ವಾಲ್ಮೀಕಿ ನಿಗಮ, ಮುಡಾ ಹಗರಣ |‌ ಸದನದಲ್ಲಿ ಗಂಭೀರ ಚರ್ಚೆ ಮಾಡುತ್ತೇವೆ: ಆರ್‌ ಅಶೋಕ್

Date:

Advertisements

ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದ ವಿರು‌ದ್ಧ ಬಿಜೆಪಿ ಹೋರಾಟ ಮುಂದುವರಿಸಿದ್ದು, ಸದನದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ತಿಳಿಸಿದರು.

ಬಿಜೆಪಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾದ ಭ್ರಷ್ಟಾಚಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಭಾಗಿಯಾದ ಮುಡಾ ಹಗರಣದ ಬಗ್ಗೆ ಮಾತನಾಡಲು ಸದನದಲ್ಲಿ ಬಿಜೆಪಿಯಿಂದ ನಿಲುವಳಿ ಸೂಚನೆ ಮಂಡಿಸಲಾಗುವುದು. ಜುಲೈ 15 ರಿಂದ ನಡೆಯಲಿರುವ ಸದನವನ್ನುಇನ್ನೂ ಒಂದು ವಾರ ವಿಸ್ತರಣೆ ಮಾಡಬೇಕೆಂದು” ಆಗ್ರಹಿಸಲಾಗುವುದು ಎಂದರು.

“ಝೀಕಾ ವೈರಸ್‌, ಡೆಂಘೀ ರೋಗಗಳು ಹೆಚ್ಚಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಬೇಕೆಂದು ಆಗ್ರಹಿಸಿದ್ದರೂ ಅದರ ಬಗ್ಗೆ ಸರ್ಕಾರ ತಲೆ ಕೆಡಿಸಿಕೊಂಡಿಲ್ಲ. ದರಗಳ ಏರಿಕೆಯಿಂದಾಗಿ ರೈತರ ಆತ್ಮಹತ್ಯೆ ಹೆಚ್ಚಿದೆ. ಹಿಂದೂಗಳ ಮೇಲೆ ಹಲ್ಲೆಗಳು ನಡೆಯುತ್ತಿದೆ. ಇಲಾಖೆಗಳ ಅನುದಾನ ಕಡಿತ, 700 ಕೋಟಿ ರೂ. ಹಾಲು ಪ್ರೋತ್ಸಾಹಧನ ಬಾಕಿ ಮೊದಲಾದ ಸಮಸ್ಯೆಗಳು ಕಂಡುಬಂದಿದೆ. ಒಂದೇ ವರ್ಷದಲ್ಲಿ ಕಾಂಗ್ರೆಸ್‌ ಶಿಶುಪಾಲನಂತೆ ನೂರು ತಪ್ಪುಗಳನ್ನು ಮಾಡಿದೆ” ಎಂದು ದೂರಿದರು.

Advertisements

“ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಯಾರೂ ಭಾಗಿಯಾಗಿಲ್ಲ ಎಂದು ಕಾಂಗ್ರೆಸ್‌ ಹೇಳಿಕೊಂಡಿದೆ. ಆದರೀಗ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಎಸ್‌ಐಟಿ ಮೂಲಕ ಎಲ್ಲರಿಗೂ ಕ್ಲೀನ್‌ ಚಿಟ್‌ ನೀಡುವ ಪ್ರಯತ್ನ ನಡೆದಿದೆ. ಇದರಲ್ಲಿ ಇನ್ನೂ ಮೂವರು ಸಚಿವರು ಶಾಮೀಲಾಗಿದ್ದಾರೆ. ನಿಗಮದ ಅಧ್ಯಕ್ಷರೇ ಶಾಂಗ್ರೀಲಾ ಹೋಟೆಲ್‌ನಲ್ಲಿ ಸಭೆ ಸೇರಿದ್ದರ ಬಗ್ಗೆ ಹೇಳಿದ್ದಾರೆ. ಈ ಕುರಿತು ಬಿಡುಗಡೆಯಾದ ಆಡಿಯೋದಲ್ಲಿ ಎಲ್ಲವೂ ಹೊರಬಂದಿದೆ” ಎಂದರು.

“ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಲೂಟಿಯಾದ 187 ಕೋಟಿ ರೂ. ಹಣ ದಲಿತ ಕಾಲೋನಿಗೆ ರಸ್ತೆ ನಿರ್ಮಿಸಲು, ಮನೆ ನಿರ್ಮಿಸಲು ಮೀಸಲಾಗಿತ್ತು. ಜೊತೆಗೆ, ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗೆ ಬಳಸಿದ್ದು, ಇದು ದೊಡ್ಡ ಲೂಟಿಯ ಪ್ರಯತ್ನ. ಇದರ ವಿರು‌ದ್ಧವೂ ಹೋರಾಟ ನಡೆಸಲಾಗುವುದು” ಎಂದು ಹೇಳಿದರು.

ಕಾಂಗ್ರೆಸ್‌ಗೆ ಹೆಸರು ಬದಲಿಸುವ ಹಕ್ಕಿಲ್ಲ

“ರಾಮನಗರ ಜಿಲ್ಲೆಗೆ ಸ್ಥಳ ಮಹಿಮೆ ಇದೆ. ಈ ಹೆಸರನ್ನು ಕಾಂಗ್ರೆಸ್‌ ನಾಯಕರು ಇಟ್ಟಿಲ್ಲ ಅಂದ ಮೇಲೆ ಅದನ್ನು ತೆಗೆಯಲು ಅವರಿಗೆ ಯಾವುದೇ ಹಕ್ಕು ಇಲ್ಲ. ಕರ್ನಾಟಕದಲ್ಲಿ ರಾಮ-ಕೃಷ್ಣ ಎಂದಿರುವ ಊರುಗಳ ಹೆಸರುಗಳನ್ನು ಬದಲಾಯಿಸುತ್ತಾರಾ? ಶೋಲೆ ಸಿನಿಮಾ ಚಿತ್ರೀಕರಣವಾದಾಗಲೂ ಅಲ್ಲಿ ರಾಮಗಢ ಎಂಬ ಹೆಸರನ್ನೇ ಇಟ್ಟಿದ್ದರು. ಹೆಸರು ಬದಲಾಯಿಸುವ ಬದಲು ಬೆಂಗಳೂರು ನಗರದ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಲಿ. ರಾಮನ ಮೇಲೆ ದ್ವೇಷ ಇದ್ದರೆ ಬೇರೆ ದಾರಿ ನೋಡಿಕೊಳ್ಳಲಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X