ಬಾಕಿ ಇರುವ 4,180 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ 9,411 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು (ಅಂಗನವಾಡಿ ನೇಮಕಾತಿ) ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಎರಡನೇ ದಿನದ ಸಭೆಯಲ್ಲಿ ಅವರು ಮಾತನಾಡಿ, “ನಗರ ಪ್ರದೇಶದಲ್ಲಿ ಸಹಾಯಕಿಯರ ಹುದ್ದೆಯ ಗೌರವಧನ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿ. ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅಡಿ ಹೆಚ್ಚಿನ ಅನುದಾನ ಪಡೆಯಲು ಪ್ರಯತ್ನಿಸಬೇಕು” ಎಂದರು.
ಬಾಲತಾಯಂದಿರ ಪ್ರಕರಣಗಳಲ್ಲಿ ದೂರುಗಳು ಬಂದಾಗ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಗರಂ ಆದ ಮುಖ್ಯಮಂತ್ರಿಗಳು, “ಬಾಲವಿವಾಹ ಮತ್ತು ಬಾಲ ಗರ್ಭಿಣಿಯರ ಪ್ರಕರಣಗಳನ್ನು ಸಂಪೂರ್ಣ ತಡೆಗಟ್ಟಿ” ಎಂದು ಸೂಚಿಸಿದರು.
ಬಾಲ್ಯ ಗರ್ಭಿಣಿ ಪ್ರಕರಣ ತಡೆಗೆ ಕ್ರಮ
“ರಾಜ್ಯದಲ್ಲಿ 2022-23ರ ಅವಧಿಯಲ್ಲಿ 13477 ಬಾಲ ಗರ್ಭಿಣಿಯರ ಪ್ರಕರಣಗಳು ಪತ್ತೆಯಾಗಿದ್ದು, ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕು” ಎಂದರು.
“ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಬಾಲ್ಯವಿವಾಹ ಮೇಲ್ವಿಚಾರಣಾ ಸಮಿತಿಗಳನ್ನು ಹಾಗೂ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಕಾವಲು ಸಮಿತಿಗಳ ಬಲವರ್ಧನೆ ಮಾಡುವಂತೆ” ಸಿಎಂ ತಿಳಿಸಿದರು.
Assistant professor recruitment yavag kodtira sir