‘ಹಾಥರಸ್ ಕಾಲ್ತುಳಿತ ಆಕಸ್ಮಿಕವಲ್ಲ ಪಿತೂರಿ’ ಎಂದ ಭೋಲೆ ಬಾಬಾ ಪರ ವಕೀಲ!

Date:

Advertisements

ಸ್ವಯಂಘೋಷಿತ ದೇವಮಾನವ ಸೂರಜ್‌ಪಾಲ್ ಅಲಿಯಾಸ್ ನಾರಾಯಣ್ ಸಕರ್ ಹರಿ ಅಲಿಯಾಸ್ ಭೋಲೆ ಬಾಬಾ ಸತ್ಸಂಗದಲ್ಲಿ ನಡೆದ ಹಾಥರಸ್ ಕಾಲ್ತುಳಿತ ಪ್ರಕರಣವು ಆಕಸ್ಮಿಕವಲ್ಲ ಪಿತೂರಿಯಾಗಿದೆ ಎಂದು ಭೋಲೆ ಬಾಬಾ ಪರ ವಕೀಲ ಎಪಿ ಸಿಂಗ್ ಹೇಳಿದ್ದಾರೆ.

ಭಾನುವಾರ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಎಪಿ ಸಿಂಗ್, “ಜುಲೈ 2ರಂದು ಸತ್ಸಂಗದಲ್ಲಿ 121 ಜನರು ಸಾವಿಗೆ ಕಾರಣವಾದ ಕಾಲ್ತುಳಿತ ಸಂದರ್ಭದಲ್ಲಿ ಕನಿಷ್ಠ 15-16 ಜನರು ತಮ್ಮ ಮುಖವನ್ನು ಮುಚ್ಚಿಕೊಂಡಿದ್ದರು. ಈ ಜನರು ಗುಂಪಿನೆಡೆ ವಿಷಕಾರಿ ಅನಿಲ ಎರಚಿದ್ದಾರೆ. ಬಳಿಕ ಕಾರಿನಲ್ಲಿ ಪರಾರಿಯಾಗಿದ್ದಾರೆ” ಎಂದು ತಿಳಿಸಿದರು.

“ಭೋಲೆ ಬಾಬಾ ಅವರ ಬಂಧನ ಮಾಡಿಸಲು ಪಿತೂರಿ ನಡೆದಿದೆ” ಎಂದ ಎಪಿ ಸಿಂಗ್ ಪೊಲೀಸ್, ಅಗ್ನಿಶಾಮಕ ಮತ್ತು ಸಂಚಾರ ಇಲಾಖೆಗಳಿಂದ ತೆಗೆದುಕೊಂಡ ಅನುಮತಿಯ ರಸೀದಿಗಳನ್ನು ತೋರಿಸಿದರು.

ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಳ್ಳುವಂತೆ ಎಪಿ ಸಿಂಗ್ ಪೊಲೀಸರ ಬಳಿ ಮನವಿ ಮಾಡಿದ್ದು, “ಸಿಸಿಟಿವಿ ದೃಶ್ಯಾವಳಿ ಅಪರಾಧಿಗಳನ್ನು ಬಂಧಿಸುವಲ್ಲಿ ಪ್ರಮುಖ ಅಸ್ತ್ರವಾಗಿದೆ. ಇದು ಆಕಸ್ಮಿಕವಾಗಿ ನಡೆದಿರುವುದಲ್ಲ, ಇದು ಕೊಲೆ” ಎಂದರು.

ಇದನ್ನು ಓದಿದ್ದೀರಾ?   ಹಾಥರಸ್ ಕಾಲ್ತುಳಿತ | ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕೋರಿ ಯೋಗಿ ಆದಿತ್ಯನಾಥ್‌ಗೆ ರಾಹುಲ್ ಗಾಂಧಿ ಪತ್ರ

ಇದುವರೆಗೆ ಉತ್ತರ ಪ್ರದೇಶ ಪೊಲೀಸರು ಇಬ್ಬರು ಮಹಿಳೆಯರು ಮತ್ತು ಮೂವರು ಹಿರಿಯ ನಾಗರಿಕರು ಸೇರಿದಂತೆ ಒಂಬತ್ತು ಜನರನ್ನು ಬಂಧಿಸಿದ್ದಾರೆ. ಇವರಲ್ಲಿ, ಹಾಥರಸ್ ಸತ್ಸಂಗದ ಪ್ರಮುಖ ಸಂಘಟಕ ದೇವ್ ಪ್ರಕಾಶ್ ಮಧುಕರ್ ಸೇರಿದಂತೆ ಸತ್ಸಂಗದ ಹಲವಾರು ಸೇವಾದಾರರನ್ನು (ಸ್ವಯಂಸೇವಕರು) ಆರೋಪಿಗಳೆಂದು ಉಲ್ಲೇಖಿಸಲಾಗಿದೆ.

ಪೊಲೀಸರ ಪ್ರಕಾರ ಮಧುಕರ್ ಅವರು ನಾರಾಯಣ ಸಾಕರ್‌ ಹರಿ ಕಾರ್ಯಕ್ರಮಗಳಿಗೆ ನಿಧಿಸಂಗ್ರಹಗಾರರಾಗಿ ಕೆಲಸ ಮಾಡಿದ್ದರು, ದೇಣಿಗೆ ಸಂಗ್ರಹಿಸಿದ್ದರು. ಮಧುಕರ್ ಸ್ವತಃ ಪೊಲೀಸರಿಗೆ ಶರಣಾಗಿದ್ದಾರೆ ಎಂದು ಎಪಿ ಸಿಂಗ್ ಹೇಳಿದ್ದಾರೆ. ಇನ್ನು ಭೋಲೆ ಬಾಬಾ ಅಲಿಯಾಸ್ ನಾರಾಯಣ್ ಸಕರ್ ಹರಿ ನಾಪತ್ತೆಯಾಗಿದ್ದು, ಎಫ್‌ಐಆರ್‌ನಲ್ಲಿ ಹೆಸರು ಆರೋಪಿ ಎಂದು ಉಲ್ಲೇಖಿಸಿಲ್ಲ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

Download Eedina App Android / iOS

X