ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ (ಡಿಡಿಯುಟಿಟಿಎಲ್) ಅಕ್ರಮ ಸಂಬಂಧ ಬಿಜೆಪಿ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ಡಿ ಎಸ್ ವೀರಯ್ಯ ಅವರನ್ನು ಸಿಐಡಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
2021ರಿಂದ 2023ರ ಅವಧಿಯಲ್ಲಿ ಡಿಡಿಯುಟಿಟಿಎಲ್ ನಿಗಮದಲ್ಲಿ ಗುತ್ತಿಗೆ ನೀಡಿಕೆಯಲ್ಲಿ ಅಕ್ರಮ ನಡೆದಿದೆ ಎಂದು ವಿಲ್ಸನ್ ಗಾರ್ಡನ್ ಠಾಣೆಗೆ ಹಾಲಿ ವ್ಯವಸ್ಥಾಪಕ ನಿರ್ದೇಶಕ ಸಿ ಎನ್ ಶಿವಪ್ರಕಾಶ್ ದೂರು ನೀಡಿದ್ದರು. ಈ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಅಂತೆಯೇ ತನಿಖೆಗಿಳಿದ ಸಿಐಡಿ ಅಧಿಕಾರಿಗಳು ಶುಕ್ರವಾರ ಅವರನ್ಜು ಬಂಧಿಸಿದ್ದಾರೆ.
2021ರಿಂದ 2023ರ ನಡುವೆ ಡಿ ಎಸ್ ವೀರಯ್ಯ ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದ ಅಧ್ಯಕ್ಷರಾಗಿದ್ದಾಗ 55 ಕೋಟಿ ರೂಪಾಯಿ ಅಕ್ರಮ ಎಸಗಿರುವ ಆರೋಪ ಡಿ ಎಸ್ ವೀರಯ್ಯ ಮೇಲೆ ಕೇಳಿ ಬಂದಿದೆ.
ತುಂಡು ಗುತ್ತಿದೆ ಆಧಾರದಲ್ಲಿ ಅಕ್ರಮ ನಡೆದಿರುವ ಬಗ್ಗೆ ದೂರು ನೀಡಲಾಗಿತ್ತು. ಆ ಸಂಬಂಧ 2023 ಸೆಪ್ಟೆಂಬರ್ 23ರಂದು ಭಾರತೀಯ ದಂಡ ಸಂಹಿತೆ 1860(ಐಸಿಸಿ) ಕಲಂ 120ಬಿ, 409, 420, 465, 468 ಮತ್ತು 471ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಬಳಿಕ ವೀರಯ್ಯ ಅವರು ಕ್ರಿಮಿನಲ್ ಮಿಸಲೇನಿಯಸ್ ಅರ್ಜಿಯನ್ನು ಅರ್ಜಿಯನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್, ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.