ಮುಡಾ ಹಗರಣ | ದೇವೇಗೌಡರ ಮೇಲೆ ಬಿಎಸ್‌ವೈ ಗುರುತರ ಆರೋಪ, ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯಿಸಲಿ: ರಮೇಶ್‌ ಬಾಬು

Date:

Advertisements

ಮೈಸೂರಿನ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ 2011 ಮಾರ್ಚ್‌ 3ರಂದು ಅಂದಿನ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ವಿಧಾನ ಪರಿಷತ್ತಿನ ಸಭಾಪತಿಗಳಿಗೆ ದಾಖಲೆಗಳನ್ನು ಸಲ್ಲಿಕೆ ಮಾಡಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ತಮ್ಮ ಕುಟುಂಬಕ್ಕೆ 48 ನಿವೇಶನಗಳ ಹಂಚಿಕೆ ಮಾಡಿರುವುದನ್ನು ಪ್ರಸ್ತಾಪಿಸಿದ್ದಾರೆ. ಅವರ ಅಷ್ಟು ಆರೋಪಗಳು ವಿಧಾನ ಪರಿಷತ್ತಿನ ನಡವಳಿಕೆಗಳಲ್ಲಿ ದಾಖಲಾಗಿದ್ದು, ಈ ಬಗ್ಗೆ ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯಿಸುವುದೇ ಎಂದು ಮಾಜಿ ಎಂಎಲ್‌ಸಿ ರಮೇಶ್‌ ಬಾಬು ಸವಾಲು ಹಾಕಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಯಡಿಯೂರಪ್ಪ ಆರೋಪದಲ್ಲಿ ಎಚ್. ಡಿ ಕುಮಾರಸ್ವಾಮಿ ರವರಿಗೆ 300 x 200 ಅಡಿ ಅಳತೆಯ (ಸುಮಾರು 60,000 ಅಡಿ) ನಿವೇಶನ ಸಂಖ್ಯೆ.17(ಬಿ) ಹಂಚಿಕೆಯಾಗಿರುವುದಾಗಿ ಹೇಳಿದ್ದಾರೆ. ಅದೇ ರೀತಿ ಅವರ ಕುಟುಂಬದ ಸವಿತಾ Co/ ಬೀರೇಗೌಡ ಎಂಬುವರಿಗೆ 130x 110 ಅಡಿ (ಸುಮಾರು 14,300 ಅಡಿ) ಅಕ್ರಮ ಹಂಚಿಕೆಯ ಕುರಿತು ಆರೋಪ ಮಾಡಿದ್ದಾರೆ. ಇದರ ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯಿಸಲಿ” ಎಂದು ಆಗ್ರಹಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಮಾತನಾಡುವಾಗ ಬಿ ಎಸ್ ಕೆ ಮೈನಿಂಗ್ ಕಂಪನಿಯಿಂದ ದೇವೇಗೌಡರ ಕುಟುಂಬದವರಿಗೆ 167 ಕೋಟಿ ಜಮಾ ಆಗಿದೆ ಎಂದು ಆರೋಪಿಸಿದ್ದಾರೆ. ಮುಂದುವರೆದು ಜಂಥ್ಯಾಂಕ್ಸ್ ಜಂತ್ ಕಲ್ ಎಂಟರ್ಪ್ರೈಸಸ್ ಗೆ 40 ವರ್ಷ ನವೀಕರಣ ಮಾಡಿ ಅದರಲ್ಲಿ ಇವರ ಕುಟುಂಬದವರು ಪಾರ್ಟ್‌ನರ್ ಇದ್ದಾರೆ ಎಂದು ಆರೋಪಿಸಿದ್ದಾರೆ. ತಾವು ಮಾಡಿದ ಆರೋಪಗಳಿಗೆ ಪೂರಕವಾಗಿ ದಾಖಲೆಗಳನ್ನು ಸಭಾಪತಿಗಳಿಗೆ ಸದನದಲ್ಲಿ ಮಂಡಿಸಿದ್ದಾರೆ” ಎಂದು ವಿವರಿಸಿದ್ದಾರೆ.

Advertisements

ಯಡಿಯೂರಪ್ಪನವರು ಸದನದಲ್ಲಿ ಮುಡಾ ಅಕ್ರಮ ನಿವೇಶನ ಹಂಚಿಕೆ ಕುರಿತು ದೇವೇಗೌಡರ ಕುಟುಂಬದ ಮೇಲೆ ಮಾಡಿರುವ ಗಂಭೀರ ಆರೋಪದ ಮೇಲೆ ತನಿಖೆಗೆ ಒತ್ತಾಯಿಸಲು ತಾಕತ್ತು ಇದೆಯೇ? ಯಡಿಯೂರಪ್ಪನವರು ದಾಖಲೆಗಳನ್ನು ಸಭಾಪತಿಗಳಿಗೆ ಮಂಡಿಸಿದರೂ ಇಲ್ಲಿಯವರೆಗೆ ಬಿಜೆಪಿ ಯಾವ ಕಾರಣಕ್ಕೆ ಮೌನವಾಯಿತು” ಎಂದು ಪ್ರಶ್ನಿಸಿದ್ದಾರೆ.

“ಅವಕಾಶವಾದದ ರಾಜಕಾರಣ ಮತ್ತು ಅನುಕೂಲ ಸಿಂಧು ರಾಜಕಾರಣಕ್ಕೆ ಶರಣಾಗಿರುವ ಬಿಜೆಪಿ ಮುಡಾ ಹಗರಣದಲ್ಲಿ ಯಾವ ಯಾವ ಬಿಜೆಪಿ ನಾಯಕರು ಎಷ್ಟು ಎಷ್ಟು ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎಂಬುದನ್ನು ಬಹಿರಂಗಗೊಳಿಸಲಿ. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಮೈಸೂರಿನ ಮುಡಾ ದಲ್ಲಿ ಹೆಚ್ಚು ಹಗರಣಗಳು ನಡೆದಿರುತ್ತವೆ” ಎಂದಿದ್ದಾರೆ.

ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪರಿಹಾರ ರೂಪದಲ್ಲಿ ಭೂ ಮಾಲೀಕರಿಗೆ ನಿವೇಶನ ನೀಡಿರುವುದನ್ನು ಬಿಜೆಪಿ ರಾಜಕೀಯ ಕಾರಣಕ್ಕಾಗಿ ಆರೋಪ ಮಾಡುತ್ತಿದೆ. ಆದರೆ ಯಾವುದೇ ಭೂಮಿಯನ್ನು ಕಳೆದುಕೊಳ್ಳದೆ ತಮ್ಮ ರಾಜಕೀಯ ಪ್ರಭಾವದ ಮೂಲಕ ಒಂದೇ ಕುಟುಂಬ 48 ನಿವೇಶನಗಳನ್ನು ಪಡೆದುಕೊಂಡ ಅಕ್ರಮ ಕುರಿತು ಬಿಜೆಪಿ ಚಕಾರ ಎತ್ತುವುದಿಲ್ಲ. ಅದೇ ರೀತಿ ಒಬ್ಬನೇ ವ್ಯಕ್ತಿಗೆ ಯಾವ ಆಧಾರದ ಮೇಲೆ 60 ಸಾವಿರ ಅಡಿ ಅಳತೆಯ ನಿವೇಶನ ಮಂಜೂರಾಗಿತ್ತು? ಸದನದ ಒಳಗೆ ದಾಖಲೆಯಿಟ್ಟು ಮಾತನಾಡಿದ ಯಡಿಯೂರಪ್ಪನವರಿಗೆ ಸಾರ್ವಜನಿಕವಾಗಿ ಮಾತನಾಡಲು ಸಾಧ್ಯವಾಗುತ್ತಿಲ್ಲ ಏಕೆ” ಎಂದು ರಮೇಶ್‌ ಬಾಬು ಕೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X