ಮಂಗಳೂರು ಪೊಲೀಸರ ಮಿಂಚಿನ ಕಾರ್ಯಾಚರಣೆ: ದರೋಡೆ ನಡೆಸಿ ಪರಾರಿಯಾಗುತ್ತಿದ್ದ ‘ಚಡ್ಡಿ ಗ್ಯಾಂಗ್’ ಬಂಧನ

Date:

Advertisements

ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜುಲೈ 9ರ ಬೆಳಗಿನ ಜಾವ ಮನೆಯೊಂದಕ್ಕೆ ನುಗ್ಗಿ ದರೋಡೆಗೈದು ಪರಾರಿಯಾಗಿದ್ದ ಚಡ್ಡಿ ಗ್ಯಾಂಗ್ ಅನ್ನು ಕೇವಲ ಐದೇ ಗಂಟೆಗಳಲ್ಲಿ ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ದರೋಡೆಗೈದು ಬಸ್ಸಿನಲ್ಲಿ ಬೆಂಗಳೂರು ಕಡೆಗೆ ಪರಾರಿಯಾಗುತ್ತಿದ್ದ ತಂಡವನ್ನು ಕೆಎಸ್‌ಆರ್‌ಟಿಸಿಯ ಬಸ್ ಚಾಲಕ ಹಾಗೂ ಕಂಡಕ್ಟರ್ ನೀಡಿದ ಮಾಹಿತಿಯ ಮೇರೆಗೆ ಸಕಲೇಶಪುರದಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಮಿಂಚಿನ ಕಾರ್ಯಾಚರಣೆಯನ್ನು ಕೃತ್ಯ ನಡೆದ ಕೇವಲ 5 ಗಂಟೆಗಳ ಒಳಗೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತರೆಲ್ಲರೂ ಮಧ್ಯಪ್ರದೇಶದ ಮೂಲದವರಾಗಿದ್ದು, ರಾಜು ಸಿಂಗ್ವಾನಿಯ (24 ವರ್ಷ), ಮಯೂರ್ (30 ವರ್ಷ), ಬಾಲಿ (22 ವರ್ಷ), ವಿಕ್ಕಿ (21 ವರ್ಷ) ಎಂದು ಗುರುತಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Advertisements

ಈ ಚೆಡ್ಡಿ ಗ್ಯಾಂಗ್‌, ಮಂಗಳವಾರ ಮುಂಜಾನೆ 3.30ರ ಅವಧಿಯಲ್ಲಿ ಉರ್ವ ಕೊಟ್ಟಾರದ ಬಳಿ ವೃದ್ಧ ದಂಪತಿ ವಾಸವಿರುವ ಮನೆಯೊಂದಕ್ಕೆ ಪ್ರವೇಶಿಸಿ, ಮಾರಕಾಯುಧ ತೋರಿಸಿ ಬೆದರಿಸಿ ದರೋಡೆ ಕೃತ್ಯ ನಡೆಸಿದ್ದರು. ಆ ಬಳಿಕ ಮನೆಯಲ್ಲಿದ್ದ ಕಾರಿನ ಕೀಯನ್ನು ಪಡೆದುಕೊಂಡು ಅಲ್ಲಿಂದ ಪರಾರಿಯಾಗಿದ್ದರು. ಮುಲ್ಕಿ ಸಮೀಪ ಕಾರನ್ನು ತೊರೆದು, ಮತ್ತೆ ಮಂಗಳೂರು ಕಡೆಗೆ ಬಂದ ಬಸ್‌ನಲ್ಲಿ ಹತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮುಲ್ಕಿ ಬಸ್ಸು ನಿಲ್ದಾಣದ ಸಮೀಪ ನಿಲ್ಲಿಸಿದ್ದ ಕಳವು ಮಾಡಲ್ಪಟ್ಟ ಕಾರನ್ನು ಪತ್ತೆಮಾಡಿ ವಶಕ್ಕೆ ಪಡೆದು ಸ್ಥಳದ ಆಸುಪಾಸಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ, ಉಡುಪಿ ಕಡೆಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ದರೋಡೆಗೈದಿದ್ದ ವ್ಯಕ್ತಿಗಳು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಪೊಲೀಸರಿಗೆ ಕಂಡು ಬಂದಿತ್ತು.

