ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ 10 ಆರೋಪಿಗಳ ಬೆರಳಚ್ಚು ಹೊಂದಾಣಿಕೆ?

Date:

Advertisements

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸಂಗ್ರಹಿಸಿದ್ದ ಬೆರಳಚ್ಚು ಮಾದರಿ, ಬಂಧಿತ ಆರೋಪಿಗಳ ಪೈಕಿ ಕೆಲವರಿಗೆ ಹೊಂದಾಣಿಕೆ ಆಗಿರುವುದು ದೃಢಪಟ್ಟಿದೆ ಎಂದು ಮೂಲಗಳು ಹೇಳಿವೆ.

ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಅವರ ಆಪ್ತೆ ಪವಿತ್ರಾಗೌಡ, ಪವನ್, ಪ್ರದೋಷ್ ಸೇರಿದಂತೆ 17 ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದರು. ಆರೋಪಿಗಳಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ 14 ಮಂದಿ ಹಾಗೂ ತುಮಕೂರು ಜಿಲ್ಲಾ ಕಾರಾಗೃಹದಲ್ಲಿ ಮೂವರು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. 17 ಮಂದಿಯ ಪೈಕಿ 10 ಮಂದಿಯ ಬೆರಳಚ್ಚು ಹೊಂದಾಣಿಕೆ ಆಗಿದೆ’ ಎಂದು ಮೂಲಗಳು ಹೇಳಿವೆ.

ಜೂನ್ 9ರಂದು ಪಟ್ಟಣಗೆರೆಯ ಶೆಡ್‌ನಲ್ಲಿ ಕೊಲೆ ನಡೆದಿತ್ತು. ಕೃತ್ಯ ನಡೆದ ಮರುದಿನ ನಾಲ್ವರು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದರು. ಜೂನ್ 11ರಂದು ದರ್ಶನ್ ಸೇರಿ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

Advertisements

ಡಿಎನ್ಎ ಪರೀಕ್ಷೆಗಾಗಿ 10 ಮಂದಿಯ ರಕ್ತ ಹಾಗೂ ಕೂದಲು ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಅದರ ವರದಿಯೂ ಬರಬೇಕಿದೆ’ ಎಂದು ಪೊಲೀಸರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಣಿ ಅವಘಡಗಳಿಂದ ಬಯಲಾದ ಮೋದಿಯವರ ‘ಅಭಿವೃದ್ಧಿ ಮತ್ತು ಆಡಳಿತ’

ಬಂಧಿತ ಆರೋಪಿ ಪ್ರದೋಷ್ ಸ್ನೇಹಿತ ಕಾರ್ತಿಕ್ ಪುರೋಹಿತ್ ಅವರಿಗೆ ಸೋಮವಾರ ಮತ್ತೆ ವಿಚಾರಣೆಗೆ ಬರುವಂತೆ ಪೊಲೀಸರು ನೋಟಿಸ್ ಜಾರಿಮಾಡಿದ್ದಾರೆ. ಶನಿವಾರವೂ ಕಾರ್ತಿಕ್ ವಿಚಾರಣೆ ನಡೆಸಲಾಗಿತ್ತು.

‘ಕೃತ್ಯ ನಡೆದ ದಿನ ಪಟ್ಟಣಗೆರೆಯ ಶೆಡ್‌ಗೆ ಪ್ರದೋಷ್ ಜತೆಗೆ ಕಾರ್ತಿಕ್ ಪುರೋಹಿತ್ ಬಂದಿದ್ದರು. ಇತರ ಆರೋಪಿಗಳ ಜತೆಗೂ ಕಾರ್ತಿಕ್‌ಗೆ ಒಡನಾಟವಿದ್ದ ಮಾಹಿತಿಯಿದೆ. ಈಗಾಗಲೇ ಕೆಲವು ಮಾಹಿತಿ ಪಡೆದುಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿ ಪಡೆದು ಹೇಳಿಕೆ ದಾಖಲು ಮಾಡಿಕೊಳ್ಳಲು ಮತ್ತೆ ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಮೊದಲನೇ ಆರೋಪಿ ಪವಿತ್ರಾಗೌಡ ಅವರ ಸ್ನೇಹಿತೆ ಸಮತಾ ಅವರಿಗೂ ಪೊಲೀಸರು ನೋಟಿಸ್ ಜಾರಿಮಾಡಿದ್ದಾರೆ. ಅವರೂ ಇಂದು ವಿಚಾರಣೆಗೆ ಬರುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

‘ಕೃತ್ಯ ನಡೆದ ಮರುದಿನ ಸಮತಾ ಅವರು ಪವಿತ್ರಾಗೌಡ ಅವರ ಮನೆಗೆ ಭೇಟಿ ನೀ ಡಿದ್ದರು. ಅಲ್ಲದೇ ಆರೋಪಿ ಧನರಾಜ್‌ ಫೋನ್ ಪೇ ಮೂಲಕ 3 ಸಾವಿರದಷ್ಟು ಹಣ ಹಾಕಿದ್ದರು ಎನ್ನಲಾಗಿದೆ. ರೇಣುಕಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದ ಬಗ್ಗೆ ಪವಿತ್ರಾ ಅವರು ಸಮತಾ ಜತೆಗೆ ಹೇಳಿಕೊಂಡಿರುವ ಸಾಧ್ಯತೆಯಿದ್ದು ಅವರಿಗೂ ನೋಟಿಸ್ ನೀಡಲಾಗಿದೆ’ ಎಂದು ಮೂಲಗಳು ಹೇಳಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X