ತಮಿಳುನಾಡಿನ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಮುಖ್ಯಸ್ಥ ಕೆ ಆರ್ಮ್ಸ್ಟ್ರಾಂಗ್ ಹತ್ಯೆಯ ಆರೋಪಿಗಳಲ್ಲಿ ಒಬ್ಬನನ್ನು ಶನಿವಾರ ರಾತ್ರಿ ಎನ್ಕೌಂಟರ್ನಲ್ಲಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡಿನ ಬಿಎಸ್ಪಿ ರಾಜ್ಯಾಧ್ಯಕ್ಷರ ಹತ್ಯೆಯಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಹಿಸ್ಟರಿ ಶೀಟರ್ ತಿರುವೆಂಗಡಂ ಅನ್ನು ಚೆನ್ನೈನ ಮಾಧವರಂ ಬಳಿ ಪೊಲೀಸ್ ಎನ್ಕೌಂಟರ್ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಆರ್ಮ್ಸ್ಟ್ರಾಂಗ್ ಕೊಲೆಗೂ ಮುನ್ನ ತಿರುವೆಂಗಡಂ ಆರ್ಮ್ಸ್ಟ್ರಾಂಗ್ ಅವರ ಚಟುವಟಿಕೆಗಳ ಮೇಲೆ ನಿರಂತರ ನಿಗಾ ಇರಿಸಿಕೊಂಡು ಹಲವು ದಿನಗಳ ಕಾಲ ಅವರನ್ನು ಹಿಂಬಾಲಿಸುತ್ತಿದ್ದ ಎಂದು ವರದಿಯಾಗಿದೆ.
ಬಹುಜನ ಸಮಾಜ ಪಕ್ಷ ತಮಿಳುನಾಡು ರಾಜ್ಯಾಧ್ಯಕ್ಷರನ್ನು ಜುಲೈ 5ರಂದು ಚೆನ್ನೈನ ಅವರ ಮನೆಯ ಸಮೀಪವೇ ಬೈಕ್ನಲ್ಲಿ ಬಂದ ಆರು ಮಂದಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ.
Key accused in BSP leader K Armstrong murder case shot dead by police in Chennai.
K Thiruvengadam was taken to a location in north Chennai as part of the investigation and he was shot after he allegedly attacked the police, they claim.https://t.co/9BNZDESok8
— Anusha Ravi Sood (@anusharavi10) July 14, 2024
ಇದನ್ನು ಓದಿದ್ದೀರಾ? ತಮಿಳುನಾಡು ಬಿಎಸ್ಪಿ ರಾಜ್ಯಾಧ್ಯಕ್ಷರ ಹತ್ಯೆ; ಸಿಬಿಐ ತನಿಖೆಗೆ ಮಾಯಾವತಿ ಆಗ್ರಹ
ಆರ್ಮ್ಸ್ಟ್ರಾಂಗ್ ಅವರು ನಗರದ ಸೇಂಬಿಯಂ ಪ್ರದೇಶದಲ್ಲಿರುವ ತನ್ನ ಮನೆಯ ಬಳಿ ಬಿಎಸ್ಪಿಯ ಕೆಲವು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸುತ್ತಿದ್ದಾಗ ಆರು ಜನರು ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಕುಟುಂಬಸ್ಥರು ಆರ್ಮ್ಸ್ಟ್ರಾಂಗ್ ಅವರನ್ನು ಕರೆದೊಯ್ದಿದ್ದು, ಆದರೆ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಕನಿಷ್ಠ 11 ಶಂಕಿತರನ್ನು ಬಂಧಿಸಲಾಗಿದೆ. ಈ ಪೈಕಿ ಓರ್ವ ಆರೋಪಿಯ ಎನ್ಕೌಂಟರ್ ನಡೆದಿದೆ.
ಈ ಹತ್ಯೆಯು ರಾಜ್ಯದಲ್ಲಿ ದೊಡ್ಡ ರಾಜಕೀಯ ತಲ್ಲಣವನ್ನು ಉಂಟು ಮಾಡಿದೆ. ವಿರೋಧ ಪಕ್ಷಗಳು ಎಂಕೆ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರವನ್ನು ಗುರಿಯಾಗಿಸಿಕೊಂಡಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ವೈಫಲ್ಯ ಕಂಡು ಬರುತ್ತದೆ ಎಂದು ಆರೋಪಿಸಿವೆ.
ಬಿಎಸ್ಪಿ ವರಿಷ್ಠೆ ಮಾಯಾವತಿ ಅವರು ಆರ್ಮ್ಸ್ಟ್ರಾಂಗ್ ಹತ್ಯೆಯ ಕುರಿತು ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಇದುವರೆಗೆ ಬಂಧಿಸಲ್ಪಟ್ಟವರು ನಿಜವಾದ ಅಪರಾಧಿಗಳಲ್ಲ ಎಂದು ಹೇಳಿದ್ದಾರೆ.
ಈ ನಡುವೆ ಸ್ಟಾಲಿನ್ ಆರ್ಮ್ಸ್ಟ್ರಾಂಗ್ ಅವರ ಕುಟುಂಬವನ್ನು ಭೇಟಿ ಮಾಡಿದರು. ನ್ಯಾಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಬಿಎಸ್ಪಿ ನಾಯಕನ ಪತ್ನಿ ಮತ್ತು ಇತರ ಕುಟುಂಬ ಸದಸ್ಯರಿಗೆ ಸಂತಾಪ ವ್ಯಕ್ತಪಡಿಸಿದ ಸ್ಟಾಲಿನ್, “ಭೀಕರ ಹತ್ಯೆಯಲ್ಲಿ ಭಾಗಿಯಾದ ಎಲ್ಲರಿಗೂ ಕಾನೂನಿನ ಪ್ರಕಾರ ಶಿಕ್ಷೆಯಾಗಲಿದೆ” ಎಂದು ಭರವಸೆ ನೀಡಿದರು.