ಆ ಬಳಿಕ ಕೆಎಸ್‌ಆರ್‌ಟಿಸಿ ಅಧಿಕಾರಿಗಳನ್ನು ಸಂಪರ್ಕಿಸಿದ ಮಂಗಳೂರು ಪೊಲೀಸರು, ಬೆಳಗಿನ ಜಾವ ಮುಲ್ಕಿ ಕಡೆಯಿಂದ ಮಂಗಳೂರಿಗೆ ಬಂದ ಕೆಎಸ್‌ಆರ್‌ಟಿಸಿ ಬಸ್ಸುಗಳ ಮಾಹಿತಿ ಪಡೆದುಕೊಂಡಿದ್ದಾರೆ. ಬಾಗಲಕೋಟೆ ಕಡೆಯಿಂದ ಮಂಗಳೂರಿಗೆ ಬಂದ ಒಂದು ಕೆಎಸ್‌ಆರ್‌ಟಿಸಿ ಬಸ್ಸಿನ ನಿರ್ವಾಹಕರು ಅವರ ಬಸ್ಸಿನಲ್ಲಿ ಮುಲ್ಕಿಯಿಂದ 4 ಜನರು ಒಟ್ಟಿಗೆ ಪ್ರಯಾಣಿಸಿದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ವ್ಯಕ್ತಿಗಳು ಕಂಡಕ್ಟರ್ ಬಳಿ, ಬೆಂಗಳೂರಿಗೆ ಹೋಗುವ ಬಸ್ಸಿನ ಬಗ್ಗೆ ಮಾಹಿತಿ ಕೇಳಿದ್ದಾರೆ. ಈ ವೇಳೆ ಬೆಂಗಳೂರಿನ ಕಡೆಗೆ ಪ್ರಯಾಣಿಸಿರಬಹುದು ಎಂದು ಕಂಡಕ್ಟರ್ ಪೊಲೀಸರಿಗೆ ತಿಳಿಸಿದ್ದಾರೆ. ಕಂಡಕ್ಟರ್ ನೀಡಿದ ಮಾಹಿತಿಯಂತೆ ಮಂಗಳೂರಿನಿಂದ ಬೆಂಗಳೂರಿಗೆ ಹೋದ ಬಸ್ಸಿನ ವಿವರವನ್ನು ಪೊಲೀಸರು ಕಲೆ ಹಾಕಿದ್ದಾರೆ. ಬಸ್ಸು ನಂಬರ್ ಕೆಎ-19-ಎಫ್-3575 ನಲ್ಲಿ ಪ್ರಯಾಣಿಸಿರುವುದು ಪೊಲೀಸರಿಗೆ ಗೊತ್ತಾಗಿದೆ.

ಆ ಕೂಡಲೇ ಬಸ್‌ನ ನಿರ್ವಾಹಕರನ್ನು ಸಂಪರ್ಕಿಸಿದ ಪೊಲೀಸರು ನಾಲ್ವರು ಬಸ್‌ನಲ್ಲಿ ಇರುವುದನ್ನು ದೃಢಪಡಿಸಿದ್ದಾರೆ. ಇದೇ ವೇಳೆ ಆರೋಪಿಗಳು ಬಸ್ಸಿನಲ್ಲಿ ಪರಾರಿಯಾಗುತ್ತಿರುವುದಾಗಿ ಹಾಸನ ಜಿಲ್ಲಾ ಎಸ್‌ಪಿಯವರಿಗೆ ಮಂಗಳೂರು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು | ವೃದ್ಧರಿದ್ಧ ಮನೆಗೆ ನುಗ್ಗಿ ದರೋಡೆಗೈದ ಗ್ಯಾಂಗ್; ಕಾರು ಸಹಿತ ಪರಾರಿ

