ಹಳೆ ವೈಷಮ್ಯ ಹಿನ್ನೆಲೆ ಗ್ರಾಮ ಪಂಚಾಯತಿ ಸದಸ್ಯನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಬೈಲನರಸಾಪುರ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಅಪಾಕ್ ಅಮಿರ್ ಖಾನ್ (45) ಕೊಲೆಯಾದ ಗ್ರಾ.ಪಂ. ಸದಸ್ಯ ಎಂದು ಗುರುತಿಸಲಾಗಿದೆ.
ಅದೇ ಗ್ರಾಮದ ವ್ಯಕ್ತಿವೋರ್ವ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದ್ದು, ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.