ರಾಜ್ಯಾದ್ಯಂತ ಡೆಂಘೀ ಅಟ್ಟಹಾಸ ಮೆರೆಯುತ್ತಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದ ಯಶಸ್ವಿನಿ(19) ಎಂಬ ವಿದ್ಯಾರ್ಥಿನಿ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾಳೆ.
ಕೆಲ ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಶುಕ್ರವಾರ ಸಂಜೆ ಸಾವನ್ನಪ್ಪಿದ್ದಾಳೆ ಎಂದು ವರದಿಯಾಗಿದೆ. ಜಿಲ್ಲೆಯಲ್ಲಿ ಡೆಂಘೀ ಜ್ವರಕ್ಕೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ.
