ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ಕೆ ಜಿ ಪ್ರತಾಪ್ ಕುಮಾರ್ (41) ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಪ್ರತಾಪ್ ಕುಮಾರ್ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ.
ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಕುಮಾರ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪ್ರತಾಪ್ ಕುಮಾರ್ ಪ್ರಯಾಣಿಸಿದ್ದ ಕಾರಿನಲ್ಲಿ ವಿಷದ ಬಾಟಲಿ ಪತ್ತೆಯಾಗಿದೆ.
ಬಿ ಸಿ ಪಾಟೀಲ್ ಪುತ್ರಿ ಸೌಮ್ಯ ಅವರ ಪತಿಯಾಗಿರುವ ಪ್ರತಾಪ್ ಕುಮಾರ್, ತಮ್ಮ ಮಾವನ ಕೃಷಿಗೆ ಸಂಬಂಧಿಸಿದ ವ್ಯವಹಾರ ನೋಡಿಕೊಳ್ಳುತ್ತಿದ್ದರು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಹಿರೇಕೆರೂರಿನಲ್ಲಿದ್ದ ಬಿ ಸಿ ಪಾಟೀಲ್ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