ಕೂಡಲೇ ನಾಕಾಬಂದಿ ಹಾಕಿದ ಸಕಲೇಶಪುರ ಡಿವೈಎಸ್ಪಿ, ಸಿಪಿಸಿ ಹಾಗೂ ಸಿಬ್ಬಂದಿಗಳ ತಂಡ ಸಕಲೇಶಪುರ ಸಮೀಪ ಕೆಎಸ್‌ಆರ್‌ಟಿಸಿ ಬಸ್ಸನ್ನು ತಡೆದು ನಿಲ್ಲಿಸಿದ್ದಾರೆ. ಅದರಲ್ಲಿ ಪ್ರಯಾಣಿಸುತ್ತಿದ್ದ 4 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯವೆಸಗಿದ ಬಗ್ಗೆ ಒಪ್ಪಿದ್ದಾರೆ. ಬಳಿಕ ಅವರ ವಶದಲ್ಲಿದ್ದ ಮಂಗಳೂರು ನಗರದಲ್ಲಿ ಸುಲಿಗೆ ಮಾಡಿದ್ದ ಎಲ್ಲ ಚಿನ್ನ ಹಾಗೂ ವಜ್ರದ ಆಭರಣಗಳು, ವಾಚ್‌ಗಳು ಹಾಗೂ ಹಣವನ್ನು ಜಪ್ತಿ ಮಾಡಿ, ಮಂಗಳೂರಿನ ಉರ್ವಾ ಪೊಲೀಸ್ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಜೊತೆಗೆ ದರೋಡೆಗೆ ಬಳಸಿದ್ದ ಆಯುಧಗಳನ್ನು ಕೂಡ ವಶಕ್ಕೆ ಪಡೆದುಕೊಳ್ಳಲಾಗಿದೆ.

ಚಡ್ಡಿ ಗ್ಯಾಂಗ್ 1
ದರೋಡೆಗೆ ಬಳಸಿದ್ದ ಆಯುಧಗಳು
ಚಡ್ಡಿ ಗ್ಯಾಂಗ್ 2
ಸುಲಿಗೆ ಮಾಡಿದ್ದ ಎಲ್ಲ ಚಿನ್ನ, ವಜ್ರದ ಆಭರಣಗಳು ಹಾಗೂ ನಗದು

ಈ ಮಿಂಚಿನ ಕಾರ್ಯಾಚರಣೆಯನ್ನು ಕೃತ್ಯ ನಡೆದ ಕೇವಲ 5 ಗಂಟೆಗಳ ಒಳಗೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಮಂಗಳೂರು ನಗರದ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರ ಮಾರ್ಗದರ್ಶನದಲ್ಲಿ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಸಿದ್ದಾರ್ಥ್ ಗೋಯಲ್, ಅಪರಾಧ ವಿಭಾಗದ ಡಿಸಿಪಿ ಬಿ.ಪಿ ದಿನೇಶ್ ಕುಮಾರ್, ಮಂಗಳೂರು ಕೇಂದ್ರ ವಿಭಾಗದ ಎಸಿಪಿ  ಪ್ರತಾಪ್ ಸಿಂಗ್ ತೋರಟ್, ಉರ್ವಾ ಠಾಣೆಯ ನಿರೀಕ್ಷಕರಾದ ಶ್ರೀಮತಿ ಭಾರತೀ ಜಿ.ಯವರ ನೇತೃತ್ವದ ತಂಡ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಶ್ರಮಿಸಿದೆ.

ಉರ್ವಾ ಪೊಲೀಸ್ ಠಾಣೆಯ ಎಸ್‌ಐ ಹರೀಶ ಹೆಚ್.ವಿ, ಅನಿತಾ ಹೆಚ್.ಬಿ, ಎ.ಎಸ್.ಐ ವಿನಯ್ ಕುಮಾರ್, ವೇಣುಗೋಪಾಲ್ ಸಿಬ್ಬಂದಿಗಳಾದ ಪುಷ್ಪರಾಜ್, ಪ್ರಮೋದ್, ನಾರಾಯಣ, ಸತೀಶ್, ಪೀಟರ್, ರಾಮಚಂದ್ರ ವೆಂಕಟೇಶ್, ಅಭಿಷೇಕ್, ಪ್ರಜ್ವಲ್ ರವರು ಸಹಕಾರ ನೀಡಿದ್ದಾರೆ.

