ಚಿಕ್ಕಮಗಳೂರು | ಪ್ರವಾಸಿತಾಣಕ್ಕೆ ಬರುವ ಪ್ರವಾಸಿಗರಿಗೆ ಆನ್‌ಲೈನ್ ನೋಂದಣಿ ಕಡ್ಡಾಯ; ಸ್ಥಳೀಯರ ಆಕ್ರೋಶ  

Date:

Advertisements

ಪ್ರವಾಸಿತಾಣಗಳಿಗೆ ಬರುವ ಪ್ರವಾಸಿಗರಿಗೆ ಆನ್‌ಲೈನ್‌ ನೋಂದಣಿ ಕಡ್ಡಾಯ. ಹಾಗಾಗಿ ಪ್ರವಾಸಕ್ಕೆ ಬರುವವರು ಆನ್‌ಲೈನ್ ಮೂಲಕ ಕಾಯ್ದಿರಿಸಬೇಕೆಂದು ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಚಿಕ್ಕಮಗಳೂರು ಜಿಲ್ಲೆಯು ಗಿರಿಶ್ರೇಣಿಗಳ ಪರ್ವತಗಳಿಂದ ಕಂಗೊಳಿಸುತ್ತಿವೆ. ಇಲ್ಲಿ ನೋಡುಗರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಮಳೆಗಾಲ ಬಂದರೆ ಪ್ರವಾಸಿಗರಿಗೆ ರೋಮಾಂಚನವಾಗುತ್ತದೆ. ಯಾಕೆಂದರೆ ಇಲ್ಲಿ ಮಳೆ ಬೀಳುವ ಸಮಯದಲ್ಲಿ ಸುತ್ತಲೂ ಗಾಳಿಯ ವೇಗ ಹಾಗೂ ಮಂಜು ಮುಸುಕಿರುವ ಹಿಮದ ರಾಶಿಯೊಂದಿಗೆ ಕೂಡಿದೆ.

ಬೇರೆ ಬೇರೆ ರಾಜ್ಯ, ಜಿಲ್ಲೆ ಹಾಗೂ ದೇಶ ವಿದೇಶಗಳಿಂದಲೂ ಬರುವವವರ ಸಂಖ್ಯೆ ಹೆಚ್ಚಿದೆ. ಚಿಕ್ಕಮಗಳೂರಿನ ಅನೇಕ ಪ್ರವಾಸಿ ತಾಣಕ್ಕೆ ಭೇಟಿ ಕೊಟ್ಟು ಅದೇ ಮಾರ್ಗವಾಗಿ ಚಿಕ್ಕಮಗಳೂರಿನಿಂದ ಸುಮಾರು 25-30 ಕಿಲೋಮೀಟರ್ ದೂರವಿರುವ ಮುಳ್ಳಯ್ಯನ ಗಿರಿ ಹಾಗೂ ಬಾಬಾ ಬುಡನ್ ಗಿರಿಗೆ ಪ್ರವಾಸಿಗರು ಭೇಟಿ ಕೊಡುತ್ತಾರೆ. ಇತ್ತೀಚಿನ ದಿನಗಳಲ್ಲಿ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಕಾಯ್ದಿರಿಸಬೇಕೆಂಬ ತೀರ್ಮಾನವನ್ನು ಜಿಲ್ಲಾಡಳಿತ ಹೊರಡಿಸಿದೆ.

Advertisements

ಪ್ರವಾಸಿಗರಿಗೆ ಆನ್‌ಲೈನ್‌ ನೋಂದಣಿ ಕಡ್ಡಾಯ

ಜಿಲ್ಲೆಯ ಎತ್ತಿನ ಭುಜ, ಕೆಮ್ಮಣ್ಣು ಗುಂಡಿ, ಹೊನ್ನಮ್ಮನಹಳ್ಳ ಸೇರಿದಂತೆ ಹಲವು ಪ್ರವಾಸಿತಾಣಗಳಿಗೆ ಹಾಗೂ ಗಿರಿಶ್ರೇಣಿಗಳಿಗೆ ಬರುವ ಪ್ರವಾಸಿಗರಿಗೆ ಆನ್‌ಲೈನ್ ಮೂಲಕ ವ್ಯವಸ್ಥೆ ಮಾಡಿದರೆ ತುಂಬಾ ಕಷ್ಟವಾಗುತ್ತದೆ.

