ಭಾರತೀಯ ಕ್ರಿಕೆಟ್ ತಂಡದ ಟಿ20 ಆಟಗಾರ ಸೂರ್ಯಕುಮಾರ್ ಯಾದವ್ ಸೋಮವಾರ ಮಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಮಂಗಳೂರು ವಿಮಾನ ನಿಲ್ದಾಣದಲ್ಲೇ ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದಾರೆ.
ಸೂರ್ಯಕುಮಾರ್ ಅವರ ಪತ್ನಿ ದೀವಿಶಾ ಶೆಟ್ಟಿ ಕರಾವಳಿ ಮೂಲದವರಾಗಿದ್ದು, ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಈ ದಂಪತಿ ಸೋಮವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.
Sweet surprise for @surya_14kumar & Devisha Shetty! 🍰🎉 The Pranaam team at Mangaluru Airport celebrated their anniversary with a delightful cake. Wishing the lovely couple a year filled with love, happiness, and sweet moments!#GatewayToGoodness #Mangaluru #Airport #Aviation pic.twitter.com/gut9qSTX4b
— Mangaluru Airport (@mlrairport) July 8, 2024
ಈ ಜೋಡಿ ಜು.7ರಂದು ಎಂಟನೇ ವಿವಾಹ ವಾರ್ಷಿಕೋತ್ಸವ ಆಚರಿಸಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ನಿಲ್ದಾಣದ ‘ಪ್ರಣಾಮ್’ ತಂಡದವರು ದಂಪತಿ ಜೊತೆ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಈ ಮಾಹಿತಿಯನ್ನು ವಿಮಾನ ನಿಲ್ದಾಣದ ಆಡಳಿತ ತನ್ನ ‘ಎಕ್ಸ್’ ಖಾತೆಯಲ್ಲಿ ಫೋಟೋ ಸಹಿತ ಹಂಚಿಕೊಂಡಿದೆ.
