ಜೈಪುರ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ಜೆಟ್ ಮಹಿಳಾ ಸಿಬ್ಬಂದಿ ಪೊಲೀಸ್ ಅಧಿಕಾರಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಸ್ಪೈಸ್‌ಜೆಟ್‌ನ ಆಹಾರ ಮೇಲ್ವಿಚಾರಕಿ ಅನುರಾಧಾ ರಾಣಿ ಅವರನ್ನು ಜೈಪುರ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಗಿರಿರಾಜ್ ಪ್ರಸಾದ್ ಅವರು ಬೆಳಗಿನ ಜಾವ 4 ಗಂಟೆ ಸುಮಾರಿಗೆ ತಡೆದರು. ವಾಹನದ ಗೇಟ್ ಬಳಸಲು ಅನುಮತಿ ಇಲ್ಲ ಎಂದು ಹೇಳಿದ್ದಾರೆ.
ಮತ್ತೊಂದು ಗೇಟ್ ಮೂಲಕ ಹೊರಹೋಗುವಂತೆ ವಿಮಾನಯಾನ ನೌಕರರನ್ನು ಕೇಳಿದಾಗ ಅವರು ಭದ್ರತಾ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಪೊಲೀಸರು ಮತ್ತು ಸಿಐಎಸ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ.
ನಂತರ, ಅನುರಾಧಾ ರಾಣಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ.
ಈ ನಡುವೆ ಅನುರಾಧಾ ರಾಣಿಯವರಿಗೆ ಪೊಲೀಸ್ ಅಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿಮಾನಯಾನ ಸಂಸ್ಥೆ ತನ್ನ ಉದ್ಯೋಗಿಯ ರಕ್ಷಣೆಗೆ ನಿಂತಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮನಗರ ಜಿಲ್ಲೆ ಹೆಸರು ಬದಲಾವಣೆ ಯಾರಿಗಾಗಿ, ಏತಕ್ಕಾಗಿ?
ವಿಮಾನ ನಿಲ್ದಾಣದಲ್ಲಿ ಪರಿಶೀಲನಾ ಪ್ರದೇಶದ ಸುತ್ತಲೂ ಮಹಿಳಾ ಪೊಲೀಸರು ಇರಲಿಲ್ಲ. ಆ ಸಮಯದಲ್ಲಿ ಮಹಿಳಾ ಸಿಬ್ಬಂದಿಯನ್ನು ಪರಿಶೀಲನೆಗೆ ಆಗಮಿಸುವಂತೆ ಗಿರಿರಾಜ್ ಕರೆದಿದ್ದರು ಆಗ ವಾಗ್ವಾದ ಶುರುವಾಗಿತ್ತು ಎನ್ನಲಾಗಿದೆ.
ಈ ಪ್ರಕರಣದಲ್ಲಿ, ಸ್ಪೈಸ್‌ಜೆಟ್ ತನ್ನ ಉದ್ಯೋಗಿಗಳನ್ನು ಸಮರ್ಥಿಸಿಕೊಂಡಿದೆ ಮತ್ತು ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದರು. ಕೆಲಸ ಮುಗಿದ ಮೇಲೆ ಮನೆಗೆ ಬರುವಂತೆ ಕೇಳಿದ್ದಕ್ಕೆ ಕೋಪಗೊಂಡು ಕಪಾಳಮೋಕ್ಷ ಮಾಡಿದ್ದಾರೆ ಎಂದು ಹೇಳಿದ್ದಾರೆ.
“ತನ್ನ ಮಹಿಳಾ ಉದ್ಯೋಗಿಯ ವಿರುದ್ಧ ಲೈಂಗಿಕ ಕಿರುಕುಳದ ಈ ಗಂಭೀರ ಪ್ರಕರಣದಲ್ಲಿ ತಕ್ಷಣ ಕಾನೂನು ಕ್ರಮವನ್ನು ತೆಗೆದುಕೊಂಡು ಸ್ಥಳೀಯ ಪೊಲೀಸರನ್ನು ಸಂಪರ್ಕಿಸಲಾಗಿದೆ. ನಾವು ನಮ್ಮ ಉದ್ಯೋಗಿಯ ಪರವಾಗಿ ದೃಢವಾಗಿ ನಿಲ್ಲುತ್ತೇವೆ ಮತ್ತು ಅವರಿಗೆ ಸಂಪೂರ್ಣ ಬೆಂಬಲವನ್ನು ನೀಡಲು ಬದ್ಧರಾಗಿದ್ದೇವೆ” ಎಂದು ಸ್ಪೈಸ್‌ಜೆಟ್ ವಕ್ತಾರರು ತಿಳಿಸಿದ್ದಾರೆ.
ಉದ್ಯೋಗಿ ಪ್ರವೇಶಕ್ಕಾಗಿ ಅಧಿಕೃತ ವಿಮಾನ ನಿಲ್ದಾಣ ಪ್ರವೇಶ ಪಾಸ್ ಅನ್ನು ಹೊಂದಿದ್ದರು, ಆದರೂ ಅಧಿಕಾರಿ ಕೆಟ್ಟ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಸ್ಪೈಸ್‌ಜೆಟ್ ಹೇಳಿದೆ.
Are you talking about this incident ❓❓❓ pic.twitter.com/fSwQTV0j2u
— Rishi Choudhary 🇮🇳 (@RishiRahar) July 11, 2024