ಬೈಕ್ ಮತ್ತು ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಯುವಕನೊಬ್ಬ ಸಾವನಪ್ಪಿದ ಘಟನೆ ಬಸವಕಲ್ಯಾಣ ತಾಲೂಕಿನ ಹಳ್ಳಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.
ಚೌಕಿವಾಡಿ ಗ್ರಾಮದ ಅಮೂಲ್ ರಾಮ್ ಪಾಟೀಲ್ (27) ಮೃತಪಟ್ಟ ಯುವಕ.
ಹೈದರಾಬಾದ್ ಕಡೆಯಿಂದ ಮಹಾರಾಷ್ಟ್ರದ ಉಮ್ಮರ್ಗಾ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ಎದುರಿನಿಂದ ಬಂದ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಬೈಕ್ ಮೇಲೆ ಕುಳಿತಿದ್ದ ಇನ್ನೊಬ್ಬ ಯುವಕ ಸಿದ್ದೇಶ್ವರ ಹಾಗೂ ಕಾರಿನಲ್ಲಿದ್ದ ಓರ್ವ ಮಹಿಳೆಗೆ ಗಾಯಗಳಾಗಿವೆ. ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಸಿಪಿಐ ಅಲಿಸಾಬ್, ಸಬ್ ಇನ್ ಸ್ಪೇಕ್ಟರ್ ಸುವರ್ಣ ಭೇಟಿ ನೀಡಿದ್ದಾರೆ.
ಈ ಕುರಿತು ಬಸವಕಲ್ಯಾಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.