ಈ ಶೀಘ್ರ ಪತ್ತೆ ಕಾರ್ಯಕ್ಕೆ ಹಾಸನ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಮಹಮ್ಮದ್ ಸುಜೀತಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ತಮ್ಮಯ್ಯ ಎಮ್ .ಕೆ , ಸಕಲೇಶಪುರ ಉಪ ವಿಭಾಗದ ಡಿವೈಎಸ್ಪಿ ಪ್ರಮೋದ್ ಬಿ., ಸಕಲೇಶಪುರ ನಗರ ಪಿ.ಎಸ್.ಐ ಪ್ರಮೋದ್ ಕೆ.ಎಸ್ ಮತ್ತು ಗ್ರಾಮಾಂತರ ಠಾಣೆಯ ಪಿ.ಎಸ್.ಐ ಸದಾಶಿವ ತಿಪ್ಪರೆಡ್ಡಿ, ಸಿಬ್ಬಂದಿಗಳಾದ ಖಾದರ್ ಆಲಿ, ಸುನಿಲ್, ಜಗದೀಶ್, ಯೋಗಿಶ್, ಮೂಲ್ಕಿ ಪೊಲೀಸ್ ಠಾಣೆಯ ಪಿ.ಎಸ್.ಐ ವಿನಾಯಕ್ ಬಾವಿಕಟ್ಟೆ, ಸಿಬ್ಬಂದಿಗಳಾದ ಹರೀಶೇಖರ್ ಎ.ಎಸ್.ಐ ಕಿಶೋರ್ ಕೋಟ್ಯಾನ್ , ಚಂದ್ರಶೇಖರ್ ಹಾಗೂ ಶಶಿಧರ್ ಅವರು ಸಹಕರಿಸಿರುವುದಾಗಿ ಮಂಗಳೂರು ನಗರ ಪೊಲೀಸರು ಮಾಹಿತಿ ನೀಡಿದ್ದಾರೆ.

ನಿಖರ ಮಾಹಿತಿ ನೀಡಿದ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು

ಮಂಗಳೂರಿನ ಅಂತಾರಾಜ್ಯ ಚಡ್ಡಿ ಗ್ಯಾಂಗ್ ಅನ್ನು ಬಂಧಿಸಲು ನಿಖರ ಮಾಹಿತಿ ನೀಡಿದ್ದು ಕೆಎಸ್‌ಆರ್‌ಟಿಸಿ ಮಂಗಳೂರು 3 ನೇ ಘಟಕದ ಸಿಬ್ಬಂದಿಗಳಾದ ಚಾಲಕ ಬಸವರಾಜ್ ಅಳ್ಳಪ್ಪ (ಬಿಲ್ಲೆ 652) ಹಾಗೂ ಚಾಲಕ-ನಿರ್ವಾಹಕ ಹನುಮಂತ ಅಟಗಲ್ಲು(ಬಿಲ್ಲೆ 3746) ಹಾಗೂ ಖಾಸಗಿ ಚಾಲಕರಾದ ಮಹೇಶ್ ಹಾಗೂ ನಿರ್ವಾಹಕರಾದ ಸೀನಪ್ಪ. ಇವರು ನೀಡಿದ ನಿಖರ ಮಾಹಿತಿಯಿಂದಾಗಿ ತಪ್ಪಿಸಿಕೊಳ್ಳುತ್ತಿದ್ದ ಚಡ್ಡಿ ಗ್ಯಾಂಗ್‌ನ ಸದಸ್ಯರು ಮಂಗಳೂರು ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಆ ಮೂಲಕ ಕಳೆದ ಕೆಲವು ದಿನಗಳಿಂದ ನಗರದಲ್ಲಿ ಓಡಾಡುತ್ತಿದ್ದ ಚಡ್ಡಿ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಕೊನೆಗೂ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಗಳೂರು ಪೊಲೀಸರ ಶೀಘ್ರ ಕಾರ್ಯಾಚರಣೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಮಂಗಳೂರಿನ ಜನ ಸದ್ಯ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X