೆ(24) ಮೃತ ಯುವತಿ.
ಈ ಸುದ್ದಿ ಓದಿದ್ದೀರಾ? ಹಾಸನ | ಅರ್ಜುನನ ಸ್ಮಾರಕ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ; ₹50 ಲಕ್ಷ ವೆಚ್ಚದಲ್ಲಿ ಸ್ಮಾರಕ ನಿರ್ಮಾಣ
ಯುವತಿ ಪೂಜಾ ಜೂನ್ 30ರಂದು ನಾಪತ್ತೆಯಾಗಿದ್ದರು. ಆಗುಂಬೆ ಪೊಲೀಸ್ ಠಾಣೆ ಪಿಎಸ್‌ಐ ರಂಗನಾಥ್ ಅಂತರಗಟ್ಟಿ ನೇತೃತ್ವದಲ್ಲಿ ಈ ಪ್ರಕರಣದ ತನಿಖೆ ನಡೆದಿದ್ದು, ಶನಿವಾರ ರಾತ್ರಿ 11ರ ವೇಳೆ ಆರೋಪಿ ಮಣಿಯನ್ನು ಘಟನೆ ನಡೆದ ಸ್ಥಳಕ್ಕೆ ಕರೆದೊಯ್ದಿದ್ದು, ಸ್ಥಳ ಮಹಜರು ಮಾಡಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