ಪ್ರವಾಸಿಗರಿಗೆ ಆನ್‌ಲೈನ್‌ ನೋಂದಣಿ ಕಡ್ಡಾಯ

ಜನಪರ ವಾದಿ ಗೌಸ್ ಮೊಹಿದ್ದೀನ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಆನ್‌ಲೈನ್‌ ಮೂಲಕ ಕಾಯ್ದಿರಿಸಿದ ಸಂಖ್ಯೆಯಲ್ಲಿ ಜನರು ಬರುವುದಕ್ಕೆ ಮಾತ್ರ ಅವಕಾಶ ಎಂದಾದರೆ ಪ್ರವಾಸ ನೋಡುಗರ ಸಂಖ್ಯೆ ಕಡಿಮೆ ಆಗುತ್ತದೆ. ಕೆಲವರು ಓದಿರುತ್ತಾರೆ, ವಿದ್ಯಾವಂತರಾಗಿರುತ್ತಾರೆ. ಇನ್ನೂ ಕೆಲವರಿಗೆ ಆನ್‌ಲೈನ್‌ ಬಳಸುವುದು ಹೇಗೆಂದು ಗೊತ್ತಿರುವುದಿಲ್ಲ. ಅನಕ್ಷರಸ್ಥರಿಗೆ ಹಾಗೂ ಇನ್ನೂ ಕೆಲವು ಜನರಿಗೆ ಆನ್‌ಲೈನ್‌ ಬಳಕೆ ಮಾಡುವುದು ಗೊತ್ತಾಗುವುದಿಲ್ಲ. ಅಂಥವರಿಗೆಲ್ಲ ತುಂಬಾ ತೊಂದರೆಯಾಗುತ್ತದೆ. ಈ ಬಗ್ಗೆ ಎರಡು ದಿನದ ಹಿಂದೆ ಪತ್ರಿಕಾಗೋಷ್ಟಿ ನಡೆಸಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿಯಲ್ಲಿ ಮುಂದುವರೆದ ಮಳೆಯ ಆರ್ಭಟ: ನೆರೆಯಿಂದಾಗಿ ಮನೆಯಲ್ಲೇ ಸಿಲುಕಿದ್ದ ಹಲವರ ರಕ್ಷಣೆ

“ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅನೇಕ ಧಾರ್ಮಿಕ ಸ್ಥಳಗಳಿದ್ದು, ಆನ್‌ಲೈನ್ ಮೂಲಕ ನೋಂದಣಿ ಮಾಡುವ ನಿರ್ಧಾರದಿಂದ ಸ್ಥಳೀಯ ಭಕ್ತರಿಗೆ ತೊಂದರೆಯಾಗುತ್ತದೆ. ಕೂಡಲೇ ಇದನ್ನು ತಡೆಯಬೇಕು. ಇದರ ಬದಲು ರಸ್ತೆಗಳು ಹಾಗೂ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಪ್ರವಾಸೋದ್ಯಮ ಅಭಿವೃದ್ಧಿ ಹೆಚ್ಚಿಸಲು ಗಮನ ವಹಿಸಿಸಬೇಕು” ಎಂದು ಆನಲೈನ್ ವ್ಯವಸ್ಥೆ ಬಗ್ಗೆ ಚಿಕ್ಕಮಗಳೂರಿನ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
+ posts

ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

2 COMMENTS

  1. Hi hello.
    Actually good Idea.
    Because pollution Avoid, traffic avoid, drank and drive Avoid, mountain overload avoid, accident avoid.then police also relax.
    Because almost people L board drive one of the most Accident in hill Area.
    Please request;
    Above 5 years driving Experience only Allowed in hill road.
    Totally good idea.
    Thanks thanks Lot chika Mangalore .

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X