ಮಣಿಪುರ ಹಿಂಸಾಚಾರವನ್ನು ಕೊನೆ ಮಾಡಲು ಸರ್ಕಾರದ ಮೇಲೆ ಒತ್ತಡ ಹೇರಲು ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟವು ಸಂಸತ್ತಿನಲ್ಲಿ ಪೂರ್ಣ ಬಲದೊಂದಿಗೆ ಮತ್ತೆ ಮಣಿಪುರದಲ್ಲಿ ಶಾಂತಿಯ ಅಗತ್ಯವನ್ನು ಪ್ರಸ್ತಾಪಿಸಲಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದರು.
ರಾಹುಲ್ ಗಾಂಧಿ ಲೋಕಸಭೆ ವಿಪಕ್ಷ ನಾಯಕರಾದ ಬಳಿಕ ಮಣಿಪುರಕ್ಕೆ ತನ್ನ ಮೊದಲ ಭೇಟಿಯನ್ನು ನೀಡಿದ ಕೆಲವು ದಿನಗಳ ನಂತರ ಈ ಹೇಳಿಕೆಯನ್ನು ನೀಡಿದ್ದಾರೆ. ಹಾಗೆಯೇ, “ಪ್ರಧಾನಿ ನರೇಂದ್ರ ಮೋದಿ ಖುದ್ದಾಗಿ ಮಣಿಪುರಕ್ಕೆ ಭೇಟಿ ನೀಡಿ, ರಾಜ್ಯದ ಜನರ ಸಮಸ್ಯೆಗಳನ್ನು ಆಲಿಸಿ ಶಾಂತಿ ಕಾಪಾಡುವಂತೆ ಮನವಿ ಮಾಡಬೇಕಿ” ಎಂದು ರಾಹುಲ್ ಗಾಂಧಿ ಪುನರುಚ್ಚರಿಸಿದರು.
ಸೋಮವಾರ ಹಿಂಸಾಚಾರ ಪೀಡಿತ ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದರು. ಇದರ ವಿಡಿಯೋವನ್ನು ತನ್ನ ಎಕ್ಸ್ ಪೋಸ್ಟ್‌ನಲ್ಲಿ ಇಂದು (ಜುಲೈ 11) ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
“ಮಣಿಪುರದಲ್ಲಿ ಹಿಂಸಾಚಾರ ಪ್ರಾರಂಭವಾದಾಗಿನಿಂದ ನಾನು ಮಣಿಪುರಕ್ಕೆ ಮೂರನೇ ಬಾರಿ ಭೇಟಿ ನೀಡಿದ್ದೇನೆ. ಆದರೆ ದುರದೃಷ್ಟವಶಾತ್ ಇಂದಿಗೂ ಪರಿಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ. ಇಂದಿಗೂ ರಾಜ್ಯವು ಎರಡು ತುಂಡುಗಳಾಗಿ ವಿಭಜನೆಯಾಗಿದೆ” ಎಂದು ರಾಹುಲ್ ಗಾಂಧಿ ವಿಷಾದ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿದ್ದೀರಾ? ರಾಹುಲ್ ಅಬ್ಬರ I ಮಣಿಪುರದ ಬಗ್ಗೆ ತುಟಿ ಬಿಚ್ಚಿದ ಮೋದಿ!
“ಮನೆಗಳು ಸುಟ್ಟು ಭಸ್ಮವಾಗುತ್ತಿವೆ, ಅಮಾಯಕರ ಜೀವಗಳು ಅಪಾಯದಲ್ಲಿವೆ ಮತ್ತು ಸಾವಿರಾರು ಕುಟುಂಬಗಳು ಪರಿಹಾರ ಶಿಬಿರಗಳಲ್ಲಿ ವಾಸಿಸಬೇಕಾದ ಸ್ಥಿತಿಯಿದೆ. ಪ್ರಧಾನಿ ಖುದ್ದು ಮಣಿಪುರಕ್ಕೆ ಬಂದು ರಾಜ್ಯದ ಜನರ ಸಮಸ್ಯೆಗಳನ್ನು ಆಲಿಸಿ ಶಾಂತಿ ಕಾಪಾಡುವಂತೆ ಮನವಿ ಮಾಡಬೇಕು” ಎಂದು ವಿಪಕ್ಷ ನಾಯಕ ರಾಹುಲ್ ಆಗ್ರಹಿಸಿದ್ದಾರೆ.
“ಸಂಸತ್ತಿನಲ್ಲಿ ಪೂರ್ಣ ಬಲದೊಂದಿಗೆ ಮಣಿಪುರದಲ್ಲಿ ಶಾಂತಿಯ ಅಗತ್ಯವನ್ನು ಪ್ರಸ್ತಾಪಿಸುವ ಮೂಲಕ ಈ ದುರಂತವನ್ನು ಕೊನೆಗೊಳಿಸಲು ಕಾಂಗ್ರೆಸ್ ಪಕ್ಷ ಮತ್ತು ಇಂಡಿಯಾ ಒಕ್ಕೂಟವು ಸರ್ಕಾರದ ಮೇಲೆ ಒತ್ತಡ ಹೇರಳಿದೆ” ಎಂದು ಹೇಳಿದರು.
मणिपुर में हिंसा शुरू होने के बाद, मैं तीसरी बार यहां आ चुका हूं, मगर अफसोस स्थिति में कोई सुधार नहीं है – आज भी प्रदेश दो टुकड़ों में बंटा हुआ है।
घर जल रहे हैं, मासूम ज़िंदगियां खतरे में हैं और हज़ारों परिवार relief camp में जीवन काटने पर मजबूर हैं।
प्रधानमंत्री को मणिपुर खुद… pic.twitter.com/8EaJ2Tn6v8
— Rahul Gandhi (@RahulGandhi) July 11, 2024
ಇತ್ತೀಚೆಗೆ ಮಣಿಪುರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ ಮೂರು ಪರಿಹಾರ ಶಿಬಿರಗಳಿಗೆ ಭೇಟಿ ನೀಡಿದ್ದರು. ಮೈತಿ ಮತ್ತು ಕುಕಿ ಜನಾಂಗದ ಜನರೊಂದಿಗೆ ಸಂವಾದ ನಡೆಸಿದ್ದಾರೆ. ಮಣಿಪುರದ ಜನರ ಪರವಾಗಿ ಧ್ವನಿ ಎತ್ತುವಂತೆ ಜನರು ಒತ್ತಾಯಿಸಿದ್ದಾರೆ.
ಕಳೆದ ವರ್ಷ ಮೇ 3ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿದೆ. ಇದಾದ ವಾರಗಳ ನಂತರವೇ ರಾಹುಲ್ ಗಾಂಧಿ ಮಣಿಪುರಕ್ಕೆ ಭೇಟಿ ನೀಡಿದ್ದರು. ಈ ಹಿಂಸಾಚಾರದಲ್ಲಿ ಈವರೆಗೆ 200ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.