ಪಶ್ಚಿಮ ಬಂಗಾಳ ರಾಜ್ಯಪಾಲರ ಕಚೇರಿಯ ವಿರುದ್ಧ ಸುಳ್ಳು ವದಂತಿಗಳನ್ನು ಹರಡಲಾಗುತ್ತಿದೆ ಎಂಬ ಆರೋಪದಡಿ ಕೋಲ್ಕತ್ತಾ ಪೊಲೀಸ್ ಆಯುಕ್ತ ವಿನೀತ್ ಗೋಯಲ್ ಹಾಗೂ ಓರ್ವ ಉಪ ಪೊಲೀಸ್ ಆಯುಕ್ತರ ವಿರುದ್ಧ ಶಿಸ್ತು ಕ್ರಮಕ್ಕೆ ಕೇಂದ್ರ ಗೃಹ ಸಚಿವಾಲಯ ಚಾಲನೆ ನೀಡಿದೆ ಎಂದು ಕೇಂದ್ರ ಸರಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ಕೋಲ್ಕತ್ತಾ ಪೊಲೀಸ್ ಆಯುಕ್ತ ವಿನೀತ್ ಗೋಯಲ್ ಹಾಗೂ ಕೋಲ್ಕತ್ತಾ ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತ ಇಂದಿರಾ ಮುಖರ್ಜಿ ಸಾರ್ವಜನಿಕ ಸೇವಕರಾಗಲು ಅನರ್ಹರು ಎಂಬಂತೆ ಕಾರ್ಯಕಾರ್ಯನಿರ್ವಹಿಸುತ್ತಿದ್ದಾರೆ” ಎಂದು ಆರೋಪಿಸಿ, ಅವರ ವಿರುದ್ಧ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ ವಿ ಆನಂದ ಬೋಸ್ ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಿದ ನಂತರ ಕೇಂದ್ರ ಗೃಹ ಸಚಿವಾಲಯ ಈ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಣಿ ಅವಘಡಗಳಿಂದ ಬಯಲಾದ ಮೋದಿಯವರ ‘ಅಭಿವೃದ್ಧಿ ಮತ್ತು ಆಡಳಿತ’
ಚುನಾವಣೋತ್ತರ ಹಿಂಸಾಚಾರದ ಸಂತ್ರಸ್ತರು ನನ್ನನ್ನು ಭೇಟಿಯಾಗಲು ಅಗತ್ಯ ಅನುಮತಿಯನ್ನು ನೀಡಿದ ಹೊರತಾಗಿಯೂ ಕೋಲ್ಕತ್ತಾ ಪೊಲೀಸ್ ಅಧಿಕಾರಿಗಳು ಅವರಿಗೆ ನನ್ನನ್ನು ಭೇಟಿಯಾಗಲು ಅವಕಾಶ ನೀಡಿಲ್ಲ ಎಂದು ಕಳೆದ ಜೂನ್ ತಿಂಗಳಲ್ಲಿ ರಾಜ್ಯಪಾಲ ಸಿ ವಿ ಆನಂದ್ ಬೋಸ್ ಕೇಂದ್ರ ಗೃಹ ಸಚಿವರಿಗೆ ವರದಿ ಸಲ್ಲಿಸಿದ್ದರು.
“ಪಶ್ಚಿಮ ಬಂಗಾಳ ರಾಜ್ಯಪಾಲರು ಐಪಿಎಸ್ ಅಧಿಕಾರಿಗಳ ವಿರುದ್ಧ ಸಲ್ಲಿಸಿದ ವಿಸ್ತೃತ ವರದಿಯನ್ನು ಆಧರಿಸಿ, ಅವರ ವಿರುದ್ಧ ಕೇಂದ್ರ ಗೃಹ ಸಚಿವಾಲಯವು ಶಿಸ್ತು ಕ್ರಮಕ್ಕೆ ಚಾಲನೆ ನೀಡಿದೆ.ಪತ್ರದ ಪ್ರತಿಗಳನ್ನು ಜುಲೈ 4 ರಂದು ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ.