ಬೆಂಗಳೂರು ದಕ್ಷಿಣ ಜಿಲ್ಲೆ ರಚನೆಗೆ ಡಿ ಕೆ ಶಿವಕುಮಾರ್ ನೇತೃತ್ವದ ನಿಯೋಗ‌ ಸಿಎಂಗೆ ಮನವಿ

Date:

Advertisements

ಚನ್ನಪಟ್ಟಣ, ರಾಮನಗರ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ಸೇರಿಸಿ ಬೆಂಗಳೂರು ದಕ್ಷಿಣ ಜಿಲ್ಲೆ ರಚನೆ ಮಾಡಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದ ಜನಪ್ರತಿನಿಧಿಗಳ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನಸೌಧದಲ್ಲಿ ಮಂಗಳವಾರ ಸಲ್ಲಿಸಿತು.

ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಶಾಸಕ ಇಕ್ಬಾಲ್ ಹುಸೈನ್, ಮಾಜಿ ಸಂಸದ ಡಿ ಕೆ ಸುರೇಶ್, ಎಂಎಲ್ಸಿಗಳಾದ ಪುಟ್ಟಣ್ಣ, ಎಸ್ ರವಿ, ಸುಧಾಮದಾಸ್, ಬೆಂಗಳೂರು ಮೈಸೂರು ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ರದೇಶ ಯೋಜನೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಘುನಂದನ್ ರಾಮಣ್ಣ, ಮಾಜಿ ಶಾಸಕರಾದ ಸಿ ಎಂ ಲಿಂಗಪ್ಪ, ರಾಜು, ಅಶ್ವಥ್ ಮತ್ತಿತರರು ಉಪಸ್ಥಿತರಿದ್ದರು.

ಮನವಿ ಪತ್ರ ಹೀಗಿದೆ…

Advertisements

ಮೊದಲು ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲ್ಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು. 1986ರ ಸಾಲಿನಲ್ಲಿ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲ್ಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಲಾಯಿತು.

ನಂತರ 2007ರ ಸಾಲಿನಲ್ಲಿ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು.

ಅದೇ ರೀತಿ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕುಗಳನ್ನು ಸೇರಿಸಿಕೊಂಡು ಹೊಸದಾಗಿ ರಾಮನಗರ ಜಿಲ್ಲೆಯನ್ನಾಗಿ 2007ರಲ್ಲಿ ಘೋಷಿಸಿ, ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಲಾಯಿತು.

ಪ್ರಸ್ತುತ, ಬೆಂಗಳೂರು ನಗರದ ಅಂತರಾಷ್ಟ್ರೀಯ ಖ್ಯಾತಿ, ಸಾರ್ವಭೌಮತೆ ಮತ್ತು ಘನತೆ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ಹಾರೋಹಳ್ಳಿ ತಾಲ್ಲೂಕುಗಳಿಗೆ ಲಭ್ಯ ಆಗಬೇಕೆಂಬುದು ಜನರ ಆಶಯ ಮತ್ತು ನಮ್ಮ ಚಿಂತನೆಯೂ ಕೂಡ. ಆದ್ದರಿಂದ, ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ತಾಲ್ಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡಲು ಕೋರುತ್ತೇವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ : ‘ಎಕೆ, ಎಡಿ, ಎಎ’ ಸಮಸ್ಯೆ ಜೀವಂತ ಉಳಿಸಿದ ರಾಜ್ಯ ಸರ್ಕಾರ

'ಸಿ' ಮತ್ತು 'ಡಿ' ಗ್ರೂಪ್ ನೌಕರರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಇತರೆ ಅಸ್ಪೃಶ್ಯ...

ಧರ್ಮಸ್ಥಳ ಸುತ್ತ ವ್ಯವಸ್ಥಿತ ಷಡ್ಯಂತ್ರ, ಹಿಂದಿನ ಶಕ್ತಿಗಳನ್ನು ಎಸ್‌ಐಟಿ ಪತ್ತೆ ಮಾಡಲಿ: ಸುನಿಲ್‍ ಕುಮಾರ್

ಧರ್ಮಸ್ಥಳಕ್ಕೆ ಸಂಬಂಧಿಸಿ ಎಸ್‍ಐಟಿ ತನಿಖೆಯಲ್ಲಿ ಬಿಜೆಪಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು...

ಪ್ರಧಾನಿ ಪದವೀಧರರಾಗದಿರುವುದು ಅಪರಾಧವಲ್ಲ, ಸುಳ್ಳು ಹೇಳುವುದು ಮಹಾಪರಾಧ: ಪ್ರಕಾಶ್ ರಾಜ್

ಪ್ರಧಾನಿ ಪದವೀಧರರಾಗದಿರುವುದು ಅಪರಾಧವಲ್ಲ, ಆದರೆ ಸುಳ್ಳು ಹೇಳುವುದು, ಆ ಸುಳ್ಳು ಮರೆಮಾಚಲು...

ನಾನು ದಲಿತರನ್ನು ವಿರೋಧಿಸಿಲ್ಲ, ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಇರಲಿ: ಶಾಸಕ ಜಿ.ಟಿ.ದೇವೇಗೌಡ

ಸರ್ಕಾರದ ಪಾಲುಗಾರಿಕೆ ಇರುವ ಸಂಘಗಳಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸೇರಿಸಿ ಹಾಗೂ ಒಬ್ಬ...

Download Eedina App Android / iOS

X