ರಾಹುಲ್ ಗಾಂಧಿ ವಿರುದ್ಧ ಪ್ರಚೋದನಕಾರಿ ಭಾಷಣ: ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಮಧ್ಯಂತರ ಜಾಮೀನು

Date:

Advertisements

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ವಿರುದ್ಧ ನಿಂದನಾತ್ಮಕ ಭಾಷಣದ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ವೈ ಭರತ್‌ ಶೆಟ್ಟಿ ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಗುರುವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಶಾಸಕ ಭರತ್‌ ಶೆಟ್ಟಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಅವರು ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಠಾಣೆಯ ಪೊಲೀಸರು ಭರತ್‌ ಶೆಟ್ಟಿ ಅವರನ್ನು ಬಂಧಿಸಿದರೆ ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು. ಭರತ್‌ ಶೆಟ್ಟಿ ಅವರು ಒಂದು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್‌, ಒಬ್ಬರ ಭದ್ರತೆ ಒದಗಿಸಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಮತ್ತು ಸಾಕ್ಷ್ಯ ಹಾಳುಗೆಡವಬಾರದು. ತನಿಖಾಧಿಕಾರಿ ವಿಚಾರಣೆಗೆ ಸೂಚಿಸಿದಾಗ ಹಾಜರಾಗಬೇಕು ಎಂದು ನ್ಯಾಯಾಲಯವು ಷರತ್ತುಗಳನ್ನು ವಿಧಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮನಗರ ಜಿಲ್ಲೆ ಹೆಸರು ಬದಲಾವಣೆ ಯಾರಿಗಾಗಿ, ಏತಕ್ಕಾಗಿ?

ಪ್ರಧಾನ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ಅಭಿಯೋಜಕರಿಗೆ ನ್ಯಾಯಾಲಯ ಆದೇಶಿಸಿದ್ದು, ವಿಚಾರಣೆಯನ್ನು ಜುಲೈ 16ಕ್ಕೆ ಮುಂದೂಡಿದೆ. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಅರುಣ್‌ ಶ್ಯಾಮ್‌ ವಾದಿಸಿದರು.

ಪ್ರಕರಣದ ಹಿನ್ನೆಲೆ

ಜುಲೈ 8ರ ಬೆಳಿಗ್ಗೆ ಕಾವೂರು ಜಂಕ್ಷನ್‌ನಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಭರತ್‌ ಶೆಟ್ಟಿ, ರಾಹುಲ್‌ ಗಾಂಧಿ ಒಬ್ಬ ಹುಚ್ಚ. ಅವನನ್ನು ಸಂಸತ್‌ನಿಂದ ಹೊರಹಾಕಬೇಕು. ಅವನು ಮಾತನಾಡುವ ಶೈಲಿ ನೋಡಿದರೆ ಹಿಂದೂ ಆದ ನಾನು ಲೋಕಸಭೆಗೆ ಹೋಗಿ ಅವರ ಕೆನ್ನೆಗೆ ಎರಡು ಹೊಡೆಯಬೇಕು ಎನಿಸುತ್ತದೆ. ಹಾಗೆ ಮಾಡಿದರೆ ಮಾತ್ರ ಆತನಿಗೆ ಬುದ್ದಿ ಬರುವುದು. ನಾನೊಬ್ಬ ಹಿಂದೂವಾಗಿದ್ದು, ಯಾರಾದರೂ ಹಿಂದೂ ವಿಚಾರದಲ್ಲಿ ಮಾತನಾಡಿದರೆ ಅವರಿಗೆ ತಕ್ಕ ಬುದ್ದಿ ಕಲಿಸಲು ನಾವೆಲ್ಲಾ ಒಂದಾಗಬೇಕು. ಅಗತ್ಯಬಿದ್ದರೆ ಶಸ್ತ್ರಾಸ್ತ್ರ ಹಿಡಿದು ಹೋರಾಟ ಮಾಡಲು ನಾವೆಲ್ಲಾ ಸಿದ್ಧರಾಗಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಭಾಷಣದ ಸಂದರ್ಭದಲ್ಲಿ ಹಾಜರಿದ್ದ ಮಂಗಳೂರು ದಕ್ಷಿಣ ವಿಧಾನಸಭಾ ಶಾಸಕರಾದ ವೇದವ್ಯಾಸ್‌ ಕಾಮತ್‌, ಮಂಗಳೂರು ಸಂಸದ ಬ್ರಿಜೇಶ್‌ ಚೌಟ ಹಾಗೂ ಪಾಲಿಕೆ ಸದಸ್ಯರು ಭರತ್‌ ಶೆಟ್ಟಿ ಭಾಷಣಕ್ಕೆ ಪ್ರಚೋದನೆ ನೀಡಿದ್ದಾರೆ ಎಂದು ಮಂಗಳೂರಿನ ಅನಿಲ್‌ ಕುಮಾರ್‌ ಅವರು ಕಾವೂರು ಠಾಣೆಯಲ್ಲಿ ದೂರು ನೀಡಿದ್ದರು.

ಇದನ್ನು ಆಧರಿಸಿ, ಭರತ್‌ ಶೆಟ್ಟಿ ಮತ್ತು ಇತರರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್‌ಗಳಾದ 351(3) (ಕ್ರಿಮಿನಲ್‌ ಬೆದರಿಕೆ), 353 (ಪ್ರಚೋದನೆ) ಅಡಿ ಎಫ್‌ಐಆರ್‌ ದಾಖಲಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X