ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾರನಬೀಡ ಗ್ರಾಮದ ಜಮೀನೊಂದರಲ್ಲಿ ಹಾವು ಕಡಿದು ರೈತ ಮಹಿಳೆ ಮೃತಪಟ್ಟ ಘಟನೆ ಜರುಗಿದೆ.
ನಾಗವೇಣಿ ದುಂಡಪ್ಪ ಗಂಜಿಗಟ್ಟಿ (38) ಮೃತ ಮಹಿಳೆ, ಜಮೀನಿನಲ್ಲಿ ಕೃಷಿ ಕೆಲಸ ಮಾಡುವ ವೇಳೆ ಹಾವು ಕಡದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಹಾವೇರಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಸಾವನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.