ತುಮಕೂರು | ರಾಜ್ಯ ಸರ್ಕಾರದಿಂದ ರೈತ ವಿರೋಧಿ ನೀತಿ; ಜು.18 ರಂದು ರೈತ ಸಂಘದಿಂದ ರಾಜ್ಯಾದ್ಯಂತ ಪ್ರತಿಭಟನೆ

Date:

Advertisements

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ, ಪರಿಶಿಷ್ಟ ವರ್ಗಕ್ಕೆ ಮೀಸಲಿಟ್ಟ ಸುಮಾರು 187 ಕೋಟಿ ಹಣದ ದುರುಪಯೋಗವನ್ನು ಖಂಡಿಸಿ, ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆ ರದ್ದು ಮಾಡಲು ಒತ್ತಾಯಿಸಿ ಜುಲೈ 18ರ ಮಂಗಳವಾರ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದರು.

ತುಮಕೂರು ತಾಲೂಕಿನ ಹೆಬ್ಬೂರಿನ ಕೆ.ಎಸ್.ಪುಟ್ಟಣ್ಣಯ್ಯ ರೈತ ಭವನದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, “ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ, ರೈತರಿಗೆ ಮಾರಕವಾಗಿರುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ಗೋ ಹತ್ಯೆ ನಿಷೇಧ ಕಾಯ್ದೆ ವಾಪಸ್ ಸೇರಿದಂತೆ ಕೊಟ್ಟ ಮಾತಿಗೆ ತಪ್ಪಿದೆ. ಅಲ್ಲದೇ, ಸರ್ಕಾರದ ನೀತಿಗಳಿಂದಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಇವುಗಳನ್ನು ತಡೆಯುವ ನಿಟ್ಟಿನಲ್ಲಿ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಸರಕಾರವನ್ನು ಮತ್ತೊಮ್ಮೆ ಎಚ್ಚರಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ರೈತ ಸಂಘದ ಕಾರ್ಯಕರ್ತರು ಜುಲೈ 18ರ ಮಂಗಳವಾರ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಿದ್ದಾರೆ” ಎಂದರು.

ತುಮಕೂರು ಜಿಲ್ಲೆಯೂ ಸೇರಿದಂತೆ ರಾಜ್ಯದಲ್ಲಿ ಅರಣ್ಯ ಇಲಾಖೆ ಮತ್ತು ಬಗರ್ ಹುಕ್ಕಂ ಸಾಗುವಳಿದಾರರ ನಡುವಿನ ಸಂಘರ್ಷ ಹೆಚ್ಚಾಗಿದೆ. ಹತ್ತಾರು ವರ್ಷಗಳಿಂದಲೂ ಭೂಮಿ ಉಳುಮೆ ಮಾಡುತ್ತಾ ಬಂದಿದ್ದರೂ ಒಂದಿಲ್ಲೊಂದು ಕಾರಣ ನೀಡಿ, ಸಾಗುವಳಿ ಚೀಟಿ ನೀಡುತ್ತಿಲ್ಲ. ಅಲ್ಲದೇ, ವಿವಿಧ ಕಾರಣಗಳಿಂದ ರಾಜ್ಯದಲ್ಲಿ ಕಳೆದ ಏಪ್ರಿಲ್‌ನಿಂದ ಇಲ್ಲಿಯವರೆಗೂ 1182 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಯುವ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆತ್ಮಹತ್ಯೆಗೆ ಶರಣಾಗುತ್ತಿರುವುದು ದೊಡ್ಡ ಆತಂಕ ಸೃಷ್ಟಿಸಿದೆ. ಕೃಷಿ ಉತ್ಪನ್ನಗಳಿಗೆ ಸಮರ್ಪಕ ಬೆಲೆ ಸಿಗದಿರುವುದು ರೈತರ ಆತ್ಮಹತ್ಯೆಯ ಹಿಂದಿನ ಪ್ರಮುಖ ಕಾರಣವಾಗಿದೆ. ಇದನ್ನು ತಡೆಯಲು ಸರ್ಕಾರ ಕೃಷಿ ಬೆಲೆ ನಿಗದಿ ಆಯೋಗದ ಶಿಫಾರಸ್ಸುಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಬರಗಾಲದ ನಡುವೆಯೂ ಬ್ಯಾಂಕುಗಳು ಸಾಲ ವಸೂಲಿಗೆ ರೈತರ ಜಮೀನುಗಳನ್ನು ಹರಾಜು ಹಾಕುತ್ತಿರುವುದು ಮುಂದುವರೆದಿದೆ. ಇದು ನಿಲ್ಲಬೇಕು ಎಂಬುದು ರೈತ ಸಂಘದ ಪದಾಧಿಕಾರಿಗಳ ಒಕ್ಕೊರಲ ಒತ್ತಾಯವಾಗಿದೆ ಎಂದು ಗೋವಿಂದರಾಜು ತಿಳಿಸಿದರು.

Advertisements

ರಾಜ್ಯದ ಹಾಗೂ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘದ ಜುಲೈ 18ರ ಮಂಗಳವಾರ ಕರೆದಿರುವ ರಾಜ್ಯಾದ್ಯಂತ ಪ್ರತಿಭಟನೆಯಲ್ಲಿ ರೈತರು,ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸರಕಾರಕ್ಕೆ ಒಂದು ಸ್ಪಷ್ಟ ಸಂದೇಶ ನೀಡಬೇಕೆಂಬುದು ರಾಜ್ಯ ರೈತ ಸಂಘದ ಮನವಿಯಾಗಿದೆ ಎಂದು ಎ.ಗೋವಿಂದರಾಜು ತಿಳಿಸಿದರು.

ರೈತ ಸಂಘ 1 2

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಶಂಕರಪ್ಪ ಮಾತನಾಡಿ, “ಪಹಣಿ, ದುರಸ್ತಿ, ಪಕ್ಕಾಪೋಡು, ಹದ್ದುಬಸ್ತು, ನೋಂದಣಿ ಶುಲ್ಕ ಎಲ್ಲವೂ ದುಬಾರಿಯಾಗಿದೆ. ಕೂಡಲೇ ವಾಪಸ್ ಪಡೆಯಬೇಕು. ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು. ಹೈನುಗಾರರಿಗೆ ಕಡಿತ ಮಾಡಿರುವ ಹಾಲಿನ ದರವನ್ನು ಮರು ಸ್ಥಾಪಿಸಬೇಕು. ನ್ಯಾಪೆಡ್ ಮೂಲಕ ಖರೀದಿಸಿರುವ ರಾಗಿ, ಕೊಬ್ಬರಿಯ ಪ್ರೋತ್ಸಾಹ ದನ ಬಿಡುಗಡೆ ಮಾಡಬೇಕು, ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗೆ ಭೂಮಿ ಕಳೆದುಕೊಂಡಿರುವ ರೈತರಿಗೆ ವೈಜ್ಞಾನಿಕ ಪರಿಹಾರ ನೀಡಬೇಕು ಎಂಬುದು ರೈತ ಸಂಘದ ಆಗ್ರಹವಾಗಿದೆ. ಇದರ ಜೊತೆಗೆ, ತುಮಕೂರು ಜಿಲ್ಲೆಗೆ ಮಾರಕವಾಗಿರುವ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಯನ್ನು ರದ್ದು ಮಾಡಬೇಕೆಂಬುದು ಜಿಲ್ಲೆಯ ರೈತರ ಆಗ್ರಹವಾಗಿದೆ” ಎಂದರು.

 

ಇದನ್ನು ಓದಿದ್ದೀರಾ? ಚಿಕ್ಕನಾಯಕನಹಳ್ಳಿ | ದಾಖಲೆ ಮಾಡಿಸಿಕೊಳ್ಳಲು ಅಲೆಮಾರಿ ಕುಟುಂಬಗಳ ಪರದಾಟ; ಕೇಳೋರಿಲ್ಲ ಇವರ ಕಷ್ಟ!

ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ತಾಲೂಕು ಅಧ್ಯಕ್ಷರುಗಳಾದ ಚಿಕ್ಕಬೋರೇಗೌಡ, ವೆಂಕಟೇಗೌಡ, ಲೋಕೇಶ್, ಶಬ್ಬೀರ್ ಅಹಮದ್, ಶ್ರೀನಿವಾಸ್, ತಿಮ್ಮೇಗೌಡ, ಮಹಿಳಾ ಘಟಕದ ಅಧ್ಯಕ್ಷೆ ನಾಗರತ್ನಮ್ಮ, ರವೀಶ್, ಲೋಕೇಶ್ ಹಾಗೂ ಎಲ್ಲ ತಾಲೂಕು ಪ್ರತಿನಿಧಿಗಳು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X