ಮೂರನೇ ತರಗತಿಯ ವಿದ್ಯಾರ್ಥಿನಿಯ ಅತ್ಯಾಚಾರವೆಸಗಿ ಕೊಲೆ ಮಾಡಿದ ಸಹಪಾಠಿಗಳು

Date:

Advertisements

ಆಘಾತಕಾರಿ ಘಟನೆಯೊಂದರಲ್ಲಿ ಮೂರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 8 ವರ್ಷದ ಬಾಲಕಿಯನ್ನು ಅತ್ಯಾಚಾರ ವೆಸಗಿದ ಹಿರಿಯ ಸಹಪಾಠಿಗಳು ಕೊಲೆ ಮಾಡಿ ಸಾಕ್ಷಿ ನಾಶಪಡಿಸುವ ಉದ್ದೇಶದಿಂದ ಆಕೆಯ ಮೃತದೇಹವನ್ನು ಕಾಲುವೆಗೆ ಎಸೆದಿರುವ ಘಟನೆ ಆಂಧ್ರ ಪ್ರದೇಶದ ನನ್‌ದ್ಯಾಲ್‌ ಜಿಲ್ಲೆಯಲ್ಲಿ ನಡೆದಿದೆ.

ಅತ್ಯಾಚಾರವೆಸಗಿರುವ ವಿದ್ಯಾರ್ಥಿಗಳಲ್ಲಿ ಇಬ್ಬರು 6ನೇ ತರಗತಿ ಓದುತ್ತಿರುವ 12 ವರ್ಷದವರಾದರೆ, ಮತ್ತೊಬ್ಬ 7ನೇ ತರಗತಿ ವ್ಯಾಸಂಗ ಮಾಡುತ್ತಿರುವ 13 ವರ್ಷದವನಾಗಿದ್ದಾನೆ. ಸಂತ್ರಸ್ತೆ ಹಾಗೂ ಆರೋಪಿಗಳು ಒಂದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯು ನನ್‌ದ್ಯಾಲ್‌ ಜಿಲ್ಲೆಯ ಪಗಿದ್ಯಾಲ ಗ್ರಾಮದಲ್ಲಿ ಸಂಭವಿಸಿದ್ದು, ಆರೋಪಿಗಳನ್ನು ಶಂಕೆಯ ಆಧಾರದ ಮೇಲೆ ಬಂಧಿಸಿದ ನಂತರ ಸಾರ್ವಜನಿಕವಾಗಿ ಬೆಳಕಿಗೆ ಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮನಗರ ಜಿಲ್ಲೆ ಹೆಸರು ಬದಲಾವಣೆ ಯಾರಿಗಾಗಿ, ಏತಕ್ಕಾಗಿ?

ಭಾನುವಾರ ಜುಲೈ 7 ರಂದು ಸಂಸ್ತ್ರಸ್ತೆಯ ತಂದೆ ಉದ್ಯಾನವನದಲ್ಲಿ ಆಟವಾಡುತ್ತಿರುವ ಸಂದರ್ಭದಲ್ಲಿ ಬಾಲಕಿ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದರು.

ಕೃತ್ಯವೆಸಗಿದ ಮೂವರು ಅಪ್ರಾಪ್ತರ ಮನೆಯ ಬಳಿ ಶ್ವಾನ ದಳದಿಂದ ಪರಿಶೀಲನೆ ನಡೆಸಿದಾಗ ಘಟನೆಯ ಬಗ್ಗೆ ಗೊತ್ತಾಗಿದೆ. ಬಾಲಕರನ್ನು ವಿಚಾರಣೆಗೊಳಿಸಿದಾಗ ಅಪರಾಧದ ಬಗ್ಗೆ ಒಪ್ಪಿಕೊಂಡಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಬಾಲಕಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಹುಡುಗರು ಆಕೆಯ ಜೊತೆ ಸೇರಿಕೊಳ್ಳುವುದಾಗಿ ಕೇಳಿಕೊಂಡಿದ್ದಾರೆ. ಬಾಲಕಿ ಇದಕ್ಕೆ ಸಮ್ಮತಿಸಿದ್ದಾಳೆ. ತರುವಾಯು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಬಾಲಕಿ ತನ್ನ ಪೋಷಕರಿಗೆ ತಿಳಿಸುವ ಭಯದಿಂದ ಆಕೆಯನ್ನು ಕೊಲೆ ಮಾಡಿ ಹತ್ತಿರದಲ್ಲಿದ್ದ ಕಾಲುವೆಗೆ ಎಸೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X