ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದು 18 ಜನರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋನ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ.
ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಡಬಲ್ ಡೆಕ್ಕರ್ ಸ್ಲೀಪರ್ ಬಸ್ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ. 19 ಮಂದಿಗೆ ಗಾಯವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬೆಹ್ತಾ ಮುಜಾವರ್ ಪೊಲೀಸ್ ಠಾಣೆ ವ್ಯಾಪ್ತಿಯ ಜೋಜಿಕೋಟ್ ಗ್ರಾಮದ ಬಳಿ ಮುಂಜಾನೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಎರಡು ವಾಹನದ ಚಾಲಕರು ಕೂಡಾ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೌರಂಗ್ ರಾಠಿ, “ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದ ಬಸ್ ಅತಿವೇಗವಾಗಿ ಬಂದು ಹಿಂದಿನಿಂದ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ” ಎಂದು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಲಡಾಖ್| ಸೇನೆಯ ಟ್ಯಾಂಕ್ ಅಪಘಾತ; ನೀರಿನಲ್ಲಿ ಕೊಚ್ಚಿ ಹೋದ ಐವರು ಯೋಧರು
ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿದ್ದು, 19 ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದರು.
ಡಿಕ್ಕಿಯ ರಭಸಕ್ಕೆ ಬಸ್ ಮತ್ತು ಹಾಲಿನ ಟ್ಯಾಂಕರ್ ಪಲ್ಟಿಯಾಗಿದೆ ಎಂದು ಬಂಗಾರ್‌ಮೌ ಸರ್ಕಲ್ ಆಫೀಸರ್ (ಸಿಒ) ಅರವಿಂದ್ ಕುಮಾರ್ ತಿಳಿಸಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅರವಿಂದ್ ಕುಮಾರ್ ತಿಳಿಸಿದ್ದಾರೆ. ಸಂತ್ರಸ್ತರನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
#WATCH | Unnano DM Gaurang Rathi says “Today at around 05.15 AM, a private bus coming from Motihari, Bihar collided with a milk tanker. 18 people have lost their lives and 19 others are injured in the accident. After the initial investigation, it looks like the bus was… https://t.co/H5TantJwnh pic.twitter.com/QYXcLaFqNp
— ANI (@ANI) July 10, 2024