ಶನಿವಾರ ಮುಂಜಾನೆ ದೆಹಲಿಯ ಕೆಲವು ಭಾಗಗಳಲ್ಲಿ ಮಳೆಯು ಜನರಿಗೆ ಬಿಸಿಲಿನ ತಾಪದಿಂದ ಮುಕ್ತಿ ನೀಡಿದರೆ ಮುಂಬೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್ ಘೋಷಿಸಿದೆ.
ದೆಹಲಿಯಲ್ಲಿ ಇಂದು ದಿನವಿಡೀ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುವ ನಿರೀಕ್ಷೆಯಿದ್ದು, ಬೆಳಿಗ್ಗೆಯಿಂದಲೇ ಕೆಲವೆಡೆ ಮಳೆಯಾಗುತ್ತಿದೆ. ಆದರೆ ಮುಂಬೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಹಲವಾರು ಪ್ರದೇಶಗಳು ಜಲಾವೃತಗೊಂಡಿದೆ.
ದೆಹಲಿಯ ಬಾರಾಪುಲ್ಲಾ ಮೇಲ್ಸೇತುವೆಯಲ್ಲಿ ಜಲಾವೃತವಾದ ರಸ್ತೆಗಳಲ್ಲಿ ವಾಹನಗಳು ನಿಧಾನವಾಗಿ ಸಂಚರಿಸುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಜನಪಥ್ ತುಂತುರು ಮಳೆಗೆ ಸಾಕ್ಷಿಯಾಗಿದೆ.
#WATCH | Waterlogging witnessed in several parts of Delhi after the rainfall.
Visuals from Barapullah flyover. pic.twitter.com/hYnBFn25wI
— ANI (@ANI) July 13, 2024
ಶನಿವಾರ ಮತ್ತು ಭಾನುವಾರದಂದು ದೆಹಲಿ ಮತ್ತು ನೋಯ್ಡಾದಲ್ಲಿ ಮೋಡ ಕವಿದ ವಾತಾವರಣವಿದ್ದು ಲಘು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಜುಲೈ 17ರವರೆಗೆ ಸಾಧಾರಣ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಇದನ್ನು ಓದಿದ್ದೀರಾ? ಕರಾವಳಿ-ಮಲೆನಾಡಿನಲ್ಲಿ ಮಳೆ ಅಬ್ಬರ; ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್
ಮುಂಬೈನಲ್ಲಿ, ಭಾರೀ ಮಳೆಯಿಂದಾಗಿ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಪ್ರವಾಹದಿಂದಾಗಿ ಅಂಧೇರಿ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಜನರು ತೀರಾ ಅಗತ್ಯವಿದ್ದರೆ ಮಾತ್ರ ಪ್ರಮಾಣ ಮಾಡುವಂತೆ ಬಿಎಂಸಿ ಸೂಚಿಸಿದೆ.
#WATCH | Maharashtra: Rain lashes parts of Mumbai.
Visuals from Eastern Express Highway. pic.twitter.com/c9xVnufHid
— ANI (@ANI) July 13, 2024
ಈ ನಡುವೆ ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಮಳೆಯು ಮುಂದುವರಿದಿದೆ. 15 ರಸ್ತೆಗಳನ್ನು ಮುಚ್ಚಲಾಗಿದ್ದು ಮಂಡಿ, ಶಿಮ್ಲಾ ಮತ್ತು ಕಾಂಗ್ರಾ ಜಿಲ್ಲೆಗಳಲ್ಲಿ 47 ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಸಮಸ್ಯೆ ಉಂಟಾಗಿದೆ.
ಕೇರಳದಲ್ಲಿ ಭಾರೀ ಮಳೆಯಾಗಿದ್ದು, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮತ್ತು ಇತರ ಒಂಬತ್ತು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
#WATCH | Kerala: Heavy rain lashes parts of Thiruvananthapuram. pic.twitter.com/2lOpovnXGC
— ANI (@ANI) July 13, 2024
ಉತ್ತರ ಗುಜರಾತ್ ಮತ್ತು ಪಶ್ಚಿಮ ಮಧ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದಿಂದಾಗಿ ಮುಂದಿನ ಐದು ದಿನಗಳಲ್ಲಿ ಭಾರೀ ಮಳೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಬೀಸಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಬಿಹಾರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಸಸಾರಾಮ್‌ನ ಜಲಪಾತದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ರಾಜ್ಯದ ವಾಯುವ್ಯ ಮತ್ತು ದಕ್ಷಿಣ ಭಾಗಗಳಲ್ಲಿ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.
VIDEO | Heavy rainfall triggered flood in the waterfall of Maa Tutla Bhawani Dham in Bihar’s Sasaram.
(Full video available at PTI Videos – https://t.co/dv5TRARJn4) pic.twitter.com/cBb4SsLyCS
— Press Trust of India (@PTI_News) July 13, 